ಕುಂದಾಪುರದ ಶ್ರೀ ವೆಂಕಟರಮಣ ಪಿ.ಯು. ಕಾಲೇಜಿನಲ್ಲಿ ಉಪನ್ಯಾಸಕರ ನೇಮಕಾತಿ

ಉಡುಪಿ:ಕುಂದಾಪುರದ ಶ್ರೀ ವೆಂಕಟ್ರಮಣ ಪಿ.ಯು. ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರ 2 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಂ.ಎಸ್‌.ಸಿ./ಬಿ.ಎಡ್ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅನುಭವಿಗಳಿಗೆ ಆದ್ಯತೆ, ಫ್ರೆಶರ್ಸ್‌ಗೂ ಅವಕಾಶವಿದೆ. ಅರ್ಹರಿಗೆ ಆಕರ್ಷಕ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಫೆಬ್ರವರಿ 2026ರೆಸ್ಯೂಮ್ ಕಳುಹಿಸಿ: [email protected] 📞7795055376

ಕುಂದಾಪುರ:ಫೆ.20 ರಂದು ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

ಹೆಮ್ಮಾಡಿ:ಜನತಾ ಪಿಯು ಕಾಲೇಜು ಹೆಮ್ಮಾಡಿ ಕುಲಾಲ ಸಮಾಜ ಸುಧಾರಕ ಸಂಘ (ರಿ.),ಕುಂದಾಪುರ ಹಾಗೂ ಜೆ ಸಿ ಐ ಕುಂದಾಪುರ ಸಿಟಿ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ (ನಿ.), ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆದಿ.20-02-2026 ಶುಕ್ರವಾರ ಬೆಳಗ್ಗೆ 10:00 ರಿಂದ 5:00 ರವರೆಗೆ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನಡೆಯಲಿದೆ. ಟೀಮ್ ಈಶ್ವರ್ ಮಲ್ಪೆಯವರು […]

ಇನ್ಮುಂದೆ ಸರಕಾರಿ ವೈದ್ಯರು ಖಾಸಗಿ ಒಪಿಡಿಯಲ್ಲಿ ಮಾತ್ರ ಸೇವೆ‌ ನೀಡಬೇಕು: ಸರಕಾರದ ಆದೇಶ!

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ವೈದ್ಯರು ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ (ಒಪಿಡಿ) ವಿಭಾಗದಲ್ಲಿ ಮಾತ್ರ ಕೆಲಸ ಮಾಡಬಹುದು ಎಂದು ಆರೋಗ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಈ ಸಂಬಂಧ ಪರಿಷ್ಕೃತ ಆದೇಶವನ್ನು ಇಲಾಖೆ ಹೊರಡಿಸಿದೆ. ಸರ್ಕಾರಿ ಆದೇಶಗಳ ಪ್ರಕಾರ, ಸರ್ಕಾರಿ ವೈದ್ಯರು ನಿಗದಿತ ಅವಧಿ ಬಳಿಕ ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ಕಾರ್ಯನಿರ್ವಹಿಸಲು ಅವಕಾಶವಿದ್ದು, ಈ ಕೆಲಸವು ಸರ್ಕಾರಿ ಆಸ್ಪತ್ರೆಯಲ್ಲಿನ ಕರ್ತವ್ಯಗಳಿಗೆ ಅಡ್ಡಿಯಾಗಬಾರದೆಂಬ ನಿಯಮವಿದೆ. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳ ಚಿಕಿತ್ಸೆಯಲ್ಲಿ ತೊಡಗುವುದರಿಂದ, ಸರ್ಕಾರಿ ಆಸ್ಪತ್ರೆಗಳಲ್ಲಿ ಅವರ […]

ಅಪಾಯದಲ್ಲಿದೆ ‘ಪಶ್ಚಿಮಘಟ್ಟ’ – ವರದಿ ಹೇಳಿದ ಸತ್ಯವೇನು?

ಧಾರವಾಡ: ಕರ್ನಾಟಕದ ಏಳು ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಎರಡು ದಶಕಗಳ ಅವಧಿಯಲ್ಲಿ 1,200ಕ್ಕೂ ಹೆಚ್ಚು ಭೂಕುಸಿತಗಳು ಸಂಭವಿಸಿರುವುದಾಗಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯ ಪ್ರಾಧ್ಯಾಪಕರು ನಡೆಸಿದ ಮಹತ್ವದ ಅಧ್ಯಯನ ಬಹಿರಂಗಪಡಿಸಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಶೇ. 60.7ರಷ್ಟು ಭೂಕುಸಿತ ಸಂಭವಿಸುವ ಸಂಭಾವ್ಯ ಅಪಾಯವಿದೆ ಎಂಬ ಆತಂಕಕಾರಿ ಅಂಶವನ್ನೂ ಈ ಅಧ್ಯಯನ ಉಲ್ಲೇಖಿಸಿದೆ. ಸಂಶೋಧನಾ ವರದಿ ಏನಿದೆ?:ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಎರಡು ವರ್ಷಗಳ ಹಿಂದೆ ಸಂಭವಿಸಿದ ವಿನಾಶಕಾರಿ ಗುಡ್ಡ […]

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್‌: ಉದ್ಯಮಿ ಹಾಗೂ ಬ್ಯಾಂಕ್‌ ವ್ಯವಸ್ಥಾಪಕನ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್‌ಗಳನ್ನು ಹಂಚಿಕೊಂಡ ಇಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಕುಂದಾಪುರ ಶಾಖೆಯ ವ್ಯವಸ್ಥಾಪಕ, ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ನಿವಾಸಿ ಸಂತೋಷ ಕುಮಾರ್ ಶೆಟ್ಟಿ(56) ಹಾಗೂ ಕಲ್ಪತರು ಇಂಡಸ್ಟ್ರೀಸ್ ಮಾಲೀಕ, ಕೋಟೇಶ್ವರ ಹಾಲಾಡಿ ರೋಡ್‌ನ ಕೆ.ನಾಗರಾಜ(62) ಬಂಧಿತ ಆರೋಪಿಗಳು. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಧರ್ಮಗಳ ಮಧ್ಯೆ ದ್ವೇಷ ಹರಡಿಸುವಂತಹ ವಿಡಿಯೋ ಹಾಕಿದ ಬಗ್ಗೆ ಇವರಿಬ್ಬರ ವಿರುದ್ಧ ಜ.29ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಡಿವೈಎಸ್ಪಿ […]