ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ದುರ್ಬಲರಿಗೆ ಸಹಾಯ ಹಸ್ತ, ಕೃಷಿಕರಿಗೆ ಸೌಕರ್ಯ, ಉದ್ಯಮಶೀಲರಿಗೆ ಒತ್ತಾಸೆ, ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ ಎಂಬ ವಿಶ್ವಾಸದೊಂದಿಗೆ ಹತ್ತು ಹಲವು ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಸ್ವತಂತ್ರ ಭಾರತವು ತನ್ನ ಸಂವಿಧಾನವನ್ನು ಅನುಷ್ಠಾನಕ್ಕೆ ತಂದು ದೇಶದ ಆಡಳಿತ ಚೌಕಟ್ಟನ್ನು ರೂಪಿಸಿದ ಜನವರಿ […]
ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ, ಅಭಿವೃದ್ಧಿಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡೋಣ, ಉಳಿದ ಸಂದರ್ಭದಲ್ಲಿ ಅಭಿವೃದ್ಧಿ ಕಡೆಗಷ್ಟೆ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಬೈಂದೂರು ಉತ್ಸವದಲ್ಲಿ ಮಾತನಾಡಿದ ಸಚಿವರು, ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ, ಅಭಿವೃದ್ಧಿಗಷ್ಟೇ ಆದ್ಯತೆ ನೀಡುತ್ತೇನೆ ಎಂದರು. ಮಹಾತ್ಮ ಗಾಂಧಿಯವರ ಅವರ ಪರಿಕಲ್ಪನೆಯಂತೆ ಶಾಸಕ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ […]
ಶೀಘ್ರ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ವಿಷ್ಣುವಿನ ಆರನೇ ಅವತಾರ ಎನಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಮುಂದಿನ ದಿನಗಳಲ್ಲಿ ಬೈಲೂರಿನಲ್ಲಿ ಪ್ರತಿಷ್ಠಾನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭರವಸೆ ನೀಡಿದರು. ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹೊನಲು ಬೆಳಕಿನ ಕ್ರೀಡಾ ಕೂಟಕ್ಕೆ ಸ್ವರಾಜ್ ಮೈದಾನದಲ್ಲಿ ಚಾಲನೆ ನೀಡಿ ಮಾತನಾಡಿದ ಸಚಿವರು, ಪರಶುರಾಮನ ಪುಣ್ಯ ಭೂಮಿ […]
ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಧ್ವಜಾರೋಹಣ

ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ಐಲ್ಯಾಂಡ್ ಸೇರಿದಂತೆ ರಾಜ್ಯದಲ್ಲಿರುವ 116 ಐಲ್ಯಾಂಡ್ ಗಳೂ ನಿರ್ಲಕ್ಷ್ಯಕ್ಕೊಳಗಾಗಿದೆ. ಇಂತಹ […]
ಉಡುಪಿಯ ಪ್ರಸಿದ್ಧ ಹೋಟೆಲಿಗೆ ಜನ ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಪ್ರಸಿದ್ಧ ಹೋಟೆಲಿಗೆ ವೈಟರ್,ವೆಜ್-ನಾನ್ ವೆಜ್ ಕುಕ್, ಹಾಗೂ ಕೌಂಟರ್ ಗೆ ಜನ ಬೇಕಾಗಿದ್ದಾರೆ. ಆಸಕ್ತರು ಸಂಪರ್ಕಿಸಿ:+91 9449104708