ಉಡುಪಿ: ಶೀರೂರ ಪರ್ಯಾಯಕ್ಕೆ ಮಟ್ಟುಗುಳ್ಳ ಹೊರೆಕಾಣಿಕೆ ಸಮರ್ಪಣೆ

ಉಡುಪಿ: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರ ಪ್ರಥಮ ಪರ್ಯಾಯಕ್ಕೆ ಮಟ್ಟು ಭಾಗದ ಭಕ್ತರು ಮಟ್ಟುಗುಳ್ಳ ಹೊರೆಕಾಣಿಕೆ ಸಮರ್ಪಿಸಿದರು. ನಗರದ ಸಂಸ್ಕೃತ ಕಾಲೇಜಿನ ಮುಂಭಾಗದಲ್ಲಿ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಟ್ಟು ಭಾಗದ ಭಕ್ತರನ್ನು ಸ್ವಾಗತಿಸಿದರು. ಬಳಿಕ ಗುಳ್ಳ ತುಂಬಿದ ಬುಟ್ಟಿಯನ್ನು ಹೊತ್ತು ಭಕ್ತರು ಸಾಲಾಗಿ ಮೆರವಣಿಗೆ ಮೂಲಕ ರಥಬೀದಿಗೆ ಬಂದು ಬಳಿಕ ಹೊರೆಕಾಣಿಕೆ ಮಂಟಪ ತಲುಪಿದರು. ಶ್ರೀ ಕೃಷ್ಣ ಮಠ ಮತ್ತು ಮಟ್ಟುಗುಳ್ಳಕ್ಕೆ ವಿಶೇಷ ಸಂಬಂಧವಿದೆ. ವಾದಿರಾಜ ಸ್ವಾಮಿಗಳು ಅನುಗ್ರಹಿಸಿ ನೀಡಿದ ಬೀಜದಿಂದ ಹುಟ್ಟಿಕೊಂಡ […]
ನಾಳೆ (ಜ.18) ‘ಕರಾವಳಿಯ ನಿರ್ದಿಗಂತ’ ಉದ್ಘಾಟನೆ- ಖ್ಯಾತ ನಟ ಪ್ರಕಾಶ್ ರಾಜ್

ಉಡುಪಿ: ಕಳೆದ ಎರಡೂವರೆ ವರ್ಷಗಳಿಂದ ನಾಟಕ, ವಿವಿಧ ರಂಗ ಚಟುವಟಿಕೆಗಳ ಮೂಲಕ ಮೈಸೂರಿನಲ್ಲಿ ಗುರುತಿಸಿಕೊಂಡಿರುವ ‘ನಿರ್ದಿಗಂತ’ ಇದೀಗ ನಿರಂತರ ರಂಗ ಚಟುವಟಿಕೆಗಳು ನಡೆಯುತ್ತಿರುವ ಉಡುಪಿಯ ಮೂಲಕ ಕರಾವಳಿಗೂ ಕಾಲಿರಿಸಿದ್ದು, ಜ.18ರಂದು ‘ಕರಾವಳಿಯ ನಿರ್ದಿಗಂತ’ ಉದ್ಘಾಟನೆಗೊಳ್ಳಲಿದೆ ಎಂದು ನಿರ್ದಿಗಂತದ ಸ್ಥಾಪಕರಲ್ಲೊಬ್ಬರಾದ ರಂಗಕರ್ಮಿ ಹಾಗೂ ಖ್ಯಾತ ಚಿತ್ರನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯ ನಿರ್ದಿಗಂತದ ಈ ಎಲ್ಲಾ ಕಾರ್ಯಕ್ರಮಗಳು ಜ.18ರಿಂದ 21ರವರೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ. ಶ್ರೀರಂಗಪಟ್ಟಣದಲ್ಲಿ ಪ್ರಾರಂಭಗೊಂಡ […]
ಉಡುಪಿ:ಪರೀಕ್ಷಾ ಸವಾಲುಗಳು, ವೃತ್ತಿ ಮಾರ್ಗದರ್ಶನ ಮತ್ತು ಆರೋಗ್ಯ – ನೈರ್ಮಲ್ಯ ತರಬೇತಿ ಕಾರ್ಯಕ್ರಮ

ಉಡುಪಿ:ರೋಟರಿ ಕ್ಲಬ್ ಬ್ರಹ್ಮಾವರ, ರೋಟರ‍್ಯಾಕ್ಟ್ ಕ್ಲಬ್ ಬ್ರಹ್ಮಾವರ,ಇಂಟರ‍್ಯಾಕ್ಟ್ ಕ್ಲಬ್, ಕಳತ್ತೂರು ಸಂತೆಕಟ್ಟೆ ಪ್ರೌಢಶಾಲೆ, ಜೇಸಿಐ ಕಲ್ಯಾಣಪುರ, ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ಇವರ ಸಂಯುಕ್ತ ಆಶ್ರಯದಲ್ಲಿ ಪರೀಕ್ಷಾಸವಾಲುಗಳು, ವೃತ್ತಿ ಮಾರ್ಗದರ್ಶನ ಮತ್ತು ಆರೋಗ್ಯ – ನೈರ್ಮಲ್ಯ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಕಳತ್ತೂರು ಸಂತೆಕಟ್ಟೆಯ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾರವರು ಉದ್ಘಾಟಿಸಿ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಬ್ರಹ್ಮಾವರದ ಅಧ್ಯಕ್ಷರಾದ ಸತೀಶ್ ಶೆಟ್ಟಿಯವರು ವಹಿಸಿ ಸ್ವಾಗತಿಸಿದರು. […]
ಉಡುಪಿ:ಬ್ರಹ್ಮಾವರ ರೋಟರಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಹೇಗೆ ? ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮ

ಉಡುಪಿ:ರೋಟರಿ ಕ್ಲಬ್ ಬ್ರಹ್ಮಾವರ, ರೋಟರ‍್ಯಾಕ್ಟ್ ಕ್ಲಬ್ ಬ್ರಹ್ಮಾವರ,ಇಂಟರ‍್ಯಾಕ್ಟ್ ಕ್ಲಬ್, ಸರಕಾರಿ ಪ್ರೌಢ ಶಾಲೆ ಕರ್ಜೆ, ಜೇಸಿಐ ಕಲ್ಯಾಣಪುರ, ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ಇವರ ಸಂಯುಕ್ತ ಆಶ್ರಯದಲ್ಲಿ ಪರೀಕ್ಷೆ ಎದುರಿಸುವುದು ಹೇಗೆ ? ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಕರ್ಜೆಯ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲಕ್ಷಾಧಿನಿ ಉದ್ಘಾಟಿಸಿ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಬ್ರಹ್ಮಾವರದ ಅಧ್ಯಕ್ಷರಾದ ಸತೀಶ್ ಶೆಟ್ಟಿಯವರು ವಹಿಸಿಸ್ವಾಗತಿಸಿದರು. ಸಂಪನ್ಮೂಲ […]
ಉಡುಪಿ:ನಟ, ಕೇಂದ್ರ ಸಚಿವ ಸುರೇಶ್ ಗೋಪಿ ಶ್ರೀಕೃಷ್ಣ ಮಠಕ್ಕೆ ಭೇಟಿ- ದೇವರ ದರ್ಶನ

ಉಡುಪಿ: ಪುತ್ತಿಗೆ ಪರ್ಯಾಯ ಮಂಗಳೋತ್ಸವ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣಮಠಕ್ಕೆ ಮಲೆಯಾಳಂ ನಟ ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಟ ಹಾಗೂ ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಮಠಕ್ಕೆ ಭೇಟಿ ನೀಡಿದ್ದ ಸುರೇಶ್ ಗೋಪಿ ಅವರು ಶ್ರೀಕೃಷ್ಣನ ದರ್ಶನ ಪಡೆದರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ಕೇಂದ್ರ ಸಚಿವರಿಗೆ ಮಠದ ವತಿಯಿಂದ ಶ್ರೀ ಸುಗುಣೇಂದ್ರ ತೀರ್ಥರು ವಿಶೇಷ ಗೌರವ […]