ಲಂಚ ಪಡೆದ ಆರೋಪ; ಲೋಕಾಯುಕ್ತರ ಬಲೆಗೆಬಿದ್ದ ಮೀನುಗಾರಿಕೆ ಇಲಾಖೆಯ ಸೂಪರ್ವೈಸರ್!

ಉಡುಪಿ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬಿಡುಗಡೆಯಾದ ಸಬ್ಸಿಡಿ ಹಣಕ್ಕೆ ಸಂಬಂಧಿಸಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಉಡುಪಿ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್ ಶಿವಕುಮಾರ್ ಎಂಬಾತನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮೀನು ವ್ಯಾಪಾರಿ ರಮೇಶ್ ತಿಂಗಳಾಯ ಎಂಬವರು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಸಣ್ಣ ಟೆಂಪೋ ರಿಕ್ಷಾ ಖರೀದಿ ಮಾಡಿದ್ದು, ಈ ಬಗ್ಗೆ 1.20ಲಕ್ಷ ರೂ. ಸಬ್ಸಿಡಿ ಹಣ ಬಿಡುಗಡೆಯಾಗಿತ್ತು. ಈ ಹಣದಲ್ಲಿ ಕಮಿಷನ್ ರೂಪದಲ್ಲಿ 10ಸಾವಿರ ರೂ. ನೀಡುವಂತೆ ಬನ್ನಂಜೆಯಲ್ಲಿರುವ ಮೀನುಗಾರಿಕೆ […]

ಉಡುಪಿ:ಜನವರಿ 25 ರಿಂದ 27: ಫಲ- ಪುಷ್ಪ ಪ್ರದರ್ಶನ

ಉಡುಪಿ: ತೋಟಗಾರಿಕಾ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜನವರಿ 25 ರಿಂದ 27 ರವರೆಗೆ ರೈತ ಸೇವಾ ಕೇಂದ್ರ ಶಿವಳ್ಳಿ ತೋಟಗಾರಿಕಾ ಕ್ಷೇತ್ರ, ದೊಡ್ಡಣ್ಣಗುಡ್ಡೆಯಲ್ಲಿ ಫಲ-ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಸದರಿ ಫಲ-ಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕೆ ಚಟುವಟಿಕೆ ಹೊಂದಿರುವವರಿಗೆ ಹಾಗೂ ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುತ್ತಿದ್ದು, ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ ಮಾರಾಟಗಾರರು, ಬ್ಯಾಂಕ್ ಹಾಗೂ ಆಹಾರ ಮಳಿಗೆದಾರರಿಗೆ 100 ಚದರ ಅಡಿ ಗಾತ್ರದ ಮಳಿಗೆಗೆ 3500 […]

ಉಡುಪಿ:ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ.7.25ರ ಇತರೆ ಹಿಂದುಳಿದವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡಲು ಆಸಕ್ತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,ಆಸಕ್ತರು ನಿಗದಿತ ಅರ್ಜಿಯೊಂದಿಗೆ ಪೂರಕ ದಾಖಲಾತಿಗಳನ್ನು ಜನವರಿ 16 ರ ಒಳಗಾಗಿ ನಗರಸಭೆ ಕಚೇರಿಗೆ ಸಲ್ಲಿಸುವಂತೆ ಉಡುಪಿ ನಗರಸಭೆಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ಸಾಲಿಗ್ರಾಮ ಪ.ಪಂ: ಸ್ವಚ್ಛತಾ ನಿಯಮ ಉಲ್ಲಂಘಿಸಿದಲ್ಲಿ ದಂಡ

ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮ 2016, ಘನತ್ಯಾಜ್ಯ ನಿರ್ವಹಣೆ ಉಪನಿಯಮ 2019, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮ 2016 ಹಾಗೂ (c&d waste) 2016 ರ ನಿಯಮದ ಉಲ್ಲಂಘನೆ ಮಾಡಿದಲ್ಲಿ ಸರಕಾರದ ಆದೇಶದಂತೆ ನಿಗದಿತ ದಂಡ ವಿಧಿಸಲಾಗುವುದು. ದಿನನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಮೂಲದಲ್ಲಿಯೇ ಹಸಿಕಸ/ಒಣಕಸವನ್ನಾಗಿ ವಿಂಗಡಿಸಿ ಘನತ್ಯಾಜ್ಯ ವಾಹನಕ್ಕೆ ನೀಡುವಂತೆ, ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ, ಶೌಚಾಲಯ ಗುಂಡಿ ಸ್ವಚ್ಛಮಾಡಲು ಕಡ್ಡಾಯವಾಗಿ ಸಕ್ಕಿಂಗ್ ಯಂತ್ರವನ್ನು ಬಳಸುವಂತೆ ಹಾಗೂ ಸ್ವಚ್ಛತೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ […]