ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಉಡುಪಿ ಪ್ರವಾಸ ರದ್ದು

ಉಡುಪಿ: ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಜ.17 ಹಾಗೂ 18ರ ಎರಡು ದಿನಗಳ ಉಡುಪಿ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಸಚಿವರು ಭೀಮಣ್ಣ ಖಂಡ್ರೆ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬೀದರ್ ಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ ಶ್ರೀಕೃಷ್ಣಮಠದಲ್ಲಿ ಸಪ್ತರಥೋತ್ಸವದ ವೈಭವ- ಸಾವಿರಾರು ಭಕ್ತರು ಭಾಗಿ

ಉಡುಪಿ: ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ಮಂಗಳಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಪೊಡವಿಗೊಡೆಯ ಶ್ರೀಕೃಷ್ಣನ ಉತ್ಸವವನ್ನು ಸಪ್ತರಥೋತ್ಸವ (ಏಳುರಥ)ದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಕೃಷ್ಣನ ಉತ್ಸವ ಮೂರ್ತಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ದೇವರಿಗೆ ಪೂಜೆ, ನೈವೇದ್ಯ ಸಮರ್ಪಿಸಿ ಮಹಾ ಮಂಗಳಾರತಿ ನೇರವೇರಿಸಿದ ನಂತರ ಸಪ್ತರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಚಂಡೆ, ಮಂಗಳವಾದ್ಯ, ವೇದ ಘೋಷಗಳೊಂದಿಗೆ ಭಕ್ತರು ಒಂದೊಂದಾಗಿ ರಥವನ್ನು ಎಳೆದು ಭಕ್ತಿ ಮೆರೆದರು. ಕೊನೆಯದಾಗಿ ಬ್ರಹ್ಮರಥವನ್ನು ಎಳೆಯಲಾಯಿತು. ಪುತ್ತಿಗೆ ಮಠದ […]
ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ ಆರಂಭ- ಬಂದೋಬಸ್‌ಗೆ 1500ಕ್ಕೂ ಅಧಿಕ ಪೊಲೀಸರ ನಿಯೋಜನೆ- ಎಸ್ಪಿ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಪರ್ಯಾಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಯ 1500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಪರ್ಯಾಯ ಮಹೋತ್ಸವಕ್ಕೆ ಜಿಲ್ಲೆ ಮತ್ತು ಹೊರ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಜನರು ಸೇರುವ ನಿರೀಕ್ಷೆ ಇದೆ. ಅಲ್ಲದೇ ಗಣ್ಯ ವ್ಯಕ್ತಿಗಳು ಜಿಲ್ಲಾ ಭೇಟಿ ಹಾಗೂ ಜಿಲ್ಲೆಯ ಸೂಕ್ಷ್ಮತೆಯನ್ನು ಕಂಡು ಮುಂಜಾಗ್ರತೆಗಾಗಿ ಮತ್ತು […]
ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ವೆಬ್‌ಸೈಟ್‌ಗಳ ನಿಷೇಧ; ಕೇಂದ್ರ ಸರ್ಕಾರದ ಮಹತ್ವದ ಆದೇಶ!

ನವದೆಹಲಿ: ಅಕ್ಟೋಬರ್ 2025 ರಲ್ಲಿ ಜಾರಿಗೆ ಬಂದ ಆನ್‌ಲೈನ್ ಗೇಮಿಂಗ್ ಕಾಯ್ದೆಯಡಿಯಲ್ಲಿ ಸರ್ಕಾರವು ಶುಕ್ರವಾರ 200 ಕ್ಕೂ ಹೆಚ್ಚು (Gambling Websites Ban) ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟ ವೆಬ್‌ಸೈಟ್‌ಗಳಿಗೆ ಪ್ರವೇಶವನ್ನು ನಿರ್ಬಂಧಿಸಿದೆ. “ಭಾರತ ಸರ್ಕಾರ ಇಂದು 242 ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದ ವೆಬ್‌ಸೈಟ್ ಲಿಂಕ್‌ಗಳನ್ನು ನಿರ್ಬಂಧಿಸಿದೆ. ಇಲ್ಲಿಯವರೆಗೆ, 7,800 ಕ್ಕೂ ಹೆಚ್ಚು ಅಂತಹ ವೇದಿಕೆಗಳನ್ನು ತೆಗೆದುಹಾಕಲಾಗಿದೆ, ಆನ್‌ಲೈನ್ ಗೇಮಿಂಗ್ ಕಾಯ್ದೆ ಅಂಗೀಕರಿಸಿದ ನಂತರ ಜಾರಿ ಕ್ರಮಗಳು ತೀವ್ರಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ, 7,800 […]
ಉಡುಪಿ: ವಿದ್ಯಾರ್ಥಿ ನಾಪತ್ತೆ

ಉಡುಪಿ: 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿತ್ರದುರ್ಗ ಮೂಲದ ದರ್ಶನ್ ಎಸ್ (23) ಎಂದು ಗುರುತಿಸಲಾಗಿದೆ. ಈತ ಜ.12ರಂದು ರಾತ್ರಿ ಯಾರಿಗೂ ಹೇಳದೆ ಹಾಸ್ಟೆಲ್‌ನಿಂದ ಹೋದವನು ಮನೆಗೂ ಹೋಗದೆ ನಾಪತ್ತೆಯಾಗಿ ದ್ದಾನೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.