ಉಡುಪಿ:ಆರು ದಿನಗಳ ಎನ್ ಎಸ್ ಎಸ್ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 24 ಜನವರಿ 2026 ರಂದು ಮಂಗಳೂರಿನ ರಾಮಕೃಷ್ಣ ಆಶ್ರಮದಲ್ಲಿ ಮುಕ್ತಾಯಗೊಂಡಿತು. ಈ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರಿನ ರಾಮಕೃಷ್ಣ ಮಿಷನ್‌ನ ಅಧ್ಯಕ್ಷರಾದ ಸ್ವಾಮಿ ಜಿತಕಮಾನಂದ ಇವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ನಿಸ್ವಾರ್ಥ ಸೇವೆಯ ಮಹತ್ವ, ನೈತಿಕ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರದ ಬಗ್ಗೆ ವಿವರಿಸಿದರು. ಈ ಶಿಬಿರದಲ್ಲಿ ೩೦೦ರಕ್ಕೂ ಹೆಚ್ಚು ವಿದ್ಯಾರ್ಥಿಗಳು […]
ಪಡುಬಿದ್ರೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ: ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ನಡೆದಿದೆ.ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಅಲ್ಲೇ ಹತ್ತಿರದಲ್ಲಿದ್ದ ಮಗಳ ಮನೆಗೆ ತೆರಳಿದ್ದರು. ಬುಧವಾರ ಮುಂಜಾನೆ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲಿಸ್, 5 ಪವನ್ ತೂಕದ ಚಿನ್ನದ ನೆಕ್ಲಸ್, ಸುಮಾರು 3 […]
ಸ್ಪೀಡ್ ಗವರ್ನರ್, ಬಾಗಿಲು ಅಳವಡಿಸದ ಲಾರಿ, ಬಸ್‌ಗಳ ವಿರುದ್ಧ ಕ್ರಮ: ಉಡುಪಿ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಉಡುಪಿ: ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಬಾಗಿಲು ಅಳವಡಿಸದ ಬಸ್‌ಗಳು ಹಾಗೂ ವೇಗನಿಯಂತ್ರಕ ಅಳವಡಿಸಲಾದ ಲಾರಿಗಳ ವಿರುದ್ಧ ಪೊಲೀಸರು ಕಾರ್ಯಾ ಚರಣೆ ಆರಂಭಿಸಿದ್ದು, ಈ ಸಂಬಂಧ ಹಲವು ವಾಹನಗಳಿಗೆ ದಂಡ ವಿಧಿಸಲಾಗಿದೆ. ಬಸ್‌ಗಳಿಗೆ ಬಾಗಿಲು ಅಳವಡಿಸುವಂತೆ ಹಾಗೂ ಮರಳು ಸಾಗಾಟದ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿ ಸುವ ಬಗ್ಗೆ ಗಡುವು ನೀಡಲಾಗಿತ್ತು. ಇದೀಗ ಈ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ವಿಶೇಷ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಅದರಂತೆ ಜಿಲ್ಲೆಯ ವಿವಿಧೆಡೆ ಪೊಲೀಸರು […]
ಉಡುಪಿ:ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಜನಜಾಗೃತಿ ಜಾಥಾಗೆ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಕ್ಷಮ ಪ್ರಾಧಿಕಾರ ಪಿ.ಸಿ-ಪಿ.ಎನ್.ಡಿ.ಟಿ ಉಡುಪಿ ಜಿಲ್ಲೆ ಹಾಗೂ ನ್ಯೂಸಿಟಿ ನರ್ಸಿಂಗ್ ವಿದ್ಯಾಲಯಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು […]
ಉಡುಪಿ:ಫೆ. 2 ರಂದು ಜೀವ ರಕ್ಷಕ ಸಿಬ್ಬಂದಿಗಳ ಆಯ್ಕೆ ಪ್ರಕ್ರಿಯೆ

ಉಡುಪಿ: ಉಡುಪಿ ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್, ತ್ರಾಸಿ-ಮರವಂತೆ ಬೀಚ್, ಆಸರೆ ಬೀಚ್, ಮಲ್ಪೆ ಬೀಚ್, ಸೈಂಟ್ ಮೇರೀಸ್ ದ್ವೀಪ, ಕಾಪು ಬೀಚ್ ಹಾಗೂ ಪಡುಬಿದ್ರಿ ಮುಖ್ಯ ಬೀಚ್‌ಗಳಲ್ಲಿ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲು ಉದ್ದೇಶಿಸಿದ್ದು, ಪ್ರವಾಸೋದ್ಯಮ ಇಲಾಖೆ ವತಿಯಿಂದ 20 ಜನರಿಗೆ ಜೀವ ರಕ್ಷಕ ತರಬೇತಿ ನೀಡಿ, ಮುಂದಿನ ದಿನಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಮುಂಚಿತವಾಗಿ ಆಯ್ಕೆ ಪ್ರಕ್ರಿಯೆಯು ಫೆಬ್ರವರಿ 2 ರಂದು ನಡೆಯಲಿದ್ದು, ಸದರಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು […]