ಉಡುಪಿ: ಪ್ರಿಯತಮೆ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತ ನೇಣಿಗೆ ಶರಣಾದ ಯುವಕ.!

ಉಡುಪಿ: ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮಾತನಾಡಿ ರೂಮ್ ಒಳಗೆ ಹೋದ ಯುವಕನೋರ್ವ ಕೆಲವೇ ಹೊತ್ತಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿದೆ.ಕುಂಜಿಬೆಟ್ಟು ನಿವಾಸಿ ರಾಜು ಅವರ ಪುತ್ರ ರಂಜಿತ್ (28) ಆತ್ಮಹತ್ಯೆಗೆ ಶರಣಾದ ಯುವಕ. ಜ.29ರಂದು ರಂಜಿತ್ ಅವರು ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ಬಂದು ಮನೆಯವರೊಟ್ಟಿಗೆ ಮಾತನಾಡಿದ್ದರು. ಅನಂತರ ತಾನು ಪ್ರೀತಿಸುತ್ತಿದ್ದ ಹುಡುಗಿ ಪ್ರೀತಿ ಎಂಬವರ ಜತೆ ಫೋನಿನಲ್ಲಿ ಮಾತನಾಡುತ್ತಾ ಅವರ ರೂಮಿನೊಳಗೆ ಹೋಗಿದ್ದಾರೆ. ರಾತ್ರಿ ವೇಳೆ ಮನೆಯ ವಾಟರ್ ಟ್ಯಾಂಕಿನ ನೀರು […]
ನರೇಗಾ ಹೆಸರು ಬದಲಾಯಿಸುವ ಮೂಲಕ ಮಹಾತ್ಮಾ ಗಾಂಧಿಯ ಹೆಸರು ಅಳಿಸಲು ಕೇಂದ್ರ ಸರಕಾರ ಹುನ್ನಾರ: ಜಯಪ್ರಕಾಶ್ ಹೆಗ್ಡೆ ಆರೋಪ

ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯ ಹೆಸರಿನಲ್ಲಿ ಬದಲಾವಣೆ ಮಾಡುವುದರ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ನಿಧಾನವಾಗಿ ಅಳಿಸಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಆರೋಪಿಸಿದರು.ಅವರು ಶುಕ್ರವಾರ ಉಡುಪಿ ವಿಧಾನಸಭಾ ಕ್ಷೇತ್ರದ ಆಶ್ರಯದಲ್ಲಿ ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದು ಮನ್ ರೇಗಾ ಬಚಾವ್ ಸಂಗ್ರಾಮ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ನರೇಗಾ ಯೋಜನೆಯನ್ನು ಅಂದು ಬಿಜೆಪಿಗರು ವಿರೋಧಿಸಿ […]
ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ ಜನವರಿ 30: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ತೆಂಕಬೆಟ್ಟು ನಿವಾಸಿ ಸಂದೀಪ ಎ (37) ಎಂಬ ವ್ಯಕ್ತಿಯು ಡಿಸೆಂಬರ್ 20 ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಮರಾಠಿ ಭಾಷೆಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲಿಸ್ ಠಾಣೆಗೆ ಮಾಹಿತಿ ನೀಡುವಂತೆ ಬ್ರಹ್ಮಾವರ ಪೊಲಿಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನಲ್ಲಿ ‘ಕಾನ್ಪಿಡೆಂಟ್ ಗ್ರೂಪ್’ ಚೇರ್‌ಮನ್ ಸಿಜೆ ರಾಯ್ ಆತ್ಮಹತ್ಯೆ; ಅಧಿಕಾರಿಗಳ ಎದುರೆ ಎದೆಗೆ ಗುಂಡು ಹಾರಿಸಿಕೊಂಡ ಉದ್ಯಮಿ!

ಬೆಂಗಳೂರು: ಐಟಿ ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ (CJ Roy) ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಲ್ಯಾಂಡ್ ಫರ್ಡ್ ರಸ್ತೆಯಲ್ಲಿ ನಡೆದಿದೆ. ಆದಾಯ ತೆರಿಗೆ ಇಲಾಖೆಯಿಂದ ಪದೇ ಪದೇ ಆದ ದಾಳಿಗೆ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರು:ಸಿ.ಜೆ. ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಮತ್ತು ಸಂಸ್ಥಾಪಕರಾಗಿದ್ದರು. ಅವರು ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದು, […]
ಬೆಂಗಳೂರು: ಲಂಚ ಪಡೆವಾಗ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್!

ಬೆಂಗಳೂರು : ಲಂಚ ಪಡೆಯುವಾಗ ಇನ್‌ಸ್ಪೆಕ್ಟರ್ ಒರ್ವರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ವರದಿಯಾಗಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಎಂಬಾತ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್ ಎಂದು ಗುರುತಿಸಲಾಗಿದೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್‌ಸ್ಪೆಕ್ಟರ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ […]