ಉಡುಪಿ:ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ :ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾಕ್ರೀಡಾಂಗಣದಲ್ಲಿ […]
ಉಡುಪಿ:ಕರ್ನಾಟಕ ಜಾನಪದ ಅಕಾಡೆಮಿಯ ಫೆಲೋಶಿಪ್ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಸಾಮಾನ್ಯ,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ತಿಳಿಸಿರುವ ಶೀರ್ಷಿಕೆಯಲ್ಲಿ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿಕೊಂಡು 5 ಪುಟಗಳ ಸಾರಲೇಖವನ್ನುಬರೆದು ಜನವರಿ 23 ರ ಒಳಗಾಗಿ ರಿಜಿಸ್ಟರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರುಇವರಿಗೆ ಕಳುಹಿಸಬಹುದಾಗಿದೆ. ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ನೀಡಲಾಗುವುದು. ಅರ್ಜಿ […]
ಉಡುಪಿ:ಕಲ್ಪವೃಕ್ಷಕ್ಕೆ ಹೊಸ ಕಾಯಕಲ್ಪ ದೊರೆತು ಜಿಲ್ಲೆಯು ದೇಶಕ್ಕೇ ಮಾದರಿಯಾಗಲಿದೆ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ:ಕರ್ನಾಟಕ ಕರಾವಳಿಯ ಜನರ ಜೀವನಾಡಿಯಾದ ತೆಂಗು ಬೆಳೆಯು ಬೇರಿನಿಂದ ಹಿಡಿದು ನಾರಿನವರೆಗೆ ಸರ್ವ ರೀತಿಯಲ್ಲೂ ಉಪಯೋಗಿಯಾಗಿ ಕಲಿಯುಗದ ಕಲ್ಪವೃಕ್ಷವೆನಿಸಿಕೊಂಡಿದೆ. ತೆಂಗುಬೆಳೆಗಾರರ ಸರ್ವತೋಮುಖ ಏಳಿಗೆಗಾಗಿ ಹಮ್ಮಿಕೊಂಡವಿಶಿಷ್ಟ ಮಾಹಿತಿ ಕಾರ್ಯಕ್ರಮದಿಂದಾಗಿ ಕಲ್ಪವೃಕ್ಷವಾದ ತೆಂಗು ಬೆಳೆಗೆ ಹೊಸ ಕಾಯಕಲ್ಪ ದೊರೆತು ಉಡುಪಿ ಜಿಲ್ಲೆಯು ತಮಿಳುನಾಡು ಮತ್ತುಕೇರಳವನ್ನು ಹಿಂದಿಕ್ಕಿ ದೇಶಕ್ಕೇ ಮಾದರಿಯಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ, ತೆಂಗು ಅಭಿವೃದ್ದಿ ಮಂಡಳಿ ಕೊಚ್ಚಿ, ತೋಟಗಾರಿಕೆ ಇಲಾಖೆ ಉಡುಪಿ,ಕೃಷಿ ಇಲಾಖೆ, ಭಾರತೀಯ ಕಿಸಾನ್ […]
ಉಡುಪಿ:ಮಹಿಳೆ ನಾಪತ್ತೆ

ಉಡುಪಿ: ಕಾಪು ತಾಲೂಕು ನಡ್ಸಾಲು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮಲ್ಲಿಕಾ (34) ಎಂಬ ಮಹಿಳೆಯು ಜನವರಿ 05 ರಂದು ತನ್ನ ತಾಯಿ ಮನೆಯಾದ ರಾಮನಗರಕ್ಕೆ ಹೋಗುವುದಾಗಿ ಹೇಳಿ ಹೋದವರು, ತಾಯಿಯ ಮನೆಗೂ ಹೋಗದೇ,ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ, ತುಳು, ಮರಾಠ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮೊ.ನಂ: 0820-2555452, ಮೊ.ನಂ:9480805450, […]