ಉಡುಪಿ: ಫಾರ್ಮಸಿ ಅಸಿಸ್ಟೆಂಟ್ ಹುದ್ದೆಗೆ ಮಹಿಳೆಯರು/ ಪುರುಷರು ಬೇಕಾಗಿದ್ದಾರೆ.

ಉಡುಪಿ: ಉಡುಪಿಯ ಪ್ರತಿಷ್ಠಿತ ಜಲಜ ಕ್ಲಿನಿಕ್’ಗೆ ಫಾರ್ಮಸಿ ಅಸಿಸ್ಟೆಂಟ್ ಜೊತೆಗೆ ಆಫೀಸ್ ಬಿಲ್ಲಿಂಗ್ ಅನುಭವ ಇರುವವರು ಮಹಿಳೆಯರು/ ಪುರುಷರು ಬೇಕಾಗಿದ್ದಾರೆ. ಕೆಲಸದ ಸಮಯ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:30ರವರೆಗೆ, ಸಂಜಿ 4:00 ರಿಂದ 7:30ರವರೆಗೆ. ಹುದ್ದೆಯಲ್ಲಿ ಅನುಭವ ಇದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ಸಂಪರ್ಕಿಸಬಹುದುಮೊ: 7349093199
ಉಡುಪಿ:ಕ್ರೀಡಾ ಶಾಲೆ/ನಿಲಯ ಪ್ರವೇಶಾತಿ: ಕ್ರೀಡಾಪಟುಗಳ ಆಯ್ಕೆ

ಉಡುಪಿ: 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಜೂನ್-1 ನೇ ತಾರೀಕಿನಿಂದ 8 ನೇ ತರಗತಿ ಪ್ರವೇಶಕ್ಕೆ ಅರ್ಹತೆ ಹೊಂದುವ 14 ವರ್ಷದೊಳಗಿನ ಬಾಲಕ/ಬಾಲಕಿಯರನ್ನು ಕ್ರೀಡಾ ವಸತಿ ಶಾಲೆ/ನಿಲಯ ಪ್ರವೇಶಕ್ಕೆ ಆಯ್ಕೆ ಮಾಡಲಾಗುತ್ತಿದ್ದು, ಜನವರಿ 21 ರಂದು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಕ್ರೀಡಾಪಟುಗಳಿಗೆ ಬೆಳಿಗ್ಗೆ 10.00 ಗಂಟೆಗೆ ಕುಂದಾಪುರ ಗಾಂಧಿ ಮೈದಾನ, ಜನವರಿ 22 ರಂದು ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಕ್ರೀಡಾಪಟುಗಳಿಗೆ ಬೆಳಿಗ್ಗೆ 10.00 ಗಂಟೆಗೆ ಮುನಿಯಾಲು […]
ಉಡುಪಿ:ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ:ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ, ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಈಗಾಗಲೇ ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧ ಬದಲಿ ಮಾರ್ಗ ಮತ್ತು ಪಾರ್ಕಿಂಗ್ ನಿಷೇಧ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಕಾರ್ಕಳ-ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವಂತಹ ವಾಹನಗಳಿಗೆ ಈ ಕೆಳಕಂಡ ಮಾರ್ಗದಲ್ಲಿ ಸಂಚರಿಸುವ ಬಗ್ಗೆ ಪರಿಷ್ಕರಿಸಿ, ಅಧಿಸೂಚನೆ ಹೊರಡಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ. ಕಾರ್ಕಳ- ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವಂತಹ […]