ಆರ್​ಸಿಬಿಗೆ ದೊಡ್ಡ ಆಘಾತ: ಡಬ್ಲ್ಯುಪಿಎಲ್​ನಿಂದ ಹಿಂದೆ ಸರಿದ ಎಲ್ಲಿಸ್ ಪೆರ್ರಿ.!

ಮಹಿಳಾ ಪ್ರೀಮಿಯರ್​ ಲೀಗ್ ನಾಲ್ಕನೇ ಆವೃತ್ತಿ ಮುಂದಿನ ವರ್ಷ ಅಂದರೆ 2026 ರ ಜನವರಿ 9 ರಿಂದ ಆರಂಭವಾಗಲಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಚಾಂಪಿಯನ್ ಆಟಗಾರ್ತಿ ಆಸ್ಟ್ರೇಲಿಯಾದ ಸ್ಟಾರ್ ಆಲ್​ರೌಂಡರ್ ಎಲ್ಲಿಸ್ ಪೆರ್ರಿ ಮುಂದಿನ ಆವೃತ್ತಿಯ ಡಬ್ಲ್ಯುಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಮುಂದಿನ ಆವೃತ್ತಿಯ ಡಬ್ಲ್ಯುಪಿಎಲ್​ನಿಂದ […]

ಉಡುಪಿ:ಜ.1 ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವು ಜನವರಿ 01 ರಂದು ಬೆಳಗ್ಗೆ 10.15 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ […]

ಹೊಸ ವರ್ಷ 2026 ಸಂಭ್ರಮಾಚರಣೆ: ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ; ಸಿಎಂ ಮನವಿ

ಬೆಂಗಳೂರು: 2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ– ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ. ಹೀಗಾಗಿ ಹೆಚ್ಚುವರಿ ಗಸ್ತು ವ್ಯವಸ್ಥೆ, ತುರ್ತು ಪ್ರತಿಕ್ರಿಯಾ ಘಟಕ ಹಾಗೂ ಅಗತ್ಯ ಬೆಂಬಲ ವ್ಯವಸ್ಥೆಯೊಂದಿಗೆ ಬೆಂಗಳೂರು ನಗರ ಪೊಲೀಸರು ಸಕಲ ತಯಾರಿ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು, ಜೀವಹಾನಿಯಾಗದಂತೆ ಸಡಗರದಿಂದ ಹೊಸ […]

ಜ.10 – 12: ಪುತ್ತೂರಿನಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ.

ಕರ್ನಾಟಕ ಕೃಷಿ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಇದರ ಸಂಯೋಜನೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳವು ಜನವರಿ 10 ರಿಂದ 12ರವರೆಗೆ ಮೂರು ದಿನಗಳ ಕಾಲ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ವಿವಿಧ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ, ವೈಜ್ಞಾನಿಕ ಕೃಷಿ ಪದ್ಧತಿ, ಕೃಷಿ ಪರಿಕರ ಯಂತ್ರೋಪಕರಣ ಪ್ರದರ್ಶನ ಮತ್ತು ಮಾರಾಟ ಜಾನುವಾರು ಪ್ರದರ್ಶನ, ನರ್ಸರಿ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಸಾಧಕ ರೈತರಿಗೆ, ಕೃಷಿ […]

ರಾಷ್ಟ್ರೀಯ ಹೆದ್ದಾರಿ 169 ಸಾಣೂರು-ಮಾಳ ರಸ್ತೆ ಅಗಲೀಕರಣ: ಭೂಸ್ವಾಧೀನದ ಪರಿಹಾರದಲ್ಲಿ ತಾರತಮ್ಯ – ಭೂಮಾಲಕರ ಆರೋಪ

ಕಾರ್ಕಳ: ರಾಷ್ಟ್ರೀಯ ಹೆದ್ದಾರಿ169ರ ರಸ್ತೆ ಅಗಲೀಕರಣದ ಬಿಕರ್ನಕಟ್ಟೆ-ಸಾಣೂರು ಯೋಜನೆಯ ಸಾಣೂರು- ಮಾಳ ಮುಂದುವರಿದ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದಲ್ಲಿ ಭಾರಿ ತಾರತಮ್ಯ ನಡೆದಿದೆ ಎಂದು ಭೂ ಮಾಲೀಕರು ಆರೋಪ ಮಾಡಿದ್ದಾರೆ. ಕಾರ್ಕಳ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭೂಮಾಲೀಕರ ಪರವಾಗಿ ಪ್ರೇಮಲತಾ ರತ್ನಾಕರ ಶೆಟ್ಟಿಯವರು ಮಾತನಾಡಿದರು. ಸಾಣೂರು ಬಿಕರ್ನಕಟ್ಟೆ ನೀಡಿದ ಪರಿಹಾರವೆ ಸಾಣೂರು ಮಾಳದ ವರೆಗೆ ಪರಿಗಣಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ 169 ಸಾಣೂರು ಮಾಳ ಭೂ ಮಾಲೀಕರ ಹೋರಾಟ ಸಮಿತಿ ಸರಕಾರವನ್ನು ಒತ್ತಾಯಿಸಿದರು. ಸಾಣೂರು -ಮಾಳ […]