ಉಡುಪಿ:ಫೆಬ್ರವರಿ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸಮಾವೇಶ : ಅಶೋಕ್ ಕುಮಾರ್ ಕೊಡವೂರು

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪಕ ಪ್ರಚಾರಕ್ಕಾಗಿ ಹಾಗೂ ತಳಮಟ್ಟದಲ್ಲಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ತಾಲೂಕು ಮಟ್ಟದ ಸಮಾವೇಶವನ್ನು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯ ಸರ್ಕಾರವು […]
ದ. ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವತಿಯಿಂದ 1455 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ.

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಇದರ ವತಿಯಿಂದ ಮಲ್ಪೆ ಏಳೂರು ಮೊಗವೀರ ಭವನದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲೆಯ 1455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉಡುಪಿಯ ಖ್ಯಾತ ಮನೋ ವೈದ್ಯರಾದ ಡಾ. ಪಿ. ವಿ. ಭಂಡಾರಿ ಉದ್ಘಾಟಿಸಿದರು. . ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವನದಲ್ಲಿ ಯಶಸ್ವಿಯಾಗಲು ಶೈಕ್ಷಣಿಕ ಸಾಧನೆಯ ಜೊತೆ ಜೊತೆಗೆ ಸವಾಲುಗಳನ್ನು […]
ಉಡುಪಿ:ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನ : ಮನ್ಮಹಾರಥೋತ್ಸವ

ಉಡುಪಿ: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ 2026 ನೇ ಸಾಲಿನ ವಾರ್ಷಿಕ ಮಹೋತ್ಸವವು ಫೆಬ್ರವರಿ 10 ರಿಂದ 16 ರ ವರೆಗೆ ನಡೆಯಲಿದೆ. ಫೆ. 10 ರಂದು ಬೆಳಗ್ಗೆ 9 ರಿಂದ ಬಾರಾಳಿ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಗಣಹೋಮ, ಫೆ. 11 ಹಾಗೂ 12 ರಂದು ವಿಶೇಷ ಪೂಜೆ ಹಾಗೂ ರಂಗಪೂಜೆಗಳು, ಫೆ. 13 ರ ರಾತ್ರಿ 9 ರಿಂದ ಕೆಂಡಸೇವೆ, ಫೆ. 14 ರಂದು ಮಧ್ಯಾಹ್ನ 12.30 ರಿಂದ ಶ್ರೀ ಮನ್ಮಹಾರಥೋತ್ಸವ ಹಾಗೂ […]
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ದಾಖಲೆ ಮೊತ್ತದ ಹಣ ಸಂಗ್ರಹ!

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39 ಕೋಟಿ ರೂ.ಗಳ ಹುಂಡಿ ಸಂಗ್ರಹ ದಾಖಲಾಗಿದೆ. ದೇವಾಲಯಕ್ಕೆ 350 ಗ್ರಾಂ ಚಿನ್ನ ಮತ್ತು 1,670 ಗ್ರಾಂ ಬೆಳ್ಳಿ ಕಾಣಿಕೆಯಾಗಿ ಬಂದಿತ್ತು. ಡಿಸೆಂಬರ್ 2025 ರಲ್ಲಿ 1.64 ಕೋಟಿ ರೂ., ಮತ್ತು 695 ಗ್ರಾಂ ಚಿನ್ನ ಮತ್ತು 2,985 ಗ್ರಾಂ ಬೆಳ್ಳಿ ಸಂಗ್ರಹವಾಗಿತ್ತು. ಒಟ್ಟಾರೆಯಾಗಿ, ಕಳೆದ ಎರಡು ತಿಂಗಳಲ್ಲಿ 3.03 ಕೋಟಿ ರೂ.ಗಳ ಸಂಗ್ರಹವು ಒಂದು ರೀತಿಯ ದಾಖಲೆಯಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಕಳೆದ […]
ಉಡುಪಿ: ಬೈಕ್ ಅಪಘಾತ – ಸಹಸವಾರೆ ಮೃತ್ಯು.

ಉಡುಪಿ: ಬೈಕಿನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಮೃತಪಟ್ಟ ಘಟನೆ ಜ.30ರಂದು ಸಂಜೆ ವೇಳೆ ಕಿನ್ನಿಮುಲ್ಕಿ ಜಾಯಿ ವೀಲ್ ಅಲೈನ್‌ಮೆಂಟ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಬಾಗೀರಥಿ(53) ಎಂದು ಗುರುತಿಸಲಾಗಿದೆ. ರಜತ್ ಆಚಾರ್ಯ ಎಂಬವರು ತನ್ನ ಬೈಕಿನಲ್ಲಿ ತಾಯಿ ಬಾಗೀರಥಿ ಅವರನ್ನು ಕುಳ್ಳಿರಿಸಿಕೊಂಡು ಕಟಪಾಡಿ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದು, ಈ ವೇಳೆ ಬೈಕ್ ಸ್ಕಿಡ್ ಆಗಿ ನಿಯಂತ್ರಣ ತಪ್ಪಿ ಬಿತ್ತೆನ್ನಲಾಗಿದೆ. ಇದರಿಂದ ಬೈಕ್ ಸವಾರ ಮತ್ತು ಸಹ ಸವಾರೆ ಬೈಕ್ ಸಮೇತ ರಸ್ತೆಗೆ ಬಿದ್ದು […]