ಉಡುಪಿ: ಸಮನ್ವಯ್ ಬೂಟಿಕ್ ಹೋಟೆಲ್‌ನಲ್ಲಿ ಉದ್ಯೋಗಾವಕಾಶ

ಉಡುಪಿ:ಉಡುಪಿಯ ಸಮನ್ವಯ್ (Samanvay) – ಲಕ್ಸುರಿ ಎನ್ವಿರಾನ್‌ಮೆಂಟ್ ಫ್ರೆಂಡ್ಲಿ ಬೂಟಿಕ್ ಹೋಟೆಲ್ನಲ್ಲಿ ಆಪರೇಷನ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕಠಿಣ ಪರಿಶ್ರಮಿ, ನೈತಿಕತೆ ಹೊಂದಿರುವ ಹಾಗೂ ತಂಡದೊಂದಿಗೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಗಳಾಗಿರಬೇಕು.ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ವಿವರಗಳನ್ನು ವಾಟ್ಸಾಪ್ ಮೂಲಕ ಕಳುಹಿಸಬಹುದು.📞: 9686277001

ಕಾರ್ಕಳ:ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆ ಜ್ಞಾನಸುಧಾದ 48 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ : ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ – ಜನವರಿ 2026) ನಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 48 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಸಂಸ್ಥೆಯ ಗ್ಯಾನ್ ಹೆಗ್ಡೆ ಅವರು 200ರಲ್ಲಿ 145 ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಯಾಗಿದ್ದು, ಜೊತೆಗೆ ಕಾರ್ತಿಕ್ ಶೆಟ್ಟಿ (142 ಅಂಕ), ಶ್ರೀಕರ ಎಸ್ ಉಪಾಧ್ಯಾಯ (141 ಅಂಕ), ವಿಭೂಷಿತ್ ಶೆಟ್ಟಿ (134 ಅಂಕ), ಪ್ರತುಲ್ ಡಿ’ಸೋಜ (132 […]

ಉಡುಪಿ :ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ-2026 ಕಾರ್ಯಕ್ರಮವು ಜನವರಿ 26 ರಿಂದ 28 ರ ವರೆಗೆ ಉಡುಪಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ […]

ಉಡುಪಿ:ಬಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ […]

ಉಡುಪಿ:ಜ.26 ರಂದು ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ

ಉಡುಪಿ: ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ಬೆಳಗ್ಗೆ 8.30 ಕ್ಕೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದು,ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. […]