CSEET ಕಂಪೆನಿ ಸೆಕ್ರೆಟರಿ ಅರ್ಹತ ಪರೀಕ್ಷೆ – 2026 ಜನತಾ ಪಿ.ಯು. ಕಾಲೇಜು ರಾಜ್ಯಕ್ಕೆ ಪ್ರಥಮ ಸ್ಥಾನ :ದಾಖಲೆಯ 40 ವಿದ್ಯಾರ್ಥಿಗಳು ಉತ್ತೀರ್ಣ

ಕುಂದಾಪುರ: CSEET-ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಇವರು ನಡೆಸುವ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಅರ್ಹತಾ ಪರೀಕ್ಷೆ)ಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಪರೀಕ್ಷೆ ಬರೆದ 43 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳನ್ನು ಪಡೆಯುದರ ಮೂಲಕ CS ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ. ಸಾಧನೆ ಮೆರೆದು ಅರ್ಹತೆ ಪಡೆದ ವಿದ್ಯಾರ್ಥಿಗಳು ಕ್ರಮವಾಗಿ ಸಹನಾ(168), ಅಮೂಲ್ಯ ಆರ್ ಶೆಟ್ಟಿ (166),ಧನುಷ್ ಆರ್ ಹೆಬ್ಬಾರ್( 164)ಪ್ರಥಮ್ ಜಿ ಕಾಂಚನ್(159),ಶಮ್ಯ(156) ಶಿವಮ್(155),ಶಯನ್(154),ಶ್ರೀಶಾ ಆರ್ ಶೆಟ್ಟಿ (154),ದ್ರಶ್ಯ ಜಿ […]

ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕ ವ್ಯವಸ್ಥೆ ಬಲವರ್ಧನೆ-ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ದೇಶದ ಆರ್ಥಿಕ ವ್ಯವಸ್ಥೆಯನ್ನು ಸಹಕಾರಿ ಕ್ಷೇತ್ರದಿಂದ ಪ್ರಗತಿ ಪಥದತ್ತ ಕೊಂಡೊಯ್ಯಲು ಸಾಧ್ಯವಿದೆ. ಇದನ್ನು ಮನಗಂಡಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ನೀತಿಗಳನ್ನು ಜಾರಿಗೊಳಿಸುತ್ತಿದೆ. ಇದನ್ನು ಎಲ್ಲರಿಗೂ ತಲುಪಿಸುವ ಕೆಲಸ ಆಗಬೇಕಿದೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್​ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗದ ಮೀನುಗಾರರ ಸಹಕಾರ ಸಂಘಗಳ ಪದಾಧಿಕಾರಿಗಳು […]

CSEET ಜನವರಿ ಆವೃತ್ತಿಯ ಪರೀಕ್ಷ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ.

ಕಾರ್ಕಳ: ICSI ಬೋರ್ಡ್ ನಿಂದ ನಡೆಸಲ್ಪಡುವ ದೇಶದ ಅತಿ ಕ್ಲಿಷ್ಟಕರ ಪರೀಕ್ಷೆಗಳಲ್ಲಿ ಒಂದಾದ CSEET ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿಕೊಂಡಿದ್ದಾರೆ. ದೇಶದಲ್ಲಿ ಕಂಪನಿ ಸೆಕ್ರೆಟರಿ ಪರೀಕ್ಷೆಯ ಅರ್ಹತೆಗಾಗಿ ನಡೆಯುವ CSEET ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 60 ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳು ತೇರ್ಗಡೆಗೊಂಡು ಮುಂದಿನ CS ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. 200ಕ್ಕೆ ಅತಿ ಹೆಚ್ಚು 169 ಅಂಕವನ್ನು ಪಡೆದ ಸಾಯಿ ಪ್ರಸಾದ್ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿ, ಕಿಶನ್ ಎನ್ .157, ಮಂಗಿಲಾಲ್ […]

ಉಡುಪಿ:ವಸತಿ ಶಾಲೆಯ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ:ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 2026-27 ನೇ ಸಾಲಿಗೆ 6 ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 25 ಕೊನೆಯ ದಿನವಾಗಿದ್ದು, ಸಮೀಪದ ವಸತಿ ಶಾಲೆಗಳಲ್ಲಿ ಅರ್ಜಿಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬ್ರಹ್ಮಾವರದ ಆರೂರು ದೂ.ಸಂಖ್ಯೆ: 9482625925, ಕಾಪು ತಾಲೂಕಿನ ಕಳತ್ತೂರು ದೂ.ಸಂಖ್ಯೆ: 9535225409, ಪಟ್ಲ […]

ಉಡುಪಿ:ಮಕ್ಕಳ ಜೊತೆ ಸಂವೇದನೆಯಿಂದ ವ್ಯವಹರಿಸಲು ತರಬೇತಿ ಕಾರ್ಯಕ್ರಮ ಸಹಕಾರಿ: ಡಾ. ತಿಪ್ಪೇಸ್ವಾಮಿ ಕೆ. ಟಿ

ಉಡುಪಿ:ಮಕ್ಕಳ ರಕ್ಷಣಾ ಘಟಕದಲ್ಲಿ ಮಕ್ಕಳ ಜೊತೆ ವ್ಯವಹರಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಪಡೆದ ಜ್ಞಾನವನ್ನು ಮನನ ಮಾಡುವ ಜೊತೆ ಕೌಶಲ್ಯವನ್ನು ಮೇಲ್ದರ್ಜೆಗೆ ಏರಿಸಿ ಮಕ್ಕಳ ಜೊತೆ ಸಂವೇದನಾಶೀಲತೆಯಿಂದ ವ್ಯವಹರಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ ಹೇಳಿದರು. ಅವರು ಮಂಗಳವಾರ ರಜತಾದ್ರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ […]