ಉಡುಪಿ ಪರ್ಯಾಯ ಮಹೋತ್ಸವಕ್ಕೆ ಬಿಗಿ ಪೊಲೀಸ್ ಭದ್ರತೆ; 1500ಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ – ಉಡುಪಿ ಎಸ್ಪಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲು ಉದ್ದೇಶಿಸಲಾಗಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಯ 1500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾ ಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಪರ್ಯಾಯ ಮಹೋತ್ಸವಕ್ಕೆ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಜನರು ಸೇರುವ ನಿರೀಕ್ಷೆ ಇದೆ. ಅಲ್ಲದೇ ಗಣ್ಯ ವ್ಯಕ್ತಿಗಳು ಜಿಲ್ಲಾ ಭೇಟಿ ಹಾಗೂ ಜಿಲ್ಲೆಯ ಸೂಕ್ಷತೆಯನ್ನು ಕಂಡು ಮುಂಜಾಗ್ರತೆಗಾಗಿ ಮತ್ತು ಬಂದೊಬಸ್ತ್ […]
ಶಬರಿಮಲೆ ಅಯ್ಯಪ್ಪ ದೇಗುಲ: ಮಕರಜ್ಯೋತಿಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು

ಶಬರಿಮಲೆ: ಇಲ್ಲಿನ ಅಯ್ಯಪ್ಪ ದೇಗುಲಕ್ಕೆ ವಿವಿಧ ರಾಜ್ಯಗಳಿಂದ ಬಂದಿದ್ದ ಸಾವಿರಾರು ಭಕ್ತರು ಬುಧವಾರ ಸಂಜೆ 6.43ಕ್ಕೆ ಮಕರಜ್ಯೋತಿಯನ್ನು ಕಣ್ತುಂಬಿಕೊಂಡರು. ಇರುಮುಡಿ ಹೊತ್ತಿದ್ದ ಭಕ್ತರು ದೇವಾಲಯದ ಆವರಣ ಮತ್ತು ಇತರೆಡೆಗಳಲ್ಲಿ ಮಕರಜ್ಯೋತಿ ದರ್ಶನಕ್ಕಾಗಿ ಮಧ್ಯಾಹ್ನದಿಂದಲೇ ಕಾದು ನಿಂತಿದ್ದರು. ದೇಗುಲದಿಂದ 8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದ ಕಾಡಿನೊಳಗಿನಿಂದ ಮಕರಜ್ಯೋತಿ ಕಾಣಿಸಿಕೊಂಡಾಗ ಪುಳಕಿತರಾದರು. ಜ್ಯೋತಿಯನ್ನು ವೀಕ್ಷಿಸಲು ಶಬರಿಮಲೆ ಮತ್ತು ಸುತ್ತಮುತ್ತಲಿನ ವಿವಿಧ ವೀಕ್ಷಣಾ ಸ್ಥಳಗಳಲ್ಲಿ ಸಾವಿರಾರು ಭಕ್ತರು ನೆರೆದಿದ್ದರು. ಪತ್ತನಂತಿಟ್ಟದ ಪಂದಳಂ ಅರಮನೆಯಿಂದ ಮೆರವಣಿಗೆ ಮೂಲಕ ತರಲಾದ ‘ತಿರುವಾಭರಣ’ದಿಂದ (ಪವಿತ್ರ […]
ಉಡುಪಿ:ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ :ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ:ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು ಭೋವಿ ಸಮಾಜದವರು ಸೇರಿದಂತೆ ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘ (ರಿ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಯೋಗಿ ಸಿದ್ಧರಾಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಹನ್ನೆರಡನೆಯ ಶತಮಾನದ ಪ್ರಮುಖ […]
ಉಡುಪಿ:ಹೊಸ ಮೆರುಗಿನೊಂದಿಗೆ ಉಡುಪಿ ರೈಲು ನಿಲ್ದಾಣ ಪ್ರಯಾಣಿಕರಿಗೆ ಲಭ್ಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹು ದಿನಗಳ ಬೇಡಿಕೆ ಈಡೇರಿದೆ. ಸುಮಾರು 2.40 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ಸೌಲಭ್ಯಗಳು ಜಿಲ್ಲಾಡಳಿತದ ಸಹಕಾರದೊಂದಿಗೆ ಲೋಕಾರ್ಪಣೆಗೊಂಡಿದೆ. ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲ್ವೆ ನಿಲ್ದಾಣಕ್ಕೆ ಹೊಸ ಕಾಯಕಲ್ಪ ನೀಡಿ ಹೊಸ ಮೆರುಗಿನೊಂದಿಗೆ ಕರಾವಳಿ ಭಾಗದ ಜನರಿಗೆ ಲಭ್ಯವಾಗಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ಉಡುಪಿ ರೈಲು ನಿಲ್ದಾಣ ಪರಿಸರದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿ. […]
ಉಡುಪಿ:ಪ.ಜಾತಿ/ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024 ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರಾಜ್ಯದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ […]