ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ‘ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ’ ಕಾರ್ಯಕ್ರಮ

ಹೆಬ್ರಿ: ವಿದ್ಯಾರ್ಥಿಗಳು ನಿಮ್ಮ ಬದುಕಿನಲ್ಲಿ ಗುರಿ ತಲುಪಬೇಕಾದರೆ ಶಿಸ್ತು ಅತೀ ಅಗತ್ಯ. ಶಿಸ್ತು, ಛಲ, ಶ್ರದ್ಧೆ, ಆಶೀರ್ವಾದ ಇವುಗಳನ್ನು ವಿದ್ಯಾರ್ಥಿಗಳು ಪಾಲಿಸಿಕೊಂಡರೆ ಯಶಸ್ಸು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಕನಸು ಕಾಣಬೇಕು ಅದನ್ನು ನನಸು ಮಾಡುವಲ್ಲಿ ಕಾರ್ಯಪ್ರವೃತ್ತರಾಗುವುದು ಅತೀ ಅಗತ್ಯ. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶದಷ್ಟು ಬೇರೆ ಯಾವುದೇ ಹಂತದಲ್ಲಿ ಸಿಗುವುದಿಲ್ಲ. ನಮಗೆ ನಾವೇ ಗೌರವವನ್ನು, ನಂಬಿಕೆಯನ್ನು, ರೂಢಿಸಿಕೊಂಡಲ್ಲಿ ಯಶಸ್ಸು ಸಾಧ್ಯವಾಗುತ್ತದೆ ಎಂದು ಆಳ್ವಾಸ್ ಮಹಾವಿದ್ಯಾಲಯ ಮೂಡುಬಿದಿರೆಯ ಮಾನಸರೋಗ ಮತ್ತು ಮನೋವಿಜ್ಞಾನ ವಿಭಾಗದ ಮುಖ್ಯಸ್ಥರು ಮನೋವೈದ್ಯರಾದ ಡಾ.ರವಿಪ್ರಸಾದ್ ಹೆಗ್ಡೆ ಅವರು […]

ಉಡುಪಿ ಶೀರೂರು ಪರ್ಯಾಯ: ಡಿಸಿಸಿ ಬ್ಯಾಂಕ್, ಸಮಸ್ತ ಸಹಕಾರಿ ಸಂಘಗಳಿಂದ ಹಸಿರು ಹೊರಕಾಣಿಕೆ ಸಮರ್ಪಣೆ

ಉಡುಪಿ: ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಎಲ್ಲ ಸಹಕಾರಿಗಳಿಂದ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು.ಸಮಸ್ತ ಸಹಕಾರಿಗಳ ಸಹಕಾರದೊಂದಿಗೆ ಸುಮಾರು 25 ಲಕ್ಷ ರೂ. ಮೌಲ್ಯದ ತೆಂಗಿನಕಾಯಿ, ಅಕ್ಕಿ, ಬೆಲ್ಲ, ಸಕ್ಕರೆ, ಬೇಳೆ, ಎಣ್ಣೆ, ತುಪ್ಪ, ತರಕಾರಿ ಸೇರಿದಂತೆ ಬೃಹತ್ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು. 40ಕ್ಕೂ ಅಧಿಕ ವಾಹನಗಳಲ್ಲಿ ಹಸಿರು ಹೊರೆಕಾಣಿಕೆಯ ವಸ್ತುಗಳನ್ನು ತುಂಬಿಸಿಕೊಂಡು ತಟ್ಟಿರಾಯ, ಬಿರುದಾವಳಿ, ಪಟಾಕಿ, ವಾದ್ಯಘೋಷದೊಂದಿಗೆ ಮೆರವಣಿಗೆ […]

ಧನ್ಯವಾದಗಳು ಸರ್, ನಿಮ್ಮಂತಹ ಹಿರಿಯರಿಂದಲೇ ಕಲಿತೆ: ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್!

ಬೆಂಗಳೂರು: ರಾಕಿಂಗ್ ಸ್ಟಾರ್‌ ಯಶ್‌ ಹುಟ್ಟು ಹಬ್ಬದ ಪ್ರಯುಕ್ತ ನಟನ ಬಹುನಿರೀಕ್ಷಿತ ಟಾಕ್ಸಿಕ್‌ ಚಿತ್ರದ ಟೀಸರ್‌ ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಚಿತ್ರರಂಗದ ಸೇರಿದಂತೆ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಶ್‌ ಹುಟ್ಟುಹಬ್ಬಕ್ಕೆ ಶುಭ ಕೋರಿ, ರಾಯನ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಟ ಕಿಚ್ಚ ಸುದೀಪ್‌ ಪೋಸ್ಟ್‌ ಹಂಚಿಕೊಂಡಿದ್ದರು. ‘ಗುರಿಯತ್ತ ಸಾಗಲು ಯಾವಾಗಲೂ ಬಹಳಷ್ಟು ಸಮಯ ಬೇಕಾಗುತ್ತದೆ. ನಿಮ್ಮ ಹೊಸ ಹೆಜ್ಜೆ ನಿಮ್ಮನ್ನು ಅದೃಷ್ಟದ ಹತ್ತಿರಕ್ಕೆ ಕೊಂಡೊಯ್ಯಲಿ, ಗುರಿಯಡೆಗೆ ನಿಮ್ಮ ಗಮನ ಇಟ್ಟಿದ್ದೀರಿ, ಶುಭವಾಗಲಿ‘ […]

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌: ಶಾಸಕ ಸುನಿಲ್ ಕುಮಾರ್ ಟೀಕೆ

ಉಡುಪಿ: ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳವಾರು ನಿವಾಸಿ ಆರೀಫ್ ಯಾನೆ ಮುನ್ನ (37) ಹಾಗೂ ಕಾವೂರು ನಿವಾಸಿ ಅಬ್ದುಲ್ ಹಮೀದ್ (32) ಬಂಧಿತ ಆರೋಪಿಗಳು. ಆರೋಪಿಗಳ ಬಂಧನದ ಬೆನ್ನಲ್ಲೇ ಕಾರ್ಕಳ ಶಾಸಕ ಸುನಿಲ್ ಕುಮಾರ್ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ‘ಪರಶುರಾಮ ಥೀಂ ಪಾರ್ಕ್ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌’ ಎಂದು ಟೀಕಿಸಿದ್ದಾರೆ. ಪರಶುರಾಮ ಥೀಂ […]

ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಉಪಾಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ

ಉಡುಪಿ : ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ (ಕೆ.ಎಸ್.ಹೆಚ್.ಎ.) ದ ಉಪಾಧ್ಯಕ್ಷರಾಗಿ ಉಡುಪಿಯ ಖ್ಯಾತ ಹೋಟೆಲು ಉದ್ಯಮಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಪ್ರಸ್ತುತ ಉಡುಪಿ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. 1954ರಲ್ಲಿ ಸ್ಥಾಪನೆಯಾದ ಕರ್ನಾಟಕ ರಾಜ್ಯ ಹೋಟೆಲುಗಳ ಸಂಘವು (ಕೆ.ಎಸ್.ಹೆಚ್.ಎ.) ಕರ್ನಾಟಕದ 30 ಜಿಲ್ಲೆಗಳ ಹೋಟೆಲ್ ಸಂಘಗಳ ಸಹಯೋಗದೊಂದಿಗೆ ಅತ್ಯುನ್ನತ ಸಂಸ್ಥೆಯಾಗಿದೆ. ಕೆ.ಎಸ್.ಹೆಚ್.ಎ. ಸಂಸ್ಥೆಯು ರಾಜ್ಯದಲ್ಲಿರುವ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ […]