ಶೀರೂರು ಪರ್ಯಾಯ: ಜ.17-18ರಂದು ನಗರಸಭೆ ಹಾಗೂ ಕೆಲ ಗ್ರಾಪಂ ವ್ಯಾಪ್ತಿಯಲ್ಲಿ ಮದ್ಯ ನಿಷೇಧ

ಉಡುಪಿ: ಶೀರೂರು ಪರ್ಯಾಯದ ಹಿನ್ನೆಲೆಯಲ್ಲಿ ಜ.17ರ ಬೆಳಿಗ್ಗೆ 10ಗಂಟೆಯಿಂದ ಜ.18ರ ಸಂಜೆ 6 ಗಂಟೆಯವರೆಗೆ ನಗರಸಭಾ ವ್ಯಾಪ್ತಿ‌ ಹಾಗೂ ಕೆಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆದೇಶ ಹೊರಡಿಸಿದ್ದಾರೆ. ಉಡುಪಿ ನಗರ ಸಭಾ ವ್ಯಾಪ್ತಿ ಹಾಗೂ ಉದ್ಯಾವರ, ಕೊರಂಗ್ರಪಾಡಿ, ಅಲೆವೂರು, ಹಿರೇಬೆಟ್ಟು, ಕುತ್ಪಾಡಿ ಕಡೆಕಾರು, ಕಿದಿಯೂರು, ಮೂಡುತೋನ್ನೆ ಹಾಗೂ ಪಡುತೋನ್ಸೆ ಗ್ರಾಮ ವ್ಯಾಪ್ತಿಯಲ್ಲಿ (10-15 ಕಿ.ಮೀ) ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ […]

ಉಡುಪಿ: ಶೀರೂರು ಪರ್ಯಾಯ ಮಹೋತ್ಸವಕ್ಕೆ ಶ್ರೀಕೃಷ್ಣ ನಗರಿ ಸಜ್ಜು; 2 ಲಕ್ಷಕ್ಕೂ ಅಧಿಕ ಭಕ್ತರು ಭಾಗಿಯಾಗುವ ನಿರೀಕ್ಷೆ – ಯಶ್ ಪಾಲ್ ಸುವರ್ಣ.

ಉಡುಪಿ: ಶೀರೂರು ಮಠಾಧೀಶರಾದ ಪರಮ ಪೂಜ್ಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಸರ್ವ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಉಡುಪಿ ಜನತೆಯ ಸಹಕಾರದಿಂದ ಅತ್ಯಂತ ವ್ಯವಸ್ಥಿತ ಹಾಗೂ ವೈಭವಯುತವಾಗಿ ಶ್ರದ್ಧಾ ಭಕ್ತಿಯಿಂದ ನಡೆಸಲು ಪೊಡವಿಗೊಡೆಯ ಶ್ರೀಕೃಷ್ಣನ ನಗರಿ ಉಡುಪಿ ಸಜ್ಜಾಗಿದೆ ಎಂದು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷರಾದ ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದ್ದಾರೆ. ಸುಮಾರು 2 ಲಕ್ಷ್ಮಕ್ಕೂ ಮಿಕ್ಕಿ ಭಕ್ತರು ಪರ್ಯಾಯ ಮಹೋತ್ಸವದಲ್ಲಿ ಭಾಗಿಯಾಗುವ ನಿರೀಕ್ಷೆ ಇದ್ದು, ಜನವರಿ 17 ರಾತ್ರಿ ಕೂಡಾ […]

ಜ.25 – 29: ಕಾರ್ಕಳದ ಸಂತ ಲೋರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ

ಕಾರ್ಕಳ: ಕಾರ್ಕಳದ ಸಂತ ಲೋರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ ಜ.25, 26, 27, 28 ಹಾಗೂ 29ರಂದು ಜರಗಲಿದೆ. ಈ ಬಗ್ಗೆ ಎಲ್ಲಾ ಪೂರ್ವಭಾವಿ ಸಿದ್ಧತೆಗಳು ನಡೆದಿದ್ದು, ಬಸಿಲಿಕದ ವತಿಯಿಂದ ವಾರ್ಷಿಕ ಮಹೋತ್ಸವದ ಆಚರಣೆಗೆ ಸನ್ನದ್ಧರಾಗಿದ್ದೇವೆ ಎಂದು ಬಸಿಲಿಕಾದ ನಿರ್ದೇಶಕ ವಂ.ಆಲ್ಟನ್‌ ಡಿಸೋಜ ಹೇಳಿದ್ದಾರೆ. ಕಾರ್ಕಳ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ’ ಎಂಬ ಧೈಯ ವಾಕ್ಯದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ಚಾಲನೆಯನ್ನು ನೀಡುವ ನವದಿನಗಳ ಪ್ರಾರ್ಥನೆ ಜ.16ರಿಂದ ಆರಂಭಗೊಂಡು ಜ.24ರವರೆಗೆ ನಡೆಯಲಿದೆ. […]

ಕಾರ್ಕಳ: ಗ್ಯಾಸ್ ಸಿಲಿಂಡರ್ ಸ್ಪೋಟ; ಲಕ್ಷಾಂತರ ರೂಪಾಯಿ ನಷ್ಟ.

ಕಾರ್ಕಳ: ಸಾಣೂರು ಗ್ರಾಮದ ಮುದ್ದಣ್ಣ ನಗರದ ಮನೆಯೊಂದರಲ್ಲಿ ಗುರುವಾರ (ಜ.16) ಮಧ್ಯರಾತ್ರಿ ಗ್ಯಾಸ್‌ ಸಿಲಿಂಡ‌ರ್ ಸ್ಫೋಟಗೊಂಡ ಘಟನೆ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಹಾನಿಗೊಳಗಾಗಿವೆ. ಮುದ್ದಣ್ಣ ನಗರದ ನಿವಾಸಿ ವಾರಿಜಾ ಅವರ ಮನೆಯಲ್ಲಿ ರಾತ್ರಿ 1.30ರ ವೇಳೆಗೆ ಈ ದುರ್ಘಟನೆ ನಡೆದಿದೆ. ಅಡುಗೆ ಮನೆಯಲ್ಲಿದ್ದ ಸಿಲಿಂಡ‌ರ್ ಅನಿಲ ಸೋರಿಕೆಯಾಗಿ ಸ್ಫೋಟಗೊಂಡಿದೆ ಎನ್ನಲಾಗಿದ್ದು, ಸ್ಫೋಟದ ಸದ್ದಿಗೆ ಮನೆಯವರು ಹಾಗೂ ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಘಟನೆಯ ಸಮಯದಲ್ಲಿ ಮನೆಯವರು ಇನ್ನೊಂದು […]

ಉಡುಪಿ:ಮಹಿಳೆಯರಲ್ಲಿ ಕ್ಯಾನ್ಸರ್ ಬಗ್ಗೆ ಮಾಹಿತಿ ಶಿಬಿರ

ಉಡುಪಿ:ಶ್ರೀ ವೈ ಎಲ್ ಎನ್ ಜೋತಿಷ್ಯ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಹಾಗೂ ರೋಟರಿ ಕ್ಲಬ್ ಉಡುಪಿ ಹಾಗೂ ಇನ್ನರ್ ವೀಲ್ ಕ್ಲಬ್ ಉಡುಪಿ ಇವರ ವತಿಯಿಂದ ಮಹಿಳೆಯರಲ್ಲಿ ಕ್ಯಾನ್ಸರ್ ಬಗ್ಗೆ ಮಾಹಿತಿ ಶಿಬಿರ ಉಡುಪಿ ಕಡಿಯಾಳಿಯ ಮಹಿಷ ಮರ್ದಿನಿ ಹೈಯರ್ ಪ್ರೈಮರಿ ಶಾಲೆಯ ರೋಟರಿ ಸಭಾಭವನದಲ್ಲಿ ತಾರೀಕು 15.01.2026ರಂದು ನೆರವೇರಿತು. ಇಂಚರ ಸರ್ಜಿಕಲ್ ತಜ್ಞ ಡಾ ವೈ ಸುದರ್ಶನ್ ರಾವ್ ಇವರು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್, ಅಂಡಾಶಯದ ಕ್ಯಾನ್ಸರ್ […]