ಹೊಸ ವರ್ಷ 2026 ಸಂಭ್ರಮಾಚರಣೆ; ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಸೇವೆಗೆ ಸಿದ್ಧತೆ!

ಬೆಂಗಳೂರು: ಹೊಸ ವರ್ಷ ಆಚರಣೆ ವೇಳೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರು ಅಸ್ವಸ್ಥಗೊಳ್ಳುವ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇರುವುದರಿಂದ ಎಲ್ಲಾ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಯ ಸೇವೆ ಒದಗಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ತುರ್ತು ಕರ್ತವ್ಯಕ್ಕಾಗಿ ಜಿಲ್ಲಾ ಮಟ್ಟದ ಎಲ್ಲ ಆಸ್ಪತ್ರೆಗಳಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಮಹಿಳೆಯರಿಗಾಗಿ ಮಹಿಳಾ ಸಿಬ್ಬಂದಿಯನ್ನೇ ನಿಯೋಜಿಸಬೇಕು. […]
ಹೊಸ ವರ್ಷ ಸಂಭ್ರಮಾಚರಣೆ; ವೀಲಿಂಗ್ ಮೇಲೆ ನಿಗಾ, ಮಹಿಳಾ ಸುರಕ್ಷತೆಗೆ ಮುಂಜಾಗ್ರತೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಣ್ಣಾವಲಿಗಾಗಿ ಬೆಂಗಳೂರಿನಲ್ಲಿ 20 ಸಾವಿರ, ಜಿಲ್ಲೆಗಳಿಗೆ ತಲಾ 1,200 ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹೊಸ ವರ್ಷಾಚರಣೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯ ಇರುವ ಸ್ಥಳಗಳಲ್ಲಿ ಮಹಿಳಾ ಪೊಲೀಸರನ್ನು ನಿಯೋಜನೆ ಮಾಡಬೇಕು. ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವೀಲಿಂಗ್ ಮಾಡುವುದಕ್ಕೆ ಅವಕಾಶ ನೀಡಬಾರದು. ಮಾದಕ […]
ಏ.29 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

ಉಜಿರೆ (ದಕ್ಷಿಣ ಕನ್ನಡ): ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏ.29ರಂದು ಸಂಜೆ 6.40ಕ್ಕೆ ಗೋಧೂಳಿ ಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 2ನೇ ವಿವಾಹಕ್ಕೆ ಅವಕಾಶವಿಲ್ಲ. ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರ ನೀಡಲಾಗುವುದು. ಮದುವೆಯ ಸಂಪೂರ್ಣ ವೆಚ್ಚವನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸುತ್ತದೆ. ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, […]
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ನಿಧನ

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಅಧ್ಯಕ್ಷೆ ಖಲೀದಾ ಜಿಯಾ ಮಂಗಳವಾರ ನಿಧನರಾಗಿದ್ದಾರೆ. ಬಿಎನ್‌ಪಿ ಅಧ್ಯಕ್ಷೆ ಮತ್ತು ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಇನ್ನಿಲ್ಲ ಎಂದು ಬಿಎನ್‌ಪಿ ಅಧ್ಯಕ್ಷೆ ಪತ್ರಿಕಾ ವಿಭಾಗ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ಪಕ್ಷ ತಿಳಿಸಿದೆ. ಖಲೀದಾ ಜಿಯಾ ಡಿಸೆಂಬರ್ 30, 2025 ರಂದು ಬೆಳಿಗ್ಗೆ 6.00 ಗಂಟೆಗೆ ರಾಜಧಾನಿ ಢಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು. ಅವರ ಸಾವಿನ ಸುದ್ದಿಯನ್ನು ಅವರ ವೈಯಕ್ತಿಕ […]
ಉಡುಪಿ:ಕುವೆಂಪುರವರ ವಿಶ್ವ ಮಾನವ ಸಂದೇಶ ಪರಿಕಲ್ಪನೆ ಸಮಾಜ ಸುಧಾರಣೆಗೆ ದಾರಿ : ಎಂ.ಎ.ಗಫೂರ್

ಉಡುಪಿ: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ರಾಷ್ಟçಕವಿ ಕುವೆಂಪು ರವರು, ಡಾ.ಬಿ.ಆರ್ ಅಂಬೇಡ್ಕರ್, ಬಸವಣ್ಣ, ಬುದ್ದ ಸೇರಿದಂತೆ ಮತ್ತಿತರ ಮಹನೀಯರ ಆಚಾರ-ವಿಚಾರಧಾರೆಗಳನ್ನು ಹೊಸ ರೂಪದಲ್ಲಿ ನಾಡಿಗೆ ಪರಿಚಯಿಸಿ, ಎಲ್ಲಾ ಧರ್ಮಗಳು ಒಂದೇ, ಸಮಾಜದಲ್ಲಿ ಪ್ರತಿಯೊಬ್ಬರೂ ಸಾಮರಸ್ಯದಿಂದ ಜೀವನ ನಡೆಸಬೇಕು ಎಂಬ ಆಶಯದೊಂದಿಗೆ ಜಗತ್ತಿಗೆ ಸಾರಿದ ವಿಶ್ವ ಮಾನವ ಸಂದೇಶ ಪರಿಕಲ್ಪನೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಸಮಾಜ ಸುಧಾರಣೆ ಸಾಧ್ಯ ಎಂದು ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದರು. ಅವರು ಸೋಮವಾರ ಉಡುಪಿಯ ಸರಕಾರಿ ಪದವಿ […]