ಹಿರಿಯಡಕ: ಸರಣಿ ಅಪಘಾತ- ಸ್ಕೂಟರ್ ಜಖಂ

ಉಡುಪಿ: ಸ್ಕೂಟಿ, ಬೈಕ್, ರಿಕ್ಷಾ ಹಾಗೂ ಇನ್ನೋವಾ ನಡುವೆ ಸರಣಿ ಅಪಘಾತ ನಡೆದ ಘಟನೆ ಬುಧವಾರ ಬೆಳಿಗ್ಗೆ ಹಿರಿಯಡಕದಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿ ಸಂಪೂರ್ಣ ಜಖಂಗೊಂಡಿದ್ದು, ಬೈಕ್, ರಿಕ್ಷಾ ಹಾಗೂ ಇನೋವಾಗೆ ಹಾನಿಯಾಗಿದೆ. ಸವಾರರಿಬ್ಬರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು.

ಕೊಪ್ಪಳ: ಕೊಪ್ಪಳ ಜಿಲ್ಲೆ ಕೊಕನೂರು ತಾಲೂಕಿನ ರ್ಯಾವಣಕಿ ಗ್ರಾಮದಲ್ಲಿ ಹೃದಯಾಘಾತದಿಂದ 18 ವರ್ಷದ ಯುವತಿ ಬಲಿಯಾದ ಘಟನೆ ನಡೆದಿದೆ. ಮೃತ ಯುವತಿ ಕಾವ್ಯಾ ಚಲವಾದಿ (18). ಕಳೆದ 2 ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಂಗಳವಾರ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಹೃದಯಾಘಾತದಿಂದ ಎಳೆಯ ಪ್ರಾಯದವರ ಸಾವಿನ ಪ್ರಮಾಣ ಮುಂದುವರಿದಿದೆ. ಒಂದು ತಿಂಗಳ ಹಿಂದೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನ 22 ವರ್ಷದ ಬಿಕಾಂ ವಿದ್ಯಾರ್ಥಿನಿ ದಿಶಾ ಹೃದಯಾಘಾತಕ್ಕೆ ಬಲಿಯಾಗಿದ್ದಳು. ಕೆಲ ತಿಂಗಳ ಹಿಂದೆ ಬಳ್ಳಾರಿ […]

ಪ್ಲಾಸ್ಟಿಕ್ ಗನ್ ತೋರಿಸಿ ಜ್ಯುವೆಲ್ಲರಿ ಅಂಗಡಿಯ ಚಿನ್ನಾಭರಣ ದರೋಡೆ; ಮಾಲೀಕನ ಪ್ರತಿರೋಧಕ್ಕೆ ಕಳ್ಳರು ಎಸ್ಕೇಪ್!

ನೆಲಮಂಗಲ: ಪ್ಲಾಸ್ಟಿಕ್ ಗನ್ ತೋರಿಸಿ ಜ್ಯುವೆಲ್ಲರಿ ಅಂಗಡಿಯನ್ನು ದರೋಡೆ ಮಾಡಲು ಯತ್ನಿಸಿರುವ ಘಟನೆ ನೆಲಮಂಗಲ ತಾಲೂಕಿನ ದಾಸನಪುರದಲ್ಲಿ ನಡೆದಿದೆ. ಅಂಗಡಿ ಮಾಲೀಕ ತೀವ್ರ ಪ್ರತಿರೋಧ ಒಡ್ಡಿದ ಕಾರಣ, ದರೋಡೆಕೋರರು ಕೈಗೆ ಸಿಕ್ಕ ಚಿನ್ನಾಭರಣ ಹಾಗೂ ನಗದಿನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ. ದಾಸನಪುರದ ‘ರಾಮ್ ದೇವ್ ಜ್ಯುವೆಲ್ಲರಿ’ ಅಂಗಡಿಯಲ್ಲಿ ಈ ಕೃತ್ಯ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಒಡವೆ ಅಂಗಡಿಯೊಳಗೆ ನುಗ್ಗಿದ್ದಾರೆ. ತಾವು ತಂದಿದ್ದ ಪ್ಲಾಸ್ಟಿಕ್ ಗನ್ ತೋರಿಸಿ ಮಾಲೀಕರನ್ನು ಹೆದರಿಸಿ ದರೋಡೆಗೆ ಯತ್ನಿಸಿದ್ದಾರೆ. ದರೋಡೆಕೋರರು […]

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ; ಭಕ್ತಾದಿಗಳ ಸಮ್ಮುಖದಲ್ಲಿ ದಿವ್ಯ ಬಲಿಪೂಜೆ, ಆರಾಧನೆ.

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ಸಹಸ್ರಾರು ಭಕ್ತಾದಿಗಳ ಭಕ್ತಿಭಾವದ ನಡುವೆ ಸುಮಾರು ಹತ್ತು ದಿವ್ಯ ಬಲಿಪೂಜೆಗಳು ನಡೆದವು. ದಿನದ ಪ್ರಮುಖ ಹಾಗೂ ಆಢಂಬರದ ಸಾಂಭ್ರಮಿಕ ಬಲಿಪೂಜೆಯನ್ನು ಅಲಹಬಾದ್ ಧರ್ಮಪ್ರಾಂತ್ಯದ ಅತಿ ವಂ.ಲುವಿಸ್ ಮಸ್ಕರೇನ್ಹಸ್ ಅರ್ಪಿಸಿ, ನಾವೆಲ್ಲರು ಬಡವೆರೆಡೆಗೆ ನಮ್ಮ ಏಕಾಗ್ರತೆಯನ್ನು ನೀಡಬೇಕು. ಅವರೆಲ್ಲರು ಕ್ರಿಸ್ತನ ಪ್ರತಿರೂಪ. ಬಡವರೊಂದಿಗೆ ಕ್ರೈಸ್ತ ಜೀವನ ಸರಿದೂಗಿ ನಡೆಯಬೇಕು ಎಂದು ಸಂದೇಶ ನೀಡಿದರು. ವಿವಿಧ ಯಾಜಕರು ಸಹಭಾಗಿಯಾಗಿ, ಭಕ್ತಾದಿಗಳ ಸಮ್ಮುಖದಲ್ಲಿ ದಿವ್ಯ ಬಲಿಪೂಜೆ, […]

ಉಡುಪಿ:ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಉಡುಪಿ: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಯಲ್ಲಿ ಇಂದು ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಶೋಕ್.ಹೆಚ್ ಉದ್ಘಾಟಿಸಿ, ದೇಶದಲ್ಲಿರುವ ಲಿಂಗ ತಾರತಮ್ಯ, ಹೆಣ್ಣು ಮಕ್ಕಳ ಶಿಕ್ಷಣದ ಅರಿವು, ಹೆಣ್ಣು ಮಕ್ಕಳನ್ನು ಉಳಿಸಿ ಬೆಳೆಸಿ ಪೋ಼ಷಿಸುವ ಬಗ್ಗೆ ಮಾಹಿತಿ ನೀಡಿದರು. ಪ್ರಸೂತಿ ತಜ್ಞೆ ಡಾ.ಕವಿತಾ ಮತ್ತು ಮಕ್ಕಳ ತಜ್ಞ ಡಾ.ಅಮರನಾಥ್ ಶಾಸ್ತ್ರ್ರಿ ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಮಾತನಾಡಿದರು. ಈ […]