ಉಡುಪಿ:ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಎರಡನೇ ಹಂತದ ಕಚ್ಚಾತೈಲ ಸಂಗ್ರಹಣೆ ಕಾಮಗಾರಿಯನ್ನು ಕೈಗೊಳ್ಳುವಾಗ ಸ್ಥಳೀಯ ಜನಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತೆಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿ ಕಚ್ಚಾತೈಲ ಸಂಗ್ರಹಣೆ ಘಟಕದ ಎರಡನೇ ಹಂತದ ಕಾಮಗಾರಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]
ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಬಡಗಬೆಟ್ಟು ಗ್ರಾಮದ ನಿವಾಸಿ ನಿರ್ವಾಣ ಸ್ವಾಮಿ ಹೆಚ್.ಎಸ್ (53) ಎಂಬ ವ್ಯಕ್ತಿಯು ಕೆ.ಎಂ.ಸಿ ಮಣಿಪಾಲದ Terrier security ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಜನವರಿ 2 ರಂದು ಬ್ಯಾಸೆಲ್ ಮಿಷನ್ ಹಾಲ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿದ್ದವರು ರಾತ್ರಿ 8.30 ರ ಬಳಿಕ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈ ಬಣ್ಣ, ಧೃಡ ಶರೀರ ಹೊಂದಿದ್ದು, ಕನ್ನಡ, ಹಿಂದಿ ಮಾತನಾಡಬಲ್ಲವರಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ […]
ಉಡುಪಿ:ಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳೆ ನಾಪತ್ತೆ

ಉಡುಪಿ: ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ, ಜನವರಿ 9 ರಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ವೇತ (21) ಎಂಬ ಮಹಿಳೆಯು ಅದೇ ದಿನ ಮಧ್ಯಾಹ್ನ 12.15 ರ ಬಳಿಕ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಬಿಳಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಸಪೂರ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ […]