ಉಡುಪಿ‌ XPRESS.COM ಉಡುಪಿ ಪರ್ಯಾಯ ವಿಶೇಷ ಸಂಚಿಕೆ “ಪರ್ಯಾಯ ಚರಿತೆ”ಬಿಡುಗಡೆ

ಉಡುಪಿ: ಉಡುಪಿ‌ xpress.com ಡಿಜಿಟೆಲ್ ಸುದ್ದಿ ಮಾಧ್ಯಮ, ಉಡುಪಿಯ ಶೀರೂರು ಪರ್ಯಾಯ ಮಹೋತ್ಸವದ ಕುರಿತು ಸಿದ್ಧಪಡಿಸಿದ ವಿಶೇಷ ಸಂಚಿಕೆ “ಪರ್ಯಾಯ ಚರಿತೆ” ಯನ್ನು ಶೀರೂರು ಮಠದ ಪರ್ಯಾಯ ಪೀಠವೇರಲಿರುವ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಶನಿವಾರ ಶೀರೂರು ಮಠದಲ್ಲಿ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ Xprss.Com ಸಂಪಾದಕರಾದ ಪ್ರಸಾದ್ ಶೆಣೈ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥರಾದ ಸ್ವರೂಪ್ ಶ್ರೀಯನ್, ಅಶೋಕ್ ಆಚಾರ್ಯ ಕೊಂಡಾಡಿ ಉಪಸ್ಥಿತರಿದ್ದರು. ಸಂಚಿಕೆಯ ಕುರಿತ ವಿಡಿಯೋ ನೋಡಲು ಈ ಕೆಳಗಿನ ಫೇಸ್ಬುಕ್ ಲಿಂಕ್ […]

ಉಡುಪಿ:ಶೈಕ್ಷಣಿಕ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ಮರುಪಾವತಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳು ಪ್ರಸ್ತಾವನೆಯನ್ನು ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂ.ಸಂ: 0820-2521324/9845432303 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜನವರಿ 19 ಮತ್ತು 20 ರಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜ. 19 ರಂದು ಬೆಳಗ್ಗೆ 10 ಗಂಟೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ […]

ಉಡುಪಿ:ಪಿ.ಎಂ. ಶ್ರಮಯೋಗಿ ಮಾನ್-ಧನ್ ಯೋಜನೆ: ವಿಶೇಷ ನೋಂದಣಿ ಅಭಿಯಾನ

ಉಡುಪಿ: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ National Pension Scheme for the Traders and self Employed Persons (NPS-Traders) ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಲು ಜನವರಿ 15 ರಿಂದ ಮಾರ್ಚ್ 15 ರ ವರೆಗೆ “ವಿಶೇಷ ನೋಂದಣಿ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿದ್ದು, 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದೆ. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ.ನಿಂದ 200 […]

ಉಡುಪಿ: ಸ್ನೇಹಿತನ ಹೆಸರಿನಲ್ಲಿ ಕರೆ ಮಾಡಿ ಲಕ್ಷಾಂತರ ರೂಪಾಯಿ ವಂಚನೆ; ಪ್ರಕರಣ ದಾಖಲು

ಉಡುಪಿ: ಸ್ನೇಹಿತ ಹೆಸರು ಹೇಳಿಕೊಂಡು ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರಿಗೆ ಒಂದು ಲಕ್ಷ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.15ರಂದು ಅಪರಿಚಿತ ವ್ಯಕ್ತಿಯು ತಾನು ಸಂದೀಪ್ ಎಂದು ಹೇಳಿ ಕುಂಜಿಬೆಟ್ಟು ನಿವಾಸಿ ಅಶೋಕ್ ಎಂಬವರಿಗೆ ಕರೆ ಮಾಡಿದ್ದನು. ಅಶೋಕ್, ಈ ಹಿಂದೆ ತನ್ನ ಜೊತೆ ಕೆಲಸ ಮಾಡಿದ್ದ ವ್ಯಕ್ತಿಯ ಹೆಸರು ಕೂಡ ಸಂದೀಪ್ ಆಗಿರುವುದರಿಂದ ಆತನೇ ಇರಬಹುದೆಂದು ಮಾತನಾಡಿದರು. ಆತ ‘ನನ್ನ ಅಣ್ಣನನ್ನು ಹೃದಯ ಸಂಬಂಧಿ ಖಾಯಿಲೆ […]