ಬೆಣ್ಣೆಕುದ್ರು: 3 ಕೋಟಿ ರೂ. ವೆಚ್ಚದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಬೃಹತ್ ಕಂಚಿನ ಪುತ್ಥಳಿ ನಿರ್ಮಾಣ- ಮನವಿ ಪತ್ರ, ರಶೀದಿ ಪುಸ್ತಕ ಬಿಡುಗಡೆ

ಉಡುಪಿ: ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬ್ರಹತ್ ಕಂಚಿನ ಪುತ್ಥಳಿಯನ್ನು ಅಂದಾಜು 3 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡುವ ಸಲುವಾಗಿ ರೂಪಿಸಿದ ಮನವಿ ಪತ್ರ ಹಾಗೂ ರಶೀದಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಇಂದು ಶ್ರೀ ಕ್ಷೇತ್ರದ ಕಚೇರಿಯಲ್ಲಿ ನೆರವೇರಿತು. ಮನವಿ […]
ಉಡುಪಿ:ಸಂಕಷ್ಟದಲ್ಲಿರುವ ಮಹಿಳೆಯರು ಹಾಗೂ ಮಕ್ಕಳಿಗೆ ನೆರವಾಗಲು ಅಕ್ಕ ಪಡೆ ಸನ್ನದ್ಧ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಕ್ಕಪಡೆ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದು ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವುದರೊಂದಿಗೆ ರಕ್ಷಣೆ ನೀಡಿ, ಭಯಮುಕ್ತ ವಾತಾವರಣ ಕಲ್ಪಿಸಲಿದೆ ಎಂದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದ್ದು, ಹೆಣ್ಣು ಮಕ್ಕಳನ್ನು ದೌರ್ಜನ್ಯಕ್ಕೊಳಗಾಗದಂತೆ […]
ಉಡುಪಿ:ಕ.ರಾ.ರ.ಸಾ.ನಿಗಮದ ಪ್ರತಿಷ್ಠಿತ ವಾಹನಗಳ ಪ್ರಯಾಣ ದರ ಕಡಿತ

ಉಡುಪಿ: ಕ.ರಾ.ರ.ಸಾ.ನಿಗಮದ ಮಂಗಳೂರು ವಿಭಾಗದಿಂದ ಕುಂದಾಪುರ, ಉಡುಪಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ವಾಹನಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ. 10 ರಿಂದ 15 ರ ವರೆಗೆ ಪ್ರಯಾಣದರಗಳನ್ನು ಕಡಿಮೆಗೊಳಿಸಲಾಗುತ್ತಿದ್ದು, ಜನವರಿ 5 ರಿಂದ ಸಾರ್ವಜನಿಕ ಪ್ರಯಾಣಿಕರು ಸದರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಕುಂದಾಪುರದಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಕುಂದಾಪುರಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರವು ಅಂಬಾರಿ ಉತ್ಸವ ಸಾರಿಗೆಯಲ್ಲಿ 1510 ರೂ., ಡ್ರೀಮ್‌ಕ್ಲಾಸ್ ಸಾರಿಗೆಯಲ್ಲಿ 1350 ರೂ., ಮಲ್ಟಿ ಆಕ್ಸಿಲ್ […]
ಉಡುಪಿ:ಜ.6 ರಂದು ಬಿಡ್ಡುದಾರರಿಗೆ ತರಬೇತಿ

ಉಡುಪಿ: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಅಬಕಾರಿ ಇಲಾಖೆಯ ಖಾಲಿ ಅಥವಾ ಲಭ್ಯವಿರುವ ಮದ್ಯದ ಸನ್ನದುಗಳನ್ನು ಇ-ಹರಾಜು ಮಾಡಲು ಸರ್ಕಾರವು ಉದ್ದೇಶಿಸಿದ್ದು, ಅದರಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂಭಾವ್ಯ ಬಿಡ್ಡುದಾರರಿಗೆ ತರಬೇತಿಯನ್ನು ಜನವರಿ 6 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿರುತ್ತದೆ. ಸದರಿ ತರಬೇತಿಯನ್ನು ಅಬಕಾರಿ ಇಲಾಖೆ ಹಾಗೂ ಎಂಎಸ್‌ಟಿಸಿ ರವರು ನೀಡಲಿದ್ದು, ಆಸಕ್ತ ಬಿಡ್ಡುದಾರರು […]
ಉಡುಪಿ ಪರ್ಯಾಯಕ್ಕೆ ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ಪರ್ಯಾಯ ಸ್ವಾಗತ ಸಮಿತಿ ಅನುಮತಿ ನೀಡಿಲ್ಲ- ಯಶ್ ಪಾಲ್ ಸುವರ್ಣ

ಉಡುಪಿ: ಶೀರೂರು ಪರ್ಯಾಯ ಮಹೋತ್ಸವಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಸೌಹಾರ್ದ ಸಮಿತಿಯಿಂದ ಹೊರೆಕಾಣಿಕೆ ನೀಡುವ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದು, ಈ ಬಗ್ಗೆ ಪರ್ಯಾಯ ಸ್ವಾಗತ ಸಮಿತಿ ಯಾವುದೇ ಅನುಮತಿ ನೀಡಿಲ್ಲ ಎಂದು ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ಪರ್ಯಾಯ ಮಹೋತ್ಸವದ ಹೊರೆಕಾಣಿಕೆ ಸಮಿತಿಗೆ ಮುಸ್ಲಿಂ ಸೌಹಾರ್ದ ಸಮಿತಿಯವರು ಈವರೆಗೂ ಹೊರೆಕಾಣಿಕೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ, ಮಠದ ವತಿಯಿಂದಲೂ ಮುಸ್ಲಿಂ ಸೌಹಾರ್ದ ಸಮಿತಿಗೆ ಯಾವುದೇ ಹೊರೆಕಾಣಿಕೆ ನೀಡುವಂತೆ […]