ಕಾಪು: ಉದ್ಯಾವರ ಸೇತುವೆಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ […]
ಮಣಿಪಾಲದ MSDC ಯಲ್ಲಿ ವೃತ್ತಿಪರ ಅವಕಾಶವಿರುವ ಕೋರ್ಸ್ ಗಳಿಗೆ ಪ್ರವೇಶಾತಿ ಶುರು! ಈ ಬೆಸ್ಟ್ ಕೋರ್ಸ್ ಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

ಮಣಿಪಾಲ: ಮಣಿಪಾಲದ ಡಾ. ಟಿ. ಎಂ. ಎ. ಪೈ ಫೌಂಡೇಶನ್‌ನ ಘಟಕವಾದ MSDC ಮಣಿಪಾಲ್ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಹೊಸ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು ನಿಮ್ಮ ಕನಸುಗಳನ್ನು ಇನ್ನಷ್ಟು ಸುಂದರವಾಗಿ ರೂಪಿಸಿಕೊಳ್ಳಲು MSDC ನೀಡುವ ಕೋರ್ಸ್ ಗಳು ನಿಮಗೆ ಬೆಸ್ಟ್ ಆಯ್ಕೆಯಾಗಿದೆ. ಯಾವೆಲ್ಲಾ ಕೋರ್ಸ್ ಗಳು:ನೇಲ್ಸ್ (ನೆಗಡಿ ಆರೈಕೆ)● ಹೇರ್ (ಕೂದಲು ಆರೈಕೆ)● ಸ್ಕಿನ್ (ಚರ್ಮ ಆರೈಕೆ)● ಮೇಕಪ್ (ಅಲಂಕಾರ ಕಲೆ)● ಕಾಸ್ಮೆಟಾಲಜಿ (ಸೌಂದರ್ಯಶಾಸ್ತ್ರ) ಕೋರ್ಸ್ ಗಳಿಗೆ ನೀವು ಪ್ರವೇಶಾತಿ ಪಡೆಯಬಹುದು. ಈ ಎಲ್ಲಾ ಕೋರ್ಸ್ ಗಳು […]
ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಮದರಸಾ ಶಿಕ್ಷಕನಿಗೆ 14 ವರ್ಷ ಜೈಲು ಶಿಕ್ಷೆ!

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮದರಸಾ ಶಿಕ್ಷಕ, ಕಿದೂರು ಬಜಪ್ಪೆ ಕಡವು ನಿವಾಸಿ ಎ.ಅಬ್ದುಲ್ ಹಮೀದ್ (46) ಎಂಬಾತನಿಗೆ ಹೊಸದುರ್ಗ ಪೋಕ್ಸೋ ವಿಶೇಷ ನ್ಯಾಯಾಲಯ 14 ವರ್ಷ ಕಠಿಣ ಸಜೆ ಮತ್ತು ₹40 ಸಾವಿರ ದಂಡ ವಿಧಿಸಿದೆ.2023ರ ನವೆಂಬರ್ ತಿಂಗಳಲ್ಲಿ ಘಟನೆ ನಡೆದಿದ್ದು, ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
ದೇಶದ ಮೊದಲ ‘ಬುಲೆಟ್ ರೈಲು’ 2027ರ ಆಗಸ್ಟ್ 15 ರಂದು ಸಂಚಾರ: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ದೇಶದ ಮೊದಲ ಬುಲೆಟ್ ರೈಲು 2027 ರ ಆಗಸ್ಟ್ 15 ರಂದು ಸಂಚಾರ ಆರಂಭಿಸಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲು ಸೂರತ್‌ನಿಂದ ಬಿಲಿಮೋರಾವರೆಗೆ ತೆರೆಯಲಾಗುತ್ತದೆ. ನಂತರ ವಾಪಿಯಿಂದ ಸೂರತ್‌ವರೆಗೆ ತೆರೆಯಲಾಗುವುದು. ನಂತರದ ಹಂತದಲ್ಲಿ ಅಹಮದಾಬಾದ್, ಥಾಣೆ, ಕೊನೆಗೆ ಮುಂಬೈನಿಂದ ಅಹಮದಾಬಾದ್‌ವರೆಗೆ ಸಂಚರಿಸಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಗುವಾಹಟಿ-ಕೋಲ್ಕತ್ತಾ ಮಾರ್ಗದಲ್ಲಿ ಸಂಚರಿಸಲಿದೆ. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ […]
ಮಗಳಿಗೆ ಕಿರುಕುಳ ನೀಡುತ್ತಿದ್ದ ಅಳಿಯನನ್ನು ರಾಡ್‌ನಿಂದ ಹೊಡೆದು ಬರ್ಬರ ಹತ್ಯೆ!

ಶಿವಮೊಗ್ಗ: ಯುವಕನೊಬ್ಬನನ್ನು ಆತನ ಮಾವ ಮತ್ತು ಸಂಬಂಧಿಕರೇ ಸೇರಿ ರಾಡ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪ ನಡೆದಿದೆ. ಬರ್ಬರವಾಗಿ ಹತ್ಯೆಯಾಗಿರುವ ಯುವಕನನ್ನು ಅರುಣ್ ಎಂದು ಗುರುತಿಸಿದೆ. ಮೃತ ಅರುಣ್ ಮತ್ತು ಯಶಸ್ವಿನಿ ಎಂಬುವವರು ಪರಸ್ಪರ ಪ್ರೀತಿಸಿ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಬ್ಬರಿಗೂ ಒಂದು ಮಗು ಕೂಡ ಇದೆ. ಕೂಲಿ ಕೆಲಸ ಮಾಡುತ್ತಿದ್ದ ಅರುಣ್ ಆರಂಭದಲ್ಲಿ ಚೆನ್ನಾಗಿದ್ದರೂ, ದಿನಕಳೆದಂತೆ ಗಾಂಜಾ ಮತ್ತು ಮದ್ಯಪಾನವನ್ನ ಹೆಚ್ಚಾಗಿ ಮಾಡುತ್ತಿದ್ದ […]