ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ನೇಮಕ

ಉಡುಪಿ: ಪೋಪ್ ಲಿಯೋ XIV ಅವರು ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರನ್ನು ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಅವರು ಪ್ರಸ್ತುತ ಶಿರ್ವದ ಆರೋಗ್ಯ ಮಾತಾ ದೇವಾಲಯದ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ನೇಮಕಾತಿಯನ್ನು ಶನಿವಾರ, ಜನವರಿ 31, 2026ರಂದು ರೋಮ್ನಲ್ಲಿ ಮಧ್ಯಾಹ್ನ 12 ಗಂಟೆಗೆ (ಭಾರತೀಯ ಸಮಯ ಸಂಜೆ 4.30ಕ್ಕೆ) ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಅದೇ ಸಮಯದಲ್ಲಿ ಉಡುಪಿ ಜಿಲ್ಲೆಯ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಪ್ರಕಟಿಸಲಾಯಿತು. ವಂದನೀಯ ರೆವ. ಫಾ. (ಡಾ.) ಲೆಸ್ಲಿ […]
ಕೊಡಿಬೆಂಗ್ರೆ ದೋಣಿ ದುರಂತ ಪ್ರಕರಣ: ಬೋಟ್ ಮಾಲೀಕ ಸಹಿತ ಮೂವರ ಬಂಧನ

ಉಡುಪಿ: ಕೊಡಿಬೆಂಗ್ರೆ ಸಮೀಪ ಸಮುದ್ರದಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೋಟ್ ಮಾಲೀಕರಾದ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮದ ನಿವಾಸಿಗಳಾದ ಸುಹಾಸ್ ಶ್ರೀಯಾನ್(23) ಮತ್ತು ಸುಫಿಯಾನ್(20) ಹಾಗೂ ಬೋಟ್ ಚಾಲಕ ಕೋಡಿ ಗ್ರಾಮದ ನಿವಾಸಿ ವಾಸು ಮೆಂಡನ್(52̧) ಬಂಧಿತ ಆರೋಪಿಗಳು. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜ. 26ರಂದು ಬೆಳಿಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಮೂವರು ಮೃತಪಟ್ಟಿದ್ದರು. ಪ್ರಸಾಸೋದ್ಯಮ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದಿರುವುದು ಕಂಡುಬಂದಿದೆ. ಅಲ್ಲದೆ, ಬೋಟ್ ಪ್ರವಾಸಿಗರ […]
ನಾಳೆ (ಫೆ.1) ಕೇಂದ್ರ ಬಜೆಟ್ ಮಂಡನೆ: ಕರಾವಳಿ ಜನರಿಂದ ಭಾರೀ ನಿರೀಕ್ಷೆ!

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ (ಭಾನುವಾರ) ಒಂಭತ್ತನೆಯ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕರಾವಳಿ ಜನರಿಂದ ಬಹಳಷ್ಟು ನಿರೀಕ್ಷೆಗಳಿವೆ. ಹೆಜಮಾಡಿ ಬಂದರು ಅಭಿವೃದ್ಧಿ, ಮಲ್ಪೆ ಬಂದರು ಅಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ಫ್ಲೈ ಓವರ್ ಕಾಮಗಾರಿ ಮತ್ತು ಕಟಪಾಡಿ ಜಂಕ್ಷನ್ ಅಂಡರ್ ಪಾಸ್ ಕಾಮಗಾರಿಗೆ ಹೆಚ್ಚಿನ ಅನುದಾನ ಒದಗಿಸಬೇಕೆಂಬುವುದು ಕರಾವಳಿಗರ ಪ್ರಮುಖ ಬೇಡಿಕೆಯಾಗಿದೆ. ನಾಳೆ ಮಂಡನೆಯಾಗುವ ಕೇಂದ್ರ ಬಜೆಟ್ ನಲ್ಲಿ ಹೆಜಮಾಡಿ ಬಂದರಿಗೆ ಇನ್ನಷ್ಟು ಅನುದಾನ ಒದಗಿಸಿ […]
ಕುಂದಾಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ನೋಡು ನೋಡುತ್ತಿದ್ದಂತೆ ಸುಟ್ಟು ಕರಕಲಾದ ಕಾರು!

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣಚಾಗಿ ಬೆಂಕಿಗಾಹುತಿಯಾದ ಘಟನೆ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಅವರಿಗೆ ಸೇರಿದ ಕಾರು ಇದಾಗಿದ್ದು, ಕಾರ್ಯನಿಮಿತ್ತ ಬೆಳಿಗ್ಗೆ ಆಲೂರಿಗೆ ತೆರಳಿದ್ದ ಅವರು ಸುಮಾರು 10 ಗಂಟೆಯ ವೇಳೆಗೆ ಅಲ್ಲಿಂದ ಕುಂದಾಪುರದತ್ತ ಮರಳುತ್ತಿದ್ದರು. ಈ ವೇಳೆ ಕಾರಿನ ಮುಂಭಾಗದಿಂದ ಶಬ್ದ ಸಹಿತ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಭಾಸ್ಕರ್ ಆಚಾರ್ […]
ಮುಕ್ತವ್ಯಾಪಾರ ಒಪ್ಪಂದಕ್ಕೆ ಬೆಂಬಲದ ಅಗತ್ಯವಿದೆ: ವಿಶ್ವಸಂಸ್ಥೆ

ವಿಶ್ವಸಂಸ್ಥೆ: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇ.ಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು (ಎಫ್‌ಟಿಎ) ಉಲ್ಲೇಖಿಸಿದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಬಹು ಧ್ರುವೀಕರಣವನ್ನು ಬೆಂಬಲಿಸುವ ಅಗತ್ಯವನ್ನು ಒತ್ತಿ ಹೇಳಿದರು.ಯಾವುದೋ ಒಂದು ಶಕ್ತಿಯಿಂದ ಜಾಗತಿಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ ಎಂದು ಅಮೆರಿಕ ಮತ್ತು ಚೀನಾವನ್ನು ಉಲ್ಲೇಖಿಸಿ ಹೇಳಿದರು. ‘ಸದ್ಯದ ಪರಿಸ್ಥಿತಿಯಲ್ಲಿ ಅಮೆರಿಕವು ವಿಶ್ವದ ಶಕ್ತಿಶಾಲಿ ರಾಷ್ಟ್ರ ಎಂಬುದು ಸ್ಪಷ್ಟವಾಗಿದೆ. ವಿಶ್ವವು ಎರಡು ಧ್ರುವಗಳಾಗಿ ವಿಂಗಡಣೆಯಾಗಿದೆ. ಒಂದು ಬದಿಯಲ್ಲಿ ಚೀನಾ ಹಾಗೂ ಇನ್ನೊಂದು ಬದಿಯಲ್ಲಿ ಅಮೆರಿಕ ದೇಶಗಳು […]