ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಐಇಇಇ ವಿದ್ಯಾರ್ಥಿ ಶಾಖೆಗೆ 5 ಪ್ರತಿಷ್ಠಿತ ಪ್ರಶಸ್ತಿಗಳು

ಉಡುಪಿ,ಬಂಟಕಲ್: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಇಇಇ ವಿದ್ಯಾರ್ಥಿ ಶಾಖೆಗೆ ಪ್ರತಿಷ್ಠಿತ ಐದು ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ದಿನಾಂಕ 18 ಜನವರಿ 2026ರ ರಂದು ಬೆಂಗಳೂರಿನಲ್ಲಿ ನಡೆದ ಐಇಇಇ ಬೆಂಗಳೂರು ಸೆಕ್ಷನ್‌ನ ವಾರ್ಷಿಕ ಸಭೆಯಲ್ಲಿ ನೀಡಲಾಯಿತು. ಐಇಇಇ ವಿದ್ಯಾರ್ಥಿ ಶಾಖೆಯು ಪಡೆದುಕೊಂಡ ಪ್ರಶಸ್ತಿಗಳು “ಔಟ್ ಸ್ಟ್ಯಾಂಡಿಂಗ್ ಲಾರ್ಜ್ ಸ್ಟುಡೆಂಟ್ ಬ್ರಾಂಚ್ ಅವಾರ್ಡ್”, ಬೆಂಗಳೂರು ಸೆಕ್ಷನ್‌ನ “ಟಾಪ್ 25 ವಿದ್ಯಾರ್ಥಿ ಶಾಖೆಗಳ ಪಟ್ಟಿಯಲ್ಲಿ ಸ್ಥಾನ”, “ಮೆಂಬರ್ ಶಿಪ್ ಡೆವಲಪ್‌ಮೆಂಟ್ ಚಾಲೆಂಜ್ ಅವಾರ್ಡ್”, “ಔಟ್ ಸ್ಟ್ಯಾಂಡಿಂಗ್ […]
ಕುಂದಾಪುರ: ಓವರ್ ಟೇಕ್ ಭರದಲ್ಲಿ ಬಸ್ ಗೆ ಬೈಕ್ ಢಿಕ್ಕಿ: ಸವಾರ ದಾರುಣ ಸಾವು

ಉಡುಪಿ: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ. ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಮೃತ ಯುವಕ.ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ಹೊಂದಿದ್ದ ವಿಜಯ್ ಶನಿವಾರ ಬೆಳಿಗ್ಗೆ ಬೈಕಿನಲ್ಲಿ ತ್ರಾಸಿಯಿಂದ ಸೌಕೂರು ಕಡೆಗೆ ತೆರಳುತ್ತಿದ್ದಾಗ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು […]
ಪಿಎಸ್‌ಜಿಐಸಿ, ನಾಬಾರ್ಡ್ ಉದ್ಯೋಗಿಗಳ ವೇತನ ಏರಿಕೆ, ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸರಕಾರ ಅನುಮೋದನೆ!

ಹೊಸದಿಲ್ಲಿ: ದೀರ್ಘಾವಧಿಯಿಂದ ಬಾಕಿಯಿರುವ ಸಾರ್ವಜನಿಕ ರಂಗದ ಜನರಲ್ ಇನ್ಶೂರೆನ್ಸ್ ಕಂಪೆನಿಗಳು (ಪಿಎಸ್‌ಜಿಐಸಿ) ಹಾಗೂ ಕೃಷಿ,ಗ್ರಾಮೀಣ ಅಭಿವೃದ್ಧಿಗಾಗಿನ ರಾಷ್ಟ್ರೀಯ ಬ್ಯಾಂಕ್ (ನಾಬಾರ್ಡ್) ಉದ್ಯೋಗಿಗಳ ವೇತನ ಪರಿಷ್ಕರಣೆಗೆ ಕೇಂದ್ರ ಸರಕಾರ ಶುಕ್ರವಾರ ಅನುಮೋದನೆ ನೀಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಾಗೂ ನಾಬಾರ್ಡ್‌ನ ನಿವೃತ್ತ ಉದ್ಯೋಗಿಗಳ ಪಿಂಚಣಿ ಪರಿಷ್ಕರಣೆಯನ್ನು ಮಂಜೂರು ಮಾಡಿದೆ. ಸುಮಾರು 46,332 ಉದ್ಯೋಗಿಗಳು, 23,570 ಪಿಂಚಣಿದಾರರು ಹಾಗೂ 23,260 ಕುಟುಂಬ ಪಿಂಚಣಿದಾರರು ಇದರ ಪ್ರಯೋಜನ ಪಡೆಯಲಿದ್ದಾರೆ. ಈ ನಡೆಯು ಸೇವಾವಧಿಯಲ್ಲಿ ಪಿಂಚಣಿದಾರರ ಸುದೀರ್ಘ ಹಾಗೂ ಸಮರ್ಪಿತ ಸೇವೆಯನ್ನು […]
ಕಾರ್ಕಳ: ಭೀಕರ ರಸ್ತೆ ಅಪಘಾತ- ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ, 9 ಮಂದಿಗೆ ಗಾಯ

ಉಡುಪಿ: ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು, ಮಗು ಸಹಿತ 9 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ತೂಫನ್ ವಾಹನ ಚಾಲಕ ಮಣ್ಣಪ್ಪ, ಚೇತನ್(27), ರೋಹಿತ್(28) ಹಾಗೂ ಮಲ್ಲಮ್ಮ(50) ಎಂದು ಗುರುತಿಸಲಾಗಿದೆ. ಸಂಗೀತ (40), ಕವಿತಾ(38), ಬಸವರಾಜ್(56), ಕಿಶೋರ್(28), ಲಕ್ಷ್ಮೀ(25), ಜ್ಯೋತಿ(25), ಜಯಲಕ್ಷ್ಮೀ(24), ಎರಡು ವರ್ಷದ ಮಗು ಕುಶಲ್ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲ ಗುಲ್ಬರ್ಗ ಜಿಲ್ಲೆಯವರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ […]
ಉಡುಪಿಯ ಪ್ರಸಿದ್ಧ ಹೋಟೆಲಿಗೆ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಪ್ರಸಿದ್ಧ ಹೋಟೆಲಿಗೆ ವೈಟರ್,ವೆಜ್-ನಾನ್ ವೆಜ್ ಕುಕ್, ಹಾಗೂ ಕೌಂಟರ್ ಗೆ ಜನ ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ:+91 9449104708