ರಾಷ್ಟ್ರೀಕೃತ ಬ್ಯಾಂಕ್​ ಅಧಿಕಾರಿಗಳೊಂದಿಗೆ ಸಭೆ: ಸಾಲ ಸೌಲಭ್ಯ ಯೋಜನೆ ನಿರ್ಲಕ್ಷ್ಯ ಮಾಡದೆ ನ್ಯಾಯಯುತವಾಗಿ ಸ್ಪಂದಿಸಬೇಕು; ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಷ್ಟ್ರೀಕೃತ ಬ್ಯಾಂಕ್​ಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಲ ಸೌಲಭ್ಯ ಹಾಗೂ ಯೋಜನೆಯ ಲಾಭ ಪಡೆಯಲು ಬರುವ ಗ್ರಾಹಕರಿಗೆ ಅನಗತ್ಯವಾಗಿ ಕಾಯಿಸಬಾರದು. ಬಡವರ ಕಲ್ಯಾಣ ಯೋಜನೆಗಳಿಗೆ ಸಂಬಂಧಪಟ್ಟಂತೆ ಸಾಲ ಸೌಲಭ್ಯ, ನಿರಾಕ್ಷೇಪಣಾ ಪತ್ರ, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಸಾಲ, ಪಿಎಂಇಜಿಪಿ, ಸ್ವನಿಧಿ, ಮುದ್ರಾ ಯೋಜನೆ ನಿರ್ಲಕ್ಷ್ಯ ಮಾಡದೆ ನ್ಯಾಯಯುತವಾಗಿ ಸ್ಪಂದಿಸಬೇಕು ಎಂದು ಬ್ಯಾಂಕ್​ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಾಕೀತು ಮಾಡಿದರು. ಉಡುಪಿ ಜಿಪಂನ ಡಾ. ವಿ.ಎಸ್​ ಆಚಾರ್ಯ ಸಭಾ ಭವನದಲ್ಲಿ ಬ್ಯಾಂಕ್​ ಆಫ್​ […]

ಉಡುಪಿ:ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ. ಕೆ

ಉಡುಪಿ: ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ರಾಹಕರಿಗೆ ಸಿ.ಎನ್.ಜಿ ಗ್ಯಾಸ್ ವಿತರಣಾ ಕೇಂದ್ರಗಳಲ್ಲಿ ವಾಹನಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸುಗಮವಾಗಿ ಗ್ಯಾಸ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿ.ಎನ್.ಜಿ ಗ್ಯಾಸ್ ಸರಬರಾಜಿನಲ್ಲಿ ಉಂಟಾಗುವ ಸಮಸ್ಯೆಯನ್ನು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಸಿ.ಎನ್. ಜಿ ಗ್ಯಾಸ್ ಬಳಸಿ ವಾಹನ […]