ಸಂವಿಧಾನಾತ್ಮಕ ಹುದ್ದೆಗೆ ಅವಮಾನ: ವಿಧಾನಸಭೆಯಲ್ಲಿ ಕಾಂಗ್ರೆಸ್‌ ಅರಾಜಕ ನಡೆ

ಉಡುಪಿ: ಜಿ ರಾಮ್ ಜಿ ಕುರಿತ ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಸಂವಿಧಾನದ ವಿಧಿ 168ರನ್ವಯ ತಮ್ಮ ಸಂವಿಧಾನಬದ್ಧ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ರಾಜ್ಯಪಾಲರು ರಾಜ್ಯ ಸರ್ಕಾರ ಸಿದ್ದಪಡಿಸಿದ್ದ ಭಾಷಣವನ್ನು ಸಾಂಕೇತಿಕವಾಗಿ ಮಂಡಿಸಿರುವುದು ಸಂವಿಧಾನದ ನಿಯಮಗಳ ಉಲ್ಲಂಘನೆಯಲ್ಲ. ಈ ವಿಚಾರವನ್ನು ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ಗಳು ತಮ್ಮ ಅನೇಕ ತೀರ್ಪುಗಳಲ್ಲಿ ಸ್ಪಷ್ಟಪಡಿಸಿವೆ. ಆದರೂ ಕಾಂಗ್ರೆಸ್ ಈ ವಿಷಯದಲ್ಲಿ ಅಸಾಂವಿಧಾನಿಕ ಮತ್ತು ಆರಾಜಕ ನಡೆ ವ್ಯಕ್ತಪಡಿಸುತ್ತಿದೆ ಎಂದು ಬಿಜೆಪಿ ಉಡುಪಿ […]

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು; ತನಿಖಾ ತಂಡಕ್ಕೆ 35 ಲಕ್ಷ ಬಹುಮಾನ ಘೋಷಣೆ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ […]

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್; ನಿಷೇಧ ಹೇರಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆ!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ಗಳನ್ನು ಟ್ಯಾಕ್ಸಿಗಳನ್ನಾಗಿ ಬಳಸಲು ಹೈಕೋರ್ಟ್ ಅನುಮತಿ ನೀಡಿದ್ದು, ಈ ಮೂಲಕ ಬೈಕ್ ಟ್ಯಾಕ್ಸಿಗಳಿಗೆ ನಿಷೇಧ ಹೇರಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಎತ್ತಿಹಿಡಿದಿತ್ತು. ಆದರೆ ಇದೀಗ ವಿಭಾಗೀಯ ವೀಠ ಆದೇಶ ರದ್ದುಗೊಳಿಸಿ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಒಲಾ, ಊಬರ್ ಮತ್ತಿತರ ಅಗ್ರಿಗೇಟರ್ ಗಳು ಸಲ್ಲಿಸಿದ ಮೇಲ್ಮನವಿಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ಮಾನ್ಯ ಮಾಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ […]

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಉಗ್ರಂ ಮಂಜು’; ಧರ್ಮಸ್ಥಳದಲ್ಲಿ ನಡೆಯಿತು ಸರಳ ವಿವಾಹ!

ಮಂಗಳೂರು: ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಆಗಿರುವ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಜ.23ರಂದು ಕಾಲಿಟ್ಟಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಗುರು, ಹಿರಿಯ ಆಶೀರ್ವಾದದೊಂದಿಗೆ, ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ಮದುವೆ ಕಾರ್ಯಕ್ರಮ ನಡೆದಿದ್ದು, ಕುಟುಂಬಸ್ಥರು, ಆಪ್ತರು ಭಾಗಿಯಾಗಿದ್ದರು. ನಿನ್ನೆ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಸರಳವಾಗಿ ನೆರವೇರಿತ್ತು. ಮನೆಯಲ್ಲಿಯೇ ನಡೆದ ಈ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರು, ಆಪ್ತರು ಹಾಗೂ ಆತ್ಮೀಯ ಗೆಳೆಯರು ಮಾತ್ರ ಭಾಗವಹಿಸಿದ್ದರು. ಹಳದಿ ಶಾಸ್ತ್ರದ ಫೋಟೋಗಳು […]

ಜ.26ರಿಂದ 28ರವರೆಗೆ ಉಡುಪಿಯಲ್ಲಿ ‘ಫಲಪುಷ್ಪ ಪ್ರದರ್ಶನ-2026’

ಉಡುಪಿ: ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ‘ಫಲಪುಷ್ಪ ಪ್ರದರ್ಶನ-2026’ ಅನ್ನು ಇದೇ ಜ.26ರಿಂದ 28ರವರೆಗೆ ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದ (ರೈತ ಸೇವಾ ಕೇಂದ್ರ) ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು. ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಜ.26ರಂದು ಬೆಳಿಗ್ಗೆ 8ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಉಡುಪಿ […]