ಹೃದಯಾಘಾತದಿಂದ ಅಯ್ಯಪ್ಪ ಮಾಲಾಧಾರಿ ಮೃತ್ಯು!

ಉಳ್ಳಾಲ: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಸೋಮೇಶ್ವರದ ಪಿಲಾರು ದೇಲಂತಬೆಟ್ಟು ನಿವಾಸಿ ಚಂದ್ರಹಾಸ್ ಶೆಟ್ಟಿ (55) ಕೇರಳದ ಎರಿಮಲೆ ಬೆಟ್ಟವನ್ನು ಸೋಮವಾರ ಏರುತ್ತಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರ್ಕುಳ ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಕಾಡಿನ ದಾರಿಯಾಗಿ ಪಂಪೆಗೆ ಸಾಗುತ್ತಿದ್ದಾಗ ಕುಸಿದು ಬಿದ್ದರು. ಮರಣೋತ್ತರ ಪರೀಕ್ಷೆಯನ್ನು ತ್ವರಿತವಾಗಿ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್ ಅವರು ಕೇರಳದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಂಗಳವಾರ ಬೆಳಗ್ಗೆ ಪಾರ್ಥಿವ ಶರೀರ ಉಳ್ಳಾಲ ತಲುಪಲಿದೆ. ಚಂದ್ರಹಾಸ್ ಅವರು ಮೂಲತಃ ಬಾಕ್ರಬೈಲ್ ನಿವಾಸಿಯಾಗಿದ್ದು, […]

ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ.

ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಕಾಲೇಜಿನ ವಿದ್ಯಾರ್ಥಿನಿ ಗೀತಾಂಜಲಿ ಶಿವಗೊಂಡ ಚೌಗಲಾ ಅವರು ಮಲೇಷ್ಯಾದ ಕೌಲಾಲಂಪುರ್ ನಗರದಲ್ಲಿ ಅದ್ಧೂರಿಯಾಗಿ ನಡೆದ ಅತಿ ದೊಡ್ಡ ಯುವ ನಾಯಕತ್ವ ಸಮ್ಮೇಳನಗಳಲ್ಲಿ ಒಂದಾದ AYIMUN–2025 ನಲ್ಲಿ ಭಾರತವನ್ನು ಪ್ರತಿನಿಧಿಸಿದರು. ಈ ಸಮ್ಮೇಳನಕ್ಕೆ ಭಾರತದಿಂದ ಕೇವಲ ಏಳು ವಿದ್ಯಾರ್ಥಿಗಳು ಮಾತ್ರ ಆಯ್ಕೆಗೊಂಡಿದ್ದು, ಅವರಲ್ಲಿ ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ಎಂಬ ಗೌರವ ಗೀತಾಂಜಲಿಗೆ ದೊರಕಿದೆ. ಅವರ ಆಯ್ಕೆ ಶೈಕ್ಷಣಿಕ ಸಾಮರ್ಥ್ಯ ಹಾಗೂ ಸಂಶೋಧನಾ ಲೇಖನ ಆಧಾರದ ಮೇಲೆ […]

ಕುಂದಾಪುರ: ಮಹಿಷಮರ್ಧಿನಿ ಶಿಲ್ಪ ಪತ್ತೆ.

ಉಡುಪಿ: ಕುಂದಾಪುರ ತಾಲ್ಲೂಕಿನ ಕುಂದಬಾರಂದಾಡಿಯ ಜೀರ್ಣಾವಸ್ಥೆಯಲ್ಲಿರುವ ದೇವಾಲಯದಲ್ಲಿ ಅಪರೂಪದ ಮಹಿಷಮರ್ಧಿನಿಯ ಶಿಲ್ಪ ಕಂಡುಬಂದಿದೆ ಎಂದು ಪುರಾತತ್ತ್ವ ವಿದ್ವಾಂಸ ಹಾಗೂ ಆದಿಮ ಕಲಾ ಟ್ರಸ್ಟ್ ಸ್ಥಾಪಕ ಸಂಚಾಲಕ ಪ್ರೊ. ಟಿ.ಮುರುಗೇಶಿ ತಿಳಿಸಿದ್ದಾರೆ. ಕುಂದಬಾರಂದಾಡಿಯ ಮಹಿಷಮರ್ಧಿನಿಯು, ಆರು ಕೈಗಳನ್ನು ಹೊಂದಿದ್ದು, ಬಲಭಾಗದ ಮೊದಲ ಕೈಯಲ್ಲಿ ತ್ರಿಶೂಲ, ಎರಡನೇ ಕೈಯಲ್ಲಿ ಖಡ್ಗ, ಮೂರನೇ ಕೈಯಲ್ಲಿ ಗಧೆಯನ್ನು ಹಿಡಿದಿದ್ದಾಳೆ. ಎಡಭಾಗದ ಮೊದಲ ಕೈಯನ್ನು ಮಹಿಷನ ಬೆನ್ನಿನ ಮೇಲೆ ಇರಿಸಲಾಗಿದೆ, ಎರಡನೇ ಕೈ ತುಂಡಾಗಿದ್ದು, ಮೂರನೇ ಕೈಯಲ್ಲಿ ಬಿಲ್ಲನ್ನು ಹಿಡಿದಿದ್ದಾಳೆ. ತನ್ನ ಬಲಗಾಲನ್ನು ಮಹಿಷನ […]

ತಂದೆ ಬುದ್ದಿವಾದ ಹೇಳಿದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

ತುಮಕೂರು: ಶಾಲೆಗೆ ತಪ್ಪದೇ ಹೋಗು, ಚೆನ್ನಾಗಿ ಓದುಬರಹ ಕಲಿ ಎಂದು ತಂದೆ ಬುದ್ದಿವಾದ ಹೇಳಿದ್ದಕ್ಕೆ ಬಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರಂತಮಯ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಚೆನ್ನಕಾಟಯ್ಯನ ಗುಡ್ಲು ಗ್ರಾಮದಲ್ಲಿ ಜಗದೀಶ್ (14) ಎಂಬ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಗದೀಶ್ ಕೆಂಕೆರೆ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ. ಬಾಲಕನ ತಾಯಿಯ ಕುಟುಂಬ ಅಯ್ಯಪ್ಪ ಮಾಲೆ ಹಾಕಿದ್ದರು. ಈ ಸಂಬಂಧ ಅಲ್ಲಿಗೆ ಹೋಗಿ ಜಗದೀಶ್ ವಾಪಸ್ ಬಂದಿದ್ದ. ನಂತರ […]

ಉಡುಪಿ:ಜ್ಞಾನಸುದಾ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿಗಳ ನೇಮಕಾತಿ

ಉಡುಪಿ:ಕಾರ್ಕಳ, ಮಣಿಪಾಲ, ಉಡುಪಿ ಹಾಗೂ ಅಜೆಕಾರಿನ ಜ್ಞಾನಸುದಾ ಇನ್‌ಸ್ಟಿಟ್ಯೂಷನ್‌ಗಳಲ್ಲಿ ವಿವಿಧ ಹುದ್ದೆಗಳಿಗೆ ಸಿಬ್ಬಂದಿಗಳ ಅಗತ್ಯವಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಸಂಸ್ಕೃತ, ಇಂಗ್ಲಿಷ್, ಕನ್ನಡ, ಹಿಂದಿ ವಿಷಯಗಳಿಗೆ ಲೆಕ್ಚರರ್‌ಗಳು ಬೇಕಾಗಿದ್ದಾರೆ. ತರಬೇತಿ ಪಡೆದ ಪದವೀಧರ ಶಿಕ್ಷಕರು: ಸಮಾಜ ವಿಜ್ಞಾನ/ಇಂಗ್ಲಿಷ್, ಫಿಸಿಕ್ಸ್/ಗಣಿತ, ರಸಾಯನಶಾಸ್ತ್ರ/ಜೀವಶಾಸ್ತ್ರ, ಸಂಸ್ಕೃತ ವಿಷಯಗಳಿಗೆ ಬೇಕಾಗಿದ್ದಾರೆ. ಬೋಧನಾತೀತ ಹುದ್ದೆಗಳು: ಸ್ಟಾಫ್ ನರ್ಸ್, ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್‌ಗಳಿಗೆ ವಾರ್ಡನ್‌ಗಳು ಹಾಗೂ ಕೇರ್‌ಟೇಕರ್‌ಗಳ ಅಗತ್ಯವಿದೆ. ಅರ್ಜಿ ಸಲ್ಲಿಸಲು: www.jnanasudha.org ಸಂಪರ್ಕಿಸಲು ಕರೆ ಮಾಡಿ : 📞 […]