ಹಿರಿಯಡಕ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ.

ಹಿರಿಯಡಕ: ಓಂ ಶ್ರೀ ಮಂಜುನಾಥಾಯ ನಮಃ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್( ರಿ ) ಉಡುಪಿ ತಾಲೂಕು. ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ ಮಾಸಾಶನ ಫಲಾನುಭವಿಯಾದ ಹಿರಿಯಡಕ ಗ್ರಾಮದ ಬೊಮ್ಮರ ಬೆಟ್ಟು ನಿವಾಸಿ ಗೋಪಾಲಕೃಷ್ಣ ದೇವಾಡಿಗ ಇವರಿಗೆ ವಾತ್ಸಲ್ಯ ಮನೆ ಮಂಜೂರಾಗಿದ್ದು ಆ ಪ್ರಯುಕ್ತ ಇಂದು ಮನೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸತ್ಯಾನಂದ ನಾಯಕ್, ಉಡುಪಿ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾದ ವಿಜಯ […]

ಮಣಿಪಾಲ ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜ.10 ರಂದು ಮೋಟಾರ್ ಮಾದರೀಕರಣ ಮತ್ತು ವಿದ್ಯುತ್ ವಾಹನ ಸಂಯೋಜನೆ ಕಾರ್ಯಾಗಾರ: ಆಸಕ್ತರು ಮಿಸ್ ಮಾಡದೇ ಭಾಗವಹಿಸಿ

ಮಣಿಪಾಲ: ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜು, ಮಣಿಪಾಲ ಇಲ್ಲಿ ಕ್ಯಾಡ್ ಸೆಂಟರ್ (CADD CENTRE)ವತಿಯಿಂದಪ್ರಾಯೋಗಿಕ BLDC ಮೋಟಾರ್ ಮಾದರೀಕರಣಮತ್ತು ವಿದ್ಯುತ್ ವಾಹನ ಸಂಯೋಜನೆ ಕಾರ್ಯಾಗಾರ ಜನವರಿ 10 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ನಡೆಯಲಿದೆ. ಕಾರ್ಯಗಾರ ಒಳಗೊಂಡಿರುವ ಪ್ರಮುಖ ವಿಷಯಗಳು:

ಉಡುಪಿಯ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ

ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ ಶ್ರೀಗಳು ಇದೀಗ ಮತ್ತೊಂದು ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ದೆಹಲಿ ಮೂಲದ ದಾನಿಯೊಬ್ಬರು ನೀಡಿರುವ 2 ಕೋಟಿ ವೆಚ್ಚದ ಚಿನ್ನದ ಭಗವದ್ಗೀತೆ ಕೃಷ್ಣದೇವರಿಗೆ ಸಮರ್ಪಣೆಯಾಗಿದೆ. ಭಗವದ್ಗೀತೆಯ 18 ಅಧ್ಯಾಯಗಳನ್ನು ಚಿನ್ನದ ಹಾಳೆಗಳಲ್ಲಿ ಬರೆಯಲಾಗಿದೆ. ದೆಹಲಿ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಎಸ್ ಲಕ್ಷ್ಮಿ ನಾರಾಯಣನ್ ಎಂಬವರು ಸುಮಾರು ಎರಡು ಕೋಟಿ ವೆಚ್ಚದಲ್ಲಿ ಈ ಅಪರೂಪದ ಗ್ರಂಥವನ್ನು ಕೃಷ್ಣಮಠಕ್ಕೆ ಕೊಡುಗೆಯಾಗಿ […]

ಮಣಿಪಾಲದ MSDC ಯಲ್ಲಿ ಕ್ಯಾನ್ವಾ ಕಾರ್ಯಾಗಾರ ನಿಮ್ಮ‌ಕೌಶಲ್ಯಗಳನ್ನು ಜಾಸ್ತಿ ಮಾಡಲು ಇದೊಳ್ಳೆ ಅವಕಾಶ

ಮಣಿಪಾಲ: ಮಣಿಪಾಲ: ಮಣಿಪಾಲ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (TMA Pai Foundation‌ನ ಘಟಕ) MSDCಯಲ್ಲಿಡಾ ವಿನ್ಚಿ ಸಹಯೋಗದಲ್ಲಿ canva ಕುರಿತು ವಿಶೇಷ ತರಬೇತಿ ಕಾರ್ಯಾಗಾರವನ್ನು ಜನವರಿ 10 ರಂದು ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ಏರ್ಪಡಿಸಲಾಗಿದೆ. ಕಾರ್ಯಾಗಾರಕ್ಕೆ ₹ 500 ಶುಲ್ಕವಿದೆ. ನಿಮ್ಮ ವೃತ್ತಿಜೀವನ ಮತ್ತು ವ್ಯವಹಾರವನ್ನು ಈ ತರಬೇತಿ ಮೂಲಕ ಇನ್ನಷ್ಟು ಬಲಿಷ್ಠಗೊಳಿಸಲು ಇದೊಂದು ಸದವಕಾಶವಾಗಿದೆ. ಕೂಡಲೇ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳಿರಿ ಸಂಪರ್ಕಿಸಿ: 8296615560 / 7975078498www.viincilinstitute.com

ಉಡುಪಿ:ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದಾಗ ಅಪಘಾತ ತಡೆಯಲು ಸಾಧ್ಯ : ಮನು ಪಟೇಲ್ ಬಿ.ವೈ

ಉಡುಪಿ: ಪ್ರತಿಯೊಬ್ಬ ನಾಗರಿಕರೂ ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವಾಗ ಜಾಗೃತಿಯಿಂದ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿದಾಗ ಮಾತ್ರ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮನು ಪಟೇಲ್ ಬಿ.ವೈ ಹೇಳಿದರು. ಅವರು ಗುರುವಾರ ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಸಹಯೋಗದಲ್ಲಿ ನಡೆದ 37 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಚರಣೆ -2026 ಅನ್ನು […]