ಕಾಪು: ಕೊರಂಟಿಕಟ್ಟೆ ನವೀಕೃತ ಮಸೀದಿ ಉದ್ಘಾಟನೆ; ಸೌಹಾರ್ದ ಸಂಗಮ

ಕಾಪು: ಕಳತ್ತೂರು ಕೊರಂಟಿಕಟ್ಟೆಯಲ್ಲಿ ನವೀಕೃತಗೊಂಡ ಮಸ್ಜಿದ್ ಇ ನೂರು ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸೌಹಾರ್ದ ಸಂಗಮ ಸಮಾರಂಭವನ್ನು ರವಿವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಗಿತ್ತು. ಸೌಹಾರ್ದ ಸಂಗಮವನ್ನು ಮಜೂರು ಮಲ್ಲಾರು ಬದ್ರಿಯಾ ಜುಮ್ಮಾ ಮಸೀದಿಯ ಖತೀಬ್ ಅಬ್ದುಲ್ ರಶೀದ್ ಕಾಮಿಲ್ ಸಖಾಫಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಸೀದಿ ಅಧ್ಯಕ್ಷ ಬಿ.ಎ.ಫಕ್ರುದ್ದೀನ್ ಅಲಿ ವಹಿಸಿದ್ದರು. ಖತೀಬ್ ನೌಫಲ್ ಸಖಾಫಿ ದುವಾ ನೆರವೇರಿಸಿದರು. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿ […]

ರಾಸಲೀಲೆಯ ವೀಡಿಯೋ ವೈರಲ್:IPS ಅಧಿಕಾರಿ ಡಿಜಿಪಿ ಕೆ.ರಾಮಚಂದ್ರ ರಾವ್ ಅಮಾನತು

ಬೆಂಗಳೂರು: ಕರ್ನಾಟಕದ ಡಿಜಿಪಿ ಕೆ.ರಾಮಚಂದ್ರರಾವ್ ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆ ಸಮವಸ್ತ್ರದಲ್ಲಿರುವಾಗ ನಡೆದಿರುವ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚನೆ […]

ಉಡುಪಿ:ಜಿಲ್ಲಾ ಮಾನವ ಅಭಿವೃದ್ಧಿ ವರದಿ ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ವರದಿ ಸಿದ್ಧಪಡಿಸಲು ನಿಖರ ದತ್ತಾಂಶ ನೀಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಉಡುಪಿ: ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸಲು ಅಧಿಕಾರಿಗಳು ಕಾಳಜಿ ವಹಿಸುವುದರೊಂದಿಗೆ ನಿಖರ ದತ್ತಾಂಶವನ್ನು ಕಾಲಮಿತಿಯ ಒಳಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 […]

ಉಡುಪಿ:ಕೆಲಸದ ಒತ್ತಡ ನಿವಾರಣೆಗೆ ಕ್ರೀಡಾಕೂಟ ಸಹಕಾರಿ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ: ಸರಕಾರಿ ನೌಕರರು ಸಮಯದ ಚೌಕಟ್ಟಿನಲ್ಲಿ ದುಡಿಯುವ ಸಂದರ್ಭದಲ್ಲಿ ಹೆಚ್ಚಿನ ಒತ್ತಡವನ್ನು ಅನುಭವಿಸುತ್ತಾರೆ. ಮಾನಸಿಕ ಹಾಗೂ ದೈಹಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ದಿನನಿತ್ಯ ಕ್ರೀಡೆ, ಯೋಗ ಹಾಗೂ ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘವು ಸರ್ಕಾರಿ ನೌಕರರಿಗೆ ಆಯೋಜಿಸಿರುವ ಕ್ರೀಡಾಕೂಟವು ಅರ್ಥಪೂರ್ಣವಾಗಿದ್ದು ನೌಕರರ ಒತ್ತಡ ನಿವಾರಣೆಗೆ ಸಹಕಾರಿಯಾಗಿದೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ […]