ಶಾಸಕ ಸುರೇಶ್ ಕುಮಾರ್ 702 ಕಿಮೀ ಸೈಕಲ್‌ಯಾತ್ರೆ; ಪ್ರಧಾನಿ ಮೋದಿ ಮೆಚ್ಚುಗೆ!

ನವದೆಹಲಿ: ಬೆಂಗಳೂರಿನಿಂದ ಕನ್ಯಾಕುಮಾರಿ ವರೆಗೆ ಸೈಕಲ್ ಯಾನ ಮಾಡಿದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಅವರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಸುರೇಶ್ ಕುಮಾರ್ ಅವರಿಗೆ ಕರೆ ಮಾಡಿ ಮೋದಿ ಅಭಿನಂದನೆ ತಿಳಿಸಿದ್ದಾರೆ. ಶಾಸಕರ ಸಾಧನೆಗೆ ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೋದಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ. 70 ವರ್ಷದ ರಾಜಾಜಿನಗರದ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ ಇತ್ತೀಚೆಗೆ ತಿಂಗಳುಗಟ್ಟಲೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಅಪರೂಪದ ನರವೈಜ್ಞಾನಿಕ ಕಾಯಿಲೆಯಿಂದ ಚೇತರಿಸಿಕೊಂಡಿದ್ದ […]
ಇನ್ಮುಂದೆ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 2 ತಿಂಗಳಿಗೊಮ್ಮೆ ಪೋಷಕರು-ಶಿಕ್ಷಕರ ಸಭೆ ಕಡ್ಡಾಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಬೆಂಗಳೂರು: ಸರ್ಕಾರಿ ಶಾಲಾ–ಕಾಲೇಜುಗಳಲ್ಲಿ ಇನ್ನು ಮುಂದೆ ಎರಡು ತಿಂಗಳಿಗೆ ಒಮ್ಮೆ ಪೋಷಕರು–ಶಿಕ್ಷಕರ ಮಹಾಸಭೆ ಆಯೋಜನೆ ಮಾಡುವುದು ಕಡ್ಡಾಯ. ರಾಜ್ಯದ 56 ಸಾವಿರ ಶಾಲಾ–ಕಾಲೇಜುಗಳಲ್ಲಿ ನ.14ರಂದು ಪೋಷಕರು–ಶಿಕ್ಷಕರ ಮಹಾಸಭೆ ಆಯೋಜಿಸಲಾಗಿತ್ತು. ಸಭೆಯು ಸಾಕಷ್ಟು ಯಶಸ್ಸು ಕಂಡಿತ್ತು. ಹೀಗಾಗಿ, ಪ್ರತಿ ಎರಡು ತಿಂಗಳಿಗೆ ಒಂದು ಸಭೆ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. 2025–26ನೇ ಸಾಲಿನಲ್ಲಿ ಜ.3 ಹಾಗೂ ಫೆ.28ರಂದು ಮಹಾಸಭೆಗಳನ್ನು ನಿಗದಿ ಮಾಡಲಾಗಿದೆ. 2026–27ನೇ ಶೈಕ್ಷಣಿಕ ಸಾಲಿನಿಂದ ಪ್ರತಿ ಎರಡು ತಿಂಗಳಿಗೆ ಒಂದು […]
ಉಡುಪಿ:ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್, ಮೂಡುಬಿದಿರೆ ಇವರ ವತಿಯಿಂದಜನವರಿ ಮಾಹೆಯಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿಗೆ ಉಡುಪಿ ಜಿಲ್ಲೆಯ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ […]
ಉಡುಪಿ:ಕ್ಲಿನಿಕ್‌ನಲ್ಲಿ ಶುಶ್ರೂಷಕ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಶುಶ್ರೂಷಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪರಿಶಿಷ್ಟ ಜಾತಿಗಳಿಗೆ ಸಂಬಂಧಿಸಿದ ಒಳಮೀಸಲಾತಿಯ ವರ್ಗೀಕರಣದಿಂದ ತಡಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗೆ ಪರಿಷ್ಕೃತ ರೋಸ್ಟರ್ ಗಳನ್ನು ಅಳವಡಿಸಿ ಮರು ಅರ್ಜಿಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ:ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ udupi.nic.in ಅನ್ನುಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.