ಉಡುಪಿ:ಮಕ್ಕಳ ಸುರಕ್ಷತೆಗಾಗಿ ಸರ್ಕಾರ ರೂಪಿಸುವ ನೀತಿಗಳು ತಳಮಟ್ಟದಲ್ಲಿ ಜಾರಿಯಾಗಲಿ: ತಿಪ್ಪೇಸ್ವಾಮಿ ಕೆ. ಟಿ

ಉಡುಪಿ: ಸರ್ಕಾರ ಮಕ್ಕಳ ರಕ್ಷಣೆಗಾಗಿ ಜಾರಿಗೆ ತಂದಿರುವ ನೀತಿ ನಿಯಮಾವಳಿಗಳು ತಳಮಟ್ಟದಲ್ಲಿ ಪ್ರತಿಶತಃ ನೂರರಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ. ಟಿ ಹೇಳಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು […]
ಉಡುಪಿ:ವಚನಗಳ ಮೂಲಕ ಸನ್ಮಾರ್ಗದಲ್ಲಿ ನಡೆಯಲು ದಾರಿ ತೋರಿದವರು ಶಿವಶರಣರು : ಎಂ.ಎ ಗಫೂರ್

ಉಡುಪಿ: ಹನ್ನೆರಡನೆಯ ಶತಮಾನವನ್ನು ವಚನ ಕ್ರಾಂತಿಯುಗ ಎನ್ನಲಾಗುತ್ತಿದ್ದು, ಅಂದಿನ ಕಾಲಘಟ್ಟದಲ್ಲಿ ಶಿವಶರಣೆಯರು ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಷ್ಯತೆ, ಜಾತೀಯತೆ, ಅಸಮಾನತೆಯನ್ನು ತೊಲಗಿಸಲು ತಮ್ಮದೇ ಶೈಲಿಯಲ್ಲಿ ಸರಳ ರೂಪದಲ್ಲಿ ವಚನಗಳನ್ನು ರಚಿಸುವ ಮೂಲಕ ಜನಸಾಮಾನ್ಯರು ಸನ್ಮಾರ್ಗದಲ್ಲಿ ನಡೆಯಲು ದಾರಿ ತೋರಿದ್ದಾರೆ. ಅಂದು ಶಿವಶರಣರು ಪ್ರತಿಪಾದಿಸಿದ ವಚನ ಸಾರಗಳು ಸಮಾಜದಲ್ಲಿ ಇಂದಿಗೂ ಪ್ರಸ್ತುತವಾಗಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷಎಂ.ಎ ಗಫೂರ್ ಹೇಳಿದರು. ಅವರು ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತುಸಂಸ್ಕೃತಿ […]