ಉಡುಪಿ:ಪೇಪರ್‌ಲೆಸ್ ರಿಜಿಸ್ಟ್ರೇಷನ್ ತರಬೇತಿ

ಉಡುಪಿ: ರಾಜ್ಯದಾದ್ಯಂತ ಪೇಪರ್‌ಲೆಸ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ಪೇಪರ್ ಲೆಸ್ ರಿಜಿಸ್ಟ್ರೇಷನ್ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳ ಸಿಬ್ಬಂದಿಗಳು ಹಾಗೂ ಪೇಪರ್‌ಲೆಸ್ ರಿಜಿಸ್ಟ್ರೇಷನ್ ವ್ಯವಸ್ಥೆಯಲ್ಲಿ ಆಸಕ್ತಿ ಹೊಂದಿರುವ ಸಾರ್ವಜನಿಕರು ತರಬೇತಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಜನವರಿ 29 ರಂದು ಮಧ್ಯಾಹ್ನ 12 ರಿಂದ ಬೈಂದೂರು ಹಾಗೂ ಸಂಜೆ 4 ರಿಂದ ಕುಂದಾಪುರ ಉಪನೋಂದಣಿ ಕಚೇರಿಯಲ್ಲಿ, ಜನವರಿ 30 ರಂದು […]

ಉಡುಪಿ:ಫಲಪುಷ್ಪ ಪ್ರದರ್ಶನದಲ್ಲಿ ಉಡುಪಿ ಮಲ್ಲಿಗೆ ಹಾಗೂ ಮಟ್ಟಗುಳ್ಳ ಬದನೆ ಬೆಳೆಗಳಿಗೆ ಇರುವ ರಫ್ತು ಅವಕಾಶಗಳ ಬಗ್ಗೆ ಕಾರ್ಯಾಗಾರ

ಉಡುಪಿ: ಉಡುಪಿ ದೊಡ್ಡಣಗುಡ್ಡೆ ರೈತ ಸೇವಾ ಕೇಂದ್ರದ ಆವರಣದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ-2026 ರ 2 ನೇ ದಿನವಾದ ಇಂದು ಉಡುಪಿ ಜಿಲ್ಲೆಯ ಭೌಗೋಳಿಕ ಗುರುತಿಸುವಿಕೆ ಬೆಳೆಗಳಾದ ಉಡುಪಿ ಮಲ್ಲಿಗೆ ಹಾಗೂ ಮಟ್ಟುಗುಳ್ಳ ಬದನೆ ಬೆಳೆಗಳಿಗೆ ಇರುವ ರಫ್ತು ಅವಕಾಶಗಳ ಬಗ್ಗೆ ಕಾರ್ಯಾಗಾರವನ್ನು ಅಪೇಡಾ ಸಂಸ್ಥೆಯ ಸಹೋಗದಲ್ಲಿ ಆಯೋಜಿಸಲಾಯಿತು. ಕಾರ್ಯಾಗಾರದ ಬಗ್ಗೆ ಪ್ರಾಸ್ತಾವಿಕವಾಗಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಮಾತನಾಡಿ, ಜಿಲ್ಲೆಯ ಉಡುಪಿ ಮಲ್ಲಿಗೆ ಮತ್ತು ಮಟ್ಟು ಗುಳ್ಳ ಬದನೆ ಬೆಳೆಗಳು ಜಿ.ಐ. ಮಾನ್ಯತೆ […]

ವಿಮಾನ ದುರಂತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತ್ಯು.

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್‌ ಪವಾ‌ರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಜಿತ್‌ ಪವಾ‌ರ್ ಸೇರಿದಂತೆ ಪಿಎಸ್‌ಒ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲೈಟ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ. ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಮುಂಬೈಯಿಂದ ಬಾರಾಮತಿಗೆ ಹೊರಟಿದ್ದರು ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ […]

ಖ್ಯಾತ ಗಾಯಕ ಅರ್ಜಿತ್ ಸಿಂಗ್ ದಿಢೀರ್ ನಿವೃತ್ತಿ ಘೋಷಣೆ.

ಸುಮಧುರ ಕಂಠದಿಂದ ಅಪಾರ ಜನಮನ್ನಣೆ ಗಳಿಸಿರುವ ಅರ್ಜಿತ್ ಸಿಂಗ್ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸುವ ಮೂಲಕ ಅರ್ಜಿತ್ ಸಿಂಗ್ ಅಚ್ಚರಿ ಮೂಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಈ ಸುದ್ದಿ ಹಂಚಿಕೊಂಡಿದ್ದಾರೆ. ಕೇಳುಗರ ಪ್ರೀತಿಗೆ ಧನ್ಯವಾದ ತಿಳಿಸಿ, ತಮ್ಮ ಪಯಣಕ್ಕೆ ವಿದಾಯ ಹೇಳಿದ್ದಾರೆ. ಭಾರಿ ಬೇಡಿಕೆಯ ಗಾಯಕ ಅರ್ಜಿತ್ ಸಿಂಗ್ ಈ ನಿರ್ಧಾರ ಭಾರಿ ಸಂಚಲನ ಸೃಷ್ಟಿಸಿದೆ. ಹಿನ್ನೆಲೆ ಗಾಯನದಿಂದ ದೂರ ಸರಿದರೂ, ಸಂಗೀತವನ್ನು ಬಿಡುವುದಿಲ್ಲ ಎಂದು ಅರ್ಜಿತ್ ಸ್ಪಷ್ಟಪಡಿಸಿದ್ದಾರೆ. ಸ್ವತಂತ್ರವಾಗಿ ಸಂಗೀತ ಸಂಯೋಜನೆ ಮತ್ತು ರಚನೆಯಲ್ಲಿ […]

ಉಡುಪಿ:ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಒತ್ತು ನೀಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕಡಲ ತೀರದಲ್ಲಿ ತೆಗೆದುಕೊಳ್ಳಬೇಕಾದ ಭದ್ರತೆ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಕಡಲಲ್ಲಿ ವಿಹರಿಸಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿ ಬೋಟ್‌ಗಳ […]