ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ: ಕೆರೆಡಿಯ ಸನಿತ್ ಶೆಟ್ಟಿ ಆಯ್ಕೆ

ಕುಂದಾಪುರ: ಕೆರಾಡಿಯ ಸನಿತ್ ಶೆಟ್ಟಿ ಅವರು ಕಿವುಡರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕೆರಾಡಿಯ ಸುರೇಂದ್ರ ಶೆಟ್ಟಿ, ಶ್ರೀಮತಿ ಶೆಟ್ಟಿ ದಂಪತಿ ಪುತ್ರರಾಗಿರುವ ಸನಿತ್ ಶೆಟ್ಟಿ ಅವರಿಗೆ ಹುಟ್ಟಿನಿಂದಲೂ ಶ್ರವಣ ದೋಷವಿತ್ತು. ಅವರು ಬಿಸಿಎ ಪದವೀಧರರಾಗಿದ್ದು, ಸದ್ಯ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸನಿತ್ ಅವರ ತಂದೆ ಸುರೇಂದ್ರ ಶೆಟ್ಟಿ ರಿಕ್ಷಾ ಚಾಲಕರಾಗಿದ್ದಾರೆ. ಭಾರತೀಯ ಕಿವುಡರ ಕ್ರಿಕೆಟ್ ಅಸೋಸಿಯೇಷನ್‌ ಪುರುಷರ ಆಯ್ಕೆ ಸಮಿತಿ ಪ್ರಕಟಿಸಿರುವ 16 ಮಂದಿಯ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. […]

ಉಡುಪಿಯ ಬಲ್ಲಾಳ್ ಮೊಬೈಲ್ಸ್’ನಲ್ಲಿ ಒಮ್ಮೆ ಶಾಪಿಂಗ್ ಮಾಡಿ, ಯಾಕಂದ್ರೆ ನೀವು ಗೆಲ್ಲುತ್ತೀರಿ ಭರ್ಜರಿ ಬಹುಮಾನಗಳನ್ನು! ನಿಮಗಾಗಿ ಕಾದು ಕೂತಿವೆ ಅದ್ಬುತ ಆಫರ್ ಗಳು!

ಉಡುಪಿ: ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿರುವ ಹೆಸರಾಂತ “ಬಲ್ಲಾಳ್ ಮೊಬೈಲ್ಸ್” ಶೋರೂಮ್‌ನಲ್ಲಿ ಗ್ರಾಹಕರಿಗಾಗಿ ಭರ್ಜರಿ ಆಫರ್‌ಗಳನ್ನು ಲಾಂಚ್ ಮಾಡಲಾಗಿದೆ. ಇಲ್ಲಿಗೆ ಭೇಟಿ ನೀಡುವ ಮೂಲಕ ನಿಮ್ಮ ಹಬ್ಬದ ಸಂತೋಷವನ್ನು ಶಾಪಿಂಗ್‌ ಮೂಲಕ ಮತ್ತಷ್ಟು ಹೆಚ್ಚಿಸಿಕೊಳ್ಳಬಹುದು. ಎಕ್ಸ್ಚೇಂಜ್ ಆಫರ್: ತಮ್ಮ ಹಳೆಯ ಸ್ಮಾರ್ಟ್‌ಫೋನ್‌ನ್ನು ಉತ್ತಮ ಮಾದರಿಯ ಹೊಸ ಫೋನ್‌ಗೆ ಅಪ್ಗ್ರೇಡ್ ಮಾಡಲು ಬಲ್ಲಾಳ್ ಮೊಬೈಲ್ಸ್ ವಿಶೇಷ ಎಕ್ಸ್ಚೇಂಜ್ ಆಫರ್ ನೀಡುತ್ತಿದೆ. ನಿಮಗೆ ಇಷ್ಟವಾದ ಬ್ರ್ಯಾಂಡ್‌ಗಳ ಹೊಸ ಫೋನ್‌ಗಳನ್ನು ಆಕರ್ಷಕ ದರದಲ್ಲಿ ಪಡೆಯಬಹುದು. “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” […]

ಜೆಸಿಐ ಭಾರತದ ರಾಷ್ಟ್ರೀಯ ತರಬೇತುದಾರರಾಗಿ ಜ್ಯೋತಿ ಪ್ರಶಾಂತ್ ಆಯ್ಕೆ

ಮಣಿಪಾಲ: ಜೇಸಿ. ಜ್ಯೋತಿ ಪ್ರಶಾಂತ್ ಅವರು ಜೆಸಿಐ ಭಾರತದ ರಾಷ್ಟ್ರೀಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಜೆಸಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರಿಗೆ ಅಧಿಕೃತವಾಗಿ ಪದವಿ ಪ್ರದಾನ ಮಾಡಲಾಯಿತು. ಎಚ್.ಆರ್. ಪ್ರೊಫೆಷನಲ್ ಆಗಿರುವ ಅವರು ಅನೇಕ ಕಂಪನಿಗಳು ಹಾಗೂ ವಿದ್ಯಾರ್ಥಿಗಳಿಗೆ ಮಹಿಳಾ ಸಬಲೀಕರಣ, ಜೀವನ ಕೌಶಲ್ಯಗಳು ಮತ್ತು ವೃತ್ತಿ ಅಭಿವೃದ್ಧಿಗೆ ಸಂಬಂಧಿಸಿದ ತರಬೇತಿಗಳನ್ನು ಆಯೋಜಿಸುತ್ತಿದ್ದಾರೆ. ಪ್ರಸ್ತುತ ಅವರು ಮಣಿಪಾಲದ ಮಾಹೆ (MAHE) ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ. ಸಂಶೋಧನಾ ವಿದ್ಯಾರ್ಥಿನಿಯಾಗಿ ತೊಡಗಿಸಿಕೊಂಡಿದ್ದಾರೆ.

ಇಂದು ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮೆರವಣಿಗೆ: ಸಂಚಾರ ನಿಯಮದಲ್ಲಿ ಬದಲಾವಣೆ

ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶದ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಇಂದು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಮೆರವಣಿಗೆಯು ಶಾರದಾ ಕಲ್ಯಾಣ ಮಂಟಪದಿಂದ ರಾ.ಹೆ-169(ಎ) ರ ಮಾರ್ಗವಾಗಿ ಶಿರಿಬೀಡು ಜಂಕ್ಷನ್ ತಲುಪಿ ಅಲ್ಲಿಂದ ಸರ್ವೀಸ್ ಬಸ್ ನಿಲ್ದಾಣ-ತ್ರಿವೇಣಿ ಜಂಕ್ಷನ್- ಕನಕದಾಸ ರಸ್ತೆ ಮಾರ್ಗವಾಗಿ ಶೀರೂರು ಮಠ ತಲುಪಲಿದೆ. ಆದ್ದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡೆತಡೆಗಳು ಉಂಟಾಗುವುದರಿಂದ ವಾಹನ ಸಂಚಾರದಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ ಮತ್ತು ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ. ಇಂದು […]