ಬಿಗ್‌ಬಾಸ್-12 ವಿನ್ನರ್ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿದರು. ಈ ವೇಳೆ ಅವರಿಗೆ ಶುಭ ಕೋರಿ ಮುಖ್ಯಮಂತ್ರಿಗಳು, ಮುಂದಿನ ಭವಿಷ್ಯಕ್ಕೆ ಉತ್ತಮವಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಸಚಿವ ಬೈರತಿ ಬಸವರಾಜ್ ಹಾಗೂ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಉಪಸ್ಥಿತರಿದ್ದರು. ಈ ಬಾರಿಯ ಬಿಗ್‌ಬಾಸ್ ಸ್ಪರ್ಧೆಯಲ್ಲಿ ಗಿಲ್ಲಿ ನಟರಾಜ್ ವಿಜೇತರಾಗಿ ಹೊರಹೊಮ್ಮಿದರೆ, ನಟಿ ರಕ್ಷಿತಾ ರನ್ನರ್ ಅಪ್ ಸ್ಥಾನ […]
ಉಡುಪಿ: ಸ್ವರ್ಣ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ರಕ್ಷಣೆ

ಉಡುಪಿ: ಕಲ್ಯಾಣಪುರ ಬಳಿಯ ಸ್ವರ್ಣ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿರುವ ಘಟನೆ ನಡೆದಿದೆ.ವ್ಯಕ್ತಿ ನದಿಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಆತನನ್ನು ರಕ್ಷಿಸಿದ್ದಾರೆ. ಬಳಿಕ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಆ ನಂತರ ಅಂಬಲಪಾಡಿಯಲ್ಲಿರುವ ಆತನ ಮನೆಗೆ ಹಸ್ತಾಂತರಿಸಲಾಯಿತು.
ಜಮ್ಮು ಮತ್ತು ಕಾಶ್ಮೀರ: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದ ಸೇನಾ ವಾಹನ; 10 ಮಂದಿ ಸಿಬ್ಬಂದಿ ಮೃತ್ಯು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ. ಅಪಘಾತ ಸಂಭವಿಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ ಸೇನೆ, ಪೊಲೀಸರು […]
ನಿಟ್ಟೆಯ ಸರಿತಾ ಶೆಟ್ಟಿ ಅವರಿಗೆ ಪಿ.ಹೆಚ್.ಡಿ. ಪದವಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರಿತಾ ಶೆಟ್ಟಿ ಅವರು ‘ಡೆವಲಪ್ಮೆಂಟ್ ಆಫ್ ನ್ಯಾಚುರಲ್ ಲ್ಯಾಂಗ್ವೇಜ್ ಡಯಲಾಗ್ ಸಿಸ್ಟಮ್ ಫಾರ್ ಕನ್ನಡ ಲ್ಯಾಂಗ್ವೇಜ್ ಇನ್ ಹೆಲ್ತ್ ಕೇರ್ ಡೊಮೈನ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಘೋಷಿಸಿದೆ. ಅವರು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ. ಸಾರಿಕಾ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಕಾರ್ಯವನ್ನು […]
ಕಾರ್ಕಳ ಕ್ರೈಸ್ಟ್ಕಿಂಗ್: ಭಾರತೀಯ ಕಂಪೆನಿ ಸೆಕ್ರೆಟರಿ(ಸಿಎಸ್-ಇಇಟಿ) ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ.

ಕಾರ್ಕಳ: ಭಾರತೀಯ ಕಂಪೆನಿ ಸೆಕ್ರೆಟರಿ ಮಂಡಳಿಯವರು ನಡೆಸಿದ ರಾಷ್ಟ್ರಮಟ್ಟದ ಕಂಪೆನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ-2025 (ಸಿಎಸ್‌ಇಇಟಿ)ಯಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜು 2025-26 ನೇ ಸಾಲಿನಲ್ಲಿ ಅಮೋಘ ಸಾಧನೆಯನ್ನು ದಾಖಲಿಸಿದೆ. ಒಟ್ಟು 11 ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿದ್ದಾರೆ. ಸಂಸ್ಥೆಯಿಂದ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಸಂಸ್ಥೆಯು ಅಭೂತಪೂರ್ವ ಸಾಧನೆಗೈದಿದೆ. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಜೇಡನ್ ಕುವೆಲ್ಲೊ 200ಕ್ಕೆ 171 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಕಾರ್ಕಳ ತಾಲೂಕಿನಲ್ಲಿಯೇ ಅತ್ಯುತ್ತಮ […]