ಮಂಗಳೂರು: ಮಹಿಳೆಗೆ ಕಿರುಕಳ ನೀಡಿದ ಆರೋಪ: ಹೆಡ್‌ಕಾನ್‌ಸ್ಟೇಬಲ್ ಅಮಾನತು!

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. 2023ರಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಗೆ ದೂರು ನೀಡಲು ಹೋದ ಮಹಿಳೆಗೆ ಸಂತೋಷ್‌ರ ಪರಿಚಯ ಆಗಿತ್ತು. ಬಳಿಕ ಸಂತೋಷ್‌ನ ನಡವಳಿಕೆ ಬಗ್ಗೆ ಅಸಮಾಧಾನಗೊಂಡ ಮಹಿಳೆ ಕಮಿಷನರ್‌ಗೆ ದೂರು ನೀಡಿದ್ದರು. ಆ ಬಗ್ಗೆ ಕ್ಷಮೆ ಕೇಳಿದ […]
ಟ್ರಂಪ್ ಬೆದರಿಕೆಗೆ ನಾವು ಬಗ್ಗಲ್ಲ, ತಾಯ್ನಾಡಿಗಾಗಿ ಶಸ್ತ್ರ ಹಿಡಿಯಲೂ ಸಿದ್ಧ: ಕೊಲಂಬಿಯಾ ಅಧ್ಯಕ್ಷರ ಹೇಳಿಕೆ

ಬೊಗೋಟಾ: ನೆರೆಯ ವೆನೆಜುವೆಲಾದಲ್ಲಿ ಅಮೆರಿಕದ ದಾಳಿ ನಂತರ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ಎದುರಿಸಲು ಶಸ್ತ್ರಾಸ್ತ್ರ ಕೈಗೆತ್ತಿಕೊಳ್ಳುವುದಾಗಿ” ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಸೋಮವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಗೆರಿಲ್ಲಾ ಹೋರಾಟಗಾರ ಪೆಟ್ರೋ, ನಾನು ಮತ್ತೆ ಆಯುಧ ಮುಟ್ಟುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದೇನೆ, ಆದರೆ ತಾಯ್ನಾಡಿಗಾಗಿ, ನಾನು ಮತ್ತೆ ಶಸ್ತ್ರಾಸ್ತ್ರ ಕೈಗೆತ್ತಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ. ಕೊಲಂಬಿಯಾದ ಮೊದಲ ಎಡಪಂಥೀಯ ನಾಯಕ ಪೆಟ್ರೋ, ಕೊಕೇನ್ ತಯಾರಿಸಲು […]
ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್ಆರ್ ಟಿಸಿ; ಟಿಕೆಟ್ ದರದಲ್ಲಿ ಶೇ.5-15 ರಷ್ಟು ರಿಯಾಯ್ತಿ!

ಬೆಂಗಳೂರು: ಹೊಸ ವರ್ಷಾರಂಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ) ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು ಟಿಕೆಟ್ ದರದಲ್ಲಿ ಭಾರಿ ರಿಯಾಯಿತಿ ಘೋಷಿಸಿದೆ. ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಟಿಕೆಟ್ ದರದಲ್ಲಿ ಶೇ.5ರಿಂದ ಶೇ.15ರಷ್ಟು ಟಿಕೆಟ್ ದರ ರಿಯಾಯಿತಿ ಘೋಷಣೆ ಮಾಡಿದೆ. ಎಲ್ಲಾ ರೀತಿಯ KSRTC ಬಸ್‌ಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10 ರಿಂದ ಶೇ. 15ರ ವರೆಗೆ ಪ್ರಯಾಣದರಗಳನ್ನು ಇಳಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಇದು ಇಂದಿನಿಂದ (ಜನವರಿ 5) […]
ಬೆಂಗಳೂರು ಶಾರ್ಟ್ ಸರ್ಕ್ಯೂಟ್ ಗೆ ಮಹಿಳಾ ಐಟಿ ಉದ್ಯೋಗಿ ಸಾವು!

ಬೆಂಗಳೂರು: ಮನೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು, ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರು ಗಟ್ಟಿ ಟೆಕ್ಕಿ ಮಹಿಳೆ ಮೃತಪಟ್ಟಿರುವ ಘಟನೆ ನಗರದ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ಕಾವೂರು ಮೂಲದ ಶರ್ಮಿಳಾ (34) ಎಂಬುವರು ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಶರ್ಮಿಳಾ ಒಂದೂವರೆ ವರ್ಷದಿಂದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್ ಮೆಂಟ್‌ನಲ್ಲಿ ಸ್ನೇಹಿತೆ ಜತೆ ವಾಸವಾಗಿದ್ದರು. ತಮ್ಮ ಮನೆ ಸಮೀಪದ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಹಿನ್ನೆಲೆ ಸ್ನೇಹಿತೆ […]
ಬಾಂಗ್ಲಾದೇಶದಲ್ಲಿ ಹಿಂದೂ ಪತ್ರಕರ್ತನ ಹಣೆಗೆ ಗುಂಡಿಟ್ಟು ಹತ್ಯೆ!

ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕೌರ್ಯಗಳು ಮುಂದುವರೆದಿರುವಂತೆಯೇ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹಿಂದೂ ಪತ್ರಕರ್ತನನ್ನು ಗುಂಡಿಕ್ಕಿ ಕೊಂದು ಹಾಕಿರುವ ಘಟನೆ ವರದಿಯಾಗಿದೆ. ಮೂಲಗಳ ಪ್ರಕಾರ ಸ್ಥಳೀಯ ಪತ್ರಿಕೆಯೊಂದರ ಹಂಗಾಮಿ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದ ಹಿಂದೂ ಕಾರ್ಖಾನೆ ಮಾಲೀಕರನ್ನು ಸೋಮವಾರ ಸಂಜೆ ಬಾಂಗ್ಲಾದೇಶದಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಸದಸ್ಯರೊಬ್ಬರ ಮೇಲೆ ನಡೆದ ಹಿಂಸಾಚಾರದ ಇತ್ತೀಚಿನ ಘಟನೆಯಲ್ಲಿ ಇದು ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಾಂಗ್ಲಾದೇಶದ ಜಶೋರ್ ಜಿಲ್ಲೆಯ […]