ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಉಡುಪಿಯ ಜೋಡುಕಟ್ಟೆಯಿಂದ ರಥಬೀದಿಯವರೆಗೆ ಮೆರವಣಿಗೆ ಮೂಲಕ ರಥವನ್ನು ರಾಜಾಂಗಣಕ್ಕೆ ತರಲಾಯಿತು.ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಪುಷ್ಪಾರ್ಚನೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ವೈಭವದ ಮೆರವಣಿಗೆಯಲ್ಲಿ ಪುತ್ತಿಗೆ ವಿದ್ಯಾಪೀಠದ ವಿದ್ಯಾರ್ಥಿಗಳು, ಸಂಸ್ಕೃತ ಕಾಲೇಜು ತಂಡದಿಂದ ವೇದಘೋಷ, ಬಿರುದಾವಳಿ, ವಿವಿಧ ಬಗೆಯ ಆಕರ್ಷಕ ಸ್ತಬ್ಧ ಚಿತ್ರಗಳು, […]
ಉಡುಪಿ:ಡಿ.29 ರಂದು ವಿಶ್ವ ಮಾನವ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟçಕವಿ ಕುವೆಂಪು ರವರ ಜಯಂತಿ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 29 ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಜನತಾ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. […]
ಉಡುಪಿ:ಫೆಲೋಶಿಪ್ : ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದಮಾಸಿಕ ವ್ಯಾಸಾಂಗ ವೇತನ / ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ /ಅಧೀನಕ್ಕೆ ಒಳಫಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ ಅಧ್ಯಯನ ಮಾಡುತ್ತಿರುವಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ 2026 ರ ಜನವರಿ 9 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. […]
ಉಡುಪಿ: ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್’ಗೆ ಡಿಕ್ಕಿ; ಸ್ಕೂಟರ್ ಸವಾರ ಮೃತ್ಯು

ಶಿರ್ವ: ಮುದರಂಗಡಿಯಿಂದ ತನ್ನ ಮನೆಗೆ ಸ್ಕೂಟರ್‌ನಲ್ಲಿ ಬರುತ್ತಿದ್ದ ಯುವಕನೋರ್ವ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿಯೇ ಮೃತಪಟ್ಟ ಘಟನೆ ಡಿ. 26 ರ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಕುತ್ಯಾರು ಕೇಂಜ ಹಿತ್ಲು ನಿವಾಸಿ ಜೋಸ್ವಿನ್ ಡಿಸೋಜಾ (22) ಮೃತಪಟ್ಟ ಯುವಕ. ಈತ ಮುದರಂಗಡಿಯಲ್ಲಿ ತಡರಾತ್ರಿಯವರೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಕುತ್ಯಾರಿನ ತನ್ನ ಮನೆಗೆ ಬರುತ್ತಿರುವಾಗ ಕುತ್ಯಾರು ಗೋಳಿಕಟ್ಟೆ ಲಾರೆನ್ಸ್ ಡಿಸೋಜಾ ಅವರ ಮನೆ ಬಳಿ ನಿಯಂತ್ರಣ […]
ಬಾಕ್ಸ್ ಆಫೀಸ್ ನಲ್ಲಿ ‘ಮ್ಯಾಕ್ಸ್’ ಹಾಗೂ ’45’ ಅಬ್ಬರ; ಸಿನೆಮಾ ಕಲೆಕ್ಷನ್ ಎಷ್ಟು?

ಕನ್ನಡ ಚಿತ್ರರಂಗದ ಇಬ್ಬರು ಧ್ರುವತಾರೆಗಳಾದ ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಡುವಿನ ಬಾಕ್ಸ್ ಆಫೀಸ್ ಸಮರ ರಂಗೇರಿದೆ. ಕ್ರಿಸ್‌ಮಸ್ ಸಂಭ್ರಮದ ನಡುವೆ ತೆರೆಕಂಡ ‘ಮಾರ್ಕ್’ ಮತ್ತು ’45’ ಚಿತ್ರಗಳು ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ಪಡೆಯುತ್ತಿದ್ದು, ಮೊದಲ ಎರಡು ದಿನಗಳ ಗಳಿಕೆಯ ವಿವರ ಹೀಗಿದೆ: ವಿಜಯ್ ಕಾರ್ತಿಕೇಯ ನಿರ್ದೇಶನದ, ಅಜನೀಶ್ ಲೋಕನಾಥ್ ಸಂಗೀತವಿರುವ ‘ಮಾರ್ಕ್’ ಸಿನಿಮಾ ಭರ್ಜರಿ ಆರಂಭ ಪಡೆದಿದೆ. ಮೊದಲ ದಿನ (ಗುರುವಾರ): ರಜೆಯ ಲಾಭ ಪಡೆದ ಈ ಚಿತ್ರ ಬರೋಬ್ಬರಿ 7.50 ಕೋಟಿ […]