ಮಲ್ಪೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ಉಡುಪಿ: ಮಲ್ಪೆ ಬೀಚ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಶಾ ಯಾನೆ ಸುಮಿತ್ರ ಕೃಷ್ಣ ಮತ್ತು ರೇಖಾ ದಾನಪ್ಪ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ವಾರೆಂಟ್ ಜಾರಿ ಮಾಡಲಾಗಿತ್ತು. ಮಲ್ಪೆ ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ. 31ರಂದು […]

₹49 ಲಕ್ಷ ವೆಚ್ಚದ ಕಲ್ಸಂಕ ಫ್ರೀ ಲೆಫ್ಟ್ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಉಡುಪಿ: ನಗರಸಭೆಯ ಮೂಲಕ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ ಜಂಕ್ಷನ್ ನಲ್ಲಿ ಅಂಬಾಗಿಲು ತಿರುವು ಸೇತುವೆ ಅಗಲೀಕರಣ ( ಫ್ರೀ ಲೆಫ್ಟ್ ) ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಉಡುಪಿ ನಗರದ ವಾಹನ ದಟ್ಟಣೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬಹು ವರ್ಷಗಳ ಬೇಡಿಕೆಯಾಗಿದ್ದ ಫ್ರೀ ಲೆಫ್ಟ್ ಕಾಮಗಾರಿಗೆ ನಗರಸಭೆಯ ಮೂಲಕ 49 ಲಕ್ಷ ವೆಚ್ಚದಲ್ಲಿ ಅನುದಾನ […]

ಬಡಗಬೆಟ್ಟು ಸೊಸೈಟಿಯಿಂದ ಗ್ರಾಹಕರ ಸಮಾವೇಶ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಗ್ರಾಹಕರ ಸಮಾವೇಶವನ್ನು ಉಡುಪಿ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಕರಾವಳಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಇಡೀ ದೇಶಕ್ಕೆ ಮಾದರಿಯಾಗುವಂತೆ ಬೆಳೆದುನಿಂತಿದೆ. ಇಲ್ಲಿನ ಹಿರಿಯ ಸಹಕಾರಿಗಳ ಚಿಂತನೆ, ಕಲ್ಪನೆಯಿಂದ ಇಡೀ ದೇಶದ ಸಹಕಾರಿ ಕ್ಷೇತ್ರಕ್ಕೆ ಅನುಕೂಲವಾಗಿದೆ. ಸಹಕಾರಿ ಸಂಸ್ಥೆಗಳಲ್ಲಿ ಆಡಳಿತ ಮಂಡಳಿ, ನೌಕರರು ಹಾಗೂ ಗ್ರಾಹಕರು ಒಂದಾಗಿ ಕೆಲಸ ಮಾಡಿದರೆ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದರು. ಮಣಿಪಾಲ […]

ಉಡುಪಿ: ಪ್ರತಿಷ್ಠಿತ ಸಂಸ್ಥೆಗೆ ಯುವಕರು ಬೇಕಾಗಿದ್ದಾರೆ.

ಉಡುಪಿ: ಉಡುಪಿಯ ಬನ್ನಂಜೆ ನಾರಾಯಣಗುರು ಸಂಕೀರ್ಣ ದಲ್ಲಿರು ಪ್ರತಿಷ್ಠಿತ ಸಂಸ್ಥೆ ಭಾರತ್ ಮಾರ್ಕೆಟಿಂಗ್ ಡಿಸ್ಟ್ರಿಬ್ಯೂಟರ್’ನಲ್ಲಿ ಸೇಲ್ಸ್’ಗೆ ಯುವಕರು ಬೇಕಾಗಿದ್ದಾರೆ. ವಿದ್ಯಾರ್ಹತೆ ಅವಶ್ಯಕತೆ ಇರುವುದಿಲ್ಲ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಸಂಪರ್ಕಿಸಬಹುದು: 9620718454, 6364318653

ಬ್ರಹ್ಮಾವರ ಎಚ್‌ಎಂಸಿ ಯುನೈಟೆಡ್ ಕ್ರಿಕೆಟ್ ಟ್ರೋಫಿ:ಅದೃಷ್ಟದ ಆಯ್ಕೆಯಲ್ಲಿ ಪಂಚಜನ್ಯ ವಿನ್ನರ್, ಜಯಕರ್ನಾಟಕ ರನ್ನರ್‌ಅಪ್

ಉಡುಪಿ: ಸಾಕಷ್ಟು ವಿವಾದಗಳಿಗೆ ಕಾರಣವಾಗಿ ಅರ್ಧದಲ್ಲಿ ರದ್ದಾಗಿದ್ದ ಬ್ರಹ್ಮಾವರ ಎಚ್‌ಎಂಸಿ ಯುನೈಟೆಡ್ ಟೆನಿಸ್ ಬಾಲ್ ಕ್ರಿಕೆಟ್ ಟ್ರೋಫಿಯ ವಿಜೇತ ತಂಡಗಳನ್ನು ಸೋಮವಾರ ಅದೃಷ್ಟದ ನಾಣ್ಯ ಚಿಮ್ಮುವ ಮೂಲಕ ಆಯ್ಕೆ ಮಾಡಲಾಯಿತು. ಈ ಪ್ರಕ್ರಿಯೆಯಲ್ಲಿ ಖುಷಿ ಅಮರ್ ಪಂಚಜನ್ಯ ತಂಡ ವಿನ್ನರ್ ಆಗಿ ಟ್ರೋಫಿಯನ್ನು ತನ್ನದಾಗಿಸಿಕೊಂಡರೆ, ಬೆಂಗಳೂರು ಜಯರ‍್ನಾಟಕ ತಂಡ ರನ್ನರ್‌ಅಪ್ ಪ್ರಶಸ್ತಿಗೆ ಪಾತ್ರವಾಯಿತು. ಉಡುಪಿಯ ಮಣಿಪಾಲ ಇನ್ ಹೊಟೇಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ವಿಜೇತ ಹಾಗೂ ರನ್ನರ್‌ಅಪ್ ತಂಡಗಳೊಂದಿಗೆ ಸೆಮಿಫೈನಲ್ ಪ್ರವೇಶಿಸಿದ್ದ ಇಝಾನ್ […]