ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ!

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶಗಳನ್ನು ಹಂಚಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಅವರು ಬುಧವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮತ್ತು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸಿಸಿಬಿ ಮೂರು ವಿಶೇಷ ತಂಡಗಳನ್ನು ರಚಿಸಿತ್ತು. ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಸದ್ಯ ಇಬ್ಬರನ್ನು ವಶಕ್ಕೆ ಪಡೆದು […]

ಜರ್ಮನಿಯಲ್ಲಿ ಬೆಂಕಿ ಅವಘಡ; ಹೊಸ ವರ್ಷದ ದಿನದಂದೇ ಭಾರತೀಯ ವಿದ್ಯಾರ್ಥಿ ಮೃತ್ಯು.

ಬರ್ಲಿನ್: ಜರ್ಮನಿಯಲ್ಲಿರುವ ನಿವಾಸದಲ್ಲಿ ತೀವ್ರ ಬೆಂಕಿ ಕಾಣಿಸಿಕೊಂಡಿತ್ತು. ತಡರಾತ್ರಿ ಸಂಭವಿಸಿದ ಬೆಂಕಿ ಅಪಘಡದಲ್ಲಿ 25 ವರ್ಷದ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿ ತೆಲಂಗಾಣದ ಹೃತಿಕ್ ರೆಡ್ಡಿ. ವೇಗವಾಗಿ ಹರಡುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಹೃತಿಕ್ ಬರ್ಲಿನ್‌ನ ಅಪಾರ್ಟ್‌ಮೆಂಟ್‌ನ ಮೇಲಿನ ಮಹಡಿಯಿಂದ ಹಾರಿದ್ದ. ತಲೆಗೆ ತೀವ್ರ ಪೆಟ್ಟಾಗಿತ್ತು. ರೆಡ್ಡಿಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಹೊಸ ವರ್ಷದ ದಿನದಂದೇ ಮೃತ್ಯು:ಹೊಸ ವರ್ಷದ ದಿನದಂದೇ ಈ ಅವಘಡ ಸಂಭವಿಸಿದ್ದು, ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ […]

ಉಕ್ರೇನ್ ದಾಳಿ; ಹೊಸ ವರ್ಷ ಸಂಭ್ರಮದಲ್ಲಿದ್ದ ರಷ್ಯಾದ 24 ಮಂದಿ ಮೃತ್ಯು!

ಕೈವ್: ರಷ್ಯಾ ಹಾಗೂ ಉಕ್ರೇನ್ ನಡುವಣ ರಾಜತಾಂತ್ರಿಕ ಮಟ್ಟದಲ್ಲಿ ಶಾಂತಿ ಮಾತುಕತೆಗಳು ನಡೆಯುತ್ತಿರುವಂತೆಯೇ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಉಕ್ರೇನ್ ಡ್ರೋನ್ ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಉಕ್ರೇನ್‌ನ ಖೆರ್ಸನ್ ಪ್ರದೇಶದ ರಷ್ಯಾ ಆಕ್ರಮಿತ ಹಳ್ಳಿಯಲ್ಲಿ ಹೊಸ ವರ್ಷ ಆಚರಣೆ ವೇಳೆ ಈ ಘಟನೆ ನಡೆದಿದೆ ಎಂದು ರಷ್ಯಾದ ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಕಪ್ಪು ಸಮುದ್ರದ ಕರಾವಳಿ ಪ್ರದೇಶವಾದ ಖೋರ್ಲಿಯಲ್ಲಿ ಕೆಫೆ ಮತ್ತು ಹೋಟೆಲ್‌ಗೆ ಡ್ರೋನ್ ಅಪ್ಪಳಿಸಿದವು ಎಂದು ಅಲ್ಲಿನ ರಷ್ಯಾದ ಪ್ರತಿನಿಧಿ ವ್ಲಾಡಿಮಿರ್ […]

ಉಡುಪಿ: ಉದ್ಯಾವರ ಸೇತುವೆಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು.

ಉಡುಪಿ: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ […]

ಫೆ.23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಚುಂಚನಗಿರಿ ಶ್ರೀಗಳು ಮೋದಿ ಪ್ರವಾಸದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.