ಉಡುಪಿ: ಭೀಮಾ ಜ್ಯವೆಲ್ಲರ್ಸ್‌ನಿಂದ ಜಿಲ್ಲಾ ಪೊಲೀಸ್ ಇಲಾಖೆಗೆ ಜೀಪು ಹಸ್ತಾಂತರ

ಉಡುಪಿ: ಭೀಮಾ ಜ್ಯವೆಲ್ಲರ್ಸ್ ಉಡುಪಿ ಇದರ ಸಿಎಸ್‌ಆರ್ ನಿಧಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಮಹೇಂದ್ರ ಕಂಪನಿಯ ಬೊಲೆರೋ ಜೀಪ್‌ನ್ನು ಗುರುವಾರ ನೀಡಲಾಯಿತು. ಭೀಮ ಜ್ಯುವೆಲ್ಲರ್ಸ್ ಉಡುಪಿ ಇದರ ಸೇಲ್ಸ್ ಮತ್ತು ಅಪರೇಷನ್ ಮುಖ್ಯಸ್ಥ ಗುರುಪ್ರಸಾದ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರಿಗೆ ಜೀಪಿನ ಕೀಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ, ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ., ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ನಿರೀಕ್ಷಕ ರವಿ ಕುಮಾರ್ […]

ಬ್ರಹ್ಮಾವರ: ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ಪೊಲೀಸರ ದಾಳಿ: 17 ಬೋಟ್ ಗಳು ಪೊಲೀಸರ ವಶಕ್ಕೆ

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, 17 ಬೋಟ್ ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾವಂಜೆ ಗ್ರಾಮದ ಮುಗ್ಗೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದಲ್ಲಿದ್ದ ನದಿಗಳಲ್ಲಿ ಬೋಟ್ ಗಳನ್ನು ಉಪಯೋಗಿಸಿಕೊಂಡು ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮರಳುಗಾರಿಕೆಗೆ ಉಪಯೋಗಿಸಿದ್ದ 17 ಬೋಟ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ […]

ಉಡುಪಿ:ಜ.12 ರಂದು ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

ಉಡುಪಿ: ಶಿಶು ಅಭಿವೃದ್ಧಿ ಯೋಜನೆ ಕುಂದಾಪುರದ ಮಡಾಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಥಿಲಾವಸ್ಥೆಯಲ್ಲಿರುವ ಶೇಡಿಮನೆ ಅಂಗನವಾಡಿ ಕಟ್ಟಡವನ್ನು ಇದ್ದ ಸ್ಥಿತಿಯಲ್ಲಿಯೇ ಜನವರಿ 12 ರಂದು ಬೆಳಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು. ಹೆಚ್ಚಿನ ವಿವರಗಳಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ತಾಲೂಕು ಪಂಚಾಯತ್ ಸಮೀಪ, ಕುಂದಾಪುರ ದೂ.ಸಂಖ್ಯೆ:08254-230807ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್’ನಲ್ಲಿ ಉದ್ಯೋಗಾವಕಾಶ

ಉಡುಪಿ: ಮಣಿಪಾಲದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್’ನಲ್ಲಿ ಲೆಕ್ಚರರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಲೆಕ್ಚರರ್ ಕಂಪ್ಯೂಟರ್ ಸೈನ್ಸ್ / ಆರ್ಟಿಫಿಶಿಯಲ್ ಇಂಟಲಿಜೆನ್ಸ್ ವಿದ್ಯಾರ್ಹತೆ: ಪ್ರಥಮ ದರ್ಜೆಯಲ್ಲಿ B.E/ B.Tech in ಕಂಪ್ಯೂಟರ್ ಸೈನ್ಸ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್ (As perAICTE norms) ವಿದ್ಯಾರ್ಹತೆ ಹೊಂದಿರಬೇಕು. ಮಾಹಿತಿಗಾಗಿ ಸಂಪರ್ಕಿಸಿ:7892200610

ಉಡುಪಿ:ಶೇ.50 ರ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಉಡುಪಿ: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026 ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705), ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ https://kpp.karnataka.gov.in ನಲ್ಲಿ ರಿಯಾಯಿತಿ ಸೌಲಭ್ಯ […]