ಕಾರ್ಕಳದ ವಿವಿಧ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ

ಕಾರ್ಕಳ: ವಿಧಾನಪರಿಷತ್ ಸದಸ್ಯ, ಶಾಸಕರಾದ ಮಂಜುನಾಥ ಭಂಡಾರಿ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಿವಪುರ, ನಡಪಾಲ್, ಮುದ್ರಾಡಿ,ವರಂಗ ನಿಟ್ಟೆ, ಕಲ್ಯಾ, ನಂದಳಿಕೆ ಹಾಗು ಬೆಳ್ಮಣ್ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಉದಯ್ ಶೆಟ್ಟಿ ಮುನಿಯಾಲು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶುಭೋಧ್ ರಾವ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ […]
100 ಮಿಗ್ರಾಂ ಹೆಚ್ಚು ನಿಮೆಸುಲೈಡ್ ಹೊಂದಿರುವ ಮಾತ್ರೆ ನಿಷೇಧ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ

ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ, ನೋವು ನಿವಾರಕ ನಿಮೆಸುಲೈಡ್ ಬಗ್ಗೆ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. 100 ಮಿಗ್ರಾಂಗಿಂತ ಹೆಚ್ಚು ನಿಮೆಸುಲೈಡ್ ಹೊಂದಿರುವ ಓರಲ್ ನಿಮೆಸುಲೈಡ್ ಮಾತ್ರೆಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. 1940 ರ ಔಷಧಗಳು ಮತ್ತು ಸೌಂದರ್ಯವರ್ಧಕ ಕಾಯ್ದೆಯ ಸೆಕ್ಷನ್ 26A ಅಡಿಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆರೋಗ್ಯ ಸಚಿವಾಲಯದ ಅಧಿಸೂಚನೆಯ ಪ್ರಕಾರ, 100 ಮಿಗ್ರಾಂಗಿಂತ ಹೆಚ್ಚಿನ ಪ್ರಮಾಣವನ್ನು ಹೊಂದಿರುವ ನಿಮೆಸುಲೈಡ್ ಮನುಷ್ಯರಿಗೆ ಅಪಾಯವನ್ನುಂಟುಮಾಡಬಹುದು. ಇದು ಸ್ಟೀರಾಯ್ಡ್ […]
ಉಡುಪಿ:ವಿಕಲಚೇತನರ ಬಸ್ ಪಾಸ್ ನವೀಕರಣ

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತಿದ್ದು, ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಬಸ್ಸು ಪಾಸುಗಳನ್ನು ವಿತರಿಸಿರುತ್ತದೆ. 2025 ನೇ ಸಾಲಿನಲ್ಲಿ ವಿತರಿಸಿರುವ ಸದ್ರಿ ರಿಯಾಯಿತಿ ಬಸ್ಸು ಪಾಸುಗಳ ಅವಧಿಯು ಡಿಸೆಂಬರ್ 31 ಕ್ಕೆ ಮುಕ್ತಾಯಗೊಳ್ಳಲಿದ್ದು, 2026 ನೇ ಸಾಲಿಗಾಗಿ ಈಬಸ್ಸು ಪಾಸುಗಳನ್ನು 2026 ರ ಜನವರಿ 01 ರಿಂದ ನವೀಕರಿಸಲು […]
ಉಡುಪಿ:ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಯ ವತಿಯಿಂದ 2026-27 ನೇ ಸಾಲಿನ ಉದ್ಯೋಗಾದಾರಿತ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿ.ಪಿ.ಟಿ) ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) – 3 ವರ್ಷ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾಗುವವರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತರು ಆನ್‌ಲೈನ್ ರಿಜಿಸ್ಟ್ರೇಷನ್ ಲಿಂಕ್ https://cipet26.onlineregistrationform.org/CIPET/ ಮೂಲಕ […]
ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಕೂಲಿ ಕೆಲಸ ಮಾಡಿಕೊಂಡಿದ್ದ ಉದ್ಯಾವರ ಗ್ರಾಮದ ನಿವಾಸಿ ಲಕ್ಷ್ಮಣ ಛಲವಾದಿ (23) ಎಂಬ ವ್ಯಕ್ತಿಯು ನವೆಂಬರ್ 23 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿಉಡುಪಿ ಪೊಲೀಸ್ ಕಂಟ್ರೋಲ್ ರೂಂ. ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಕಾಪು ಪೊಲೀಸ್ […]