ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ: ಡಾ.ಮಂಜುನಾಥ್ ಭಂಡಾರಿ

ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕವಾಗಿದೆ. ಯಾವುದೇ ದೂರದೃಷ್ಟಿಯಿಲ್ಲದ ಬಜೆಟ್ ಇದು. ವಿಕಸಿತ ಭಾರತ ಎಂದು ಬರೀ ಹೇಳಿಕೆಗಳಿಂದ ಕೂಡಿದ್ದು ದೇಶದ ಸಾಮಾನ್ಯ ಜನತೆಗೆ ಮತ್ತೊಮ್ಮೆ ನಿರಾಶೆಯನ್ನುಂಟು ಮಾಡಿದೆ ಎಂದು ಶಾಸಕರು, ಕರ್ನಾಟಕ ವಿಧಾನ ಪರಿಷತ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ಮೇಕೆದಾಟು ಯೋಜನೆಗೆ ಅನುಮತಿ ಇಲ್ಲ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವಿಲ್ಲ.ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ರಾಜ್ಯಕ್ಕೆ ಕೇಂದ್ರ ಸರಕಾರ ಚೊಂಬು ನೀಡಿದೆ. ಬಜೆಟ್‌ನಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಇಲ್ಲ. ದೇಶದ ಮಹಿಳೆಯರು, ರೈತರು […]

ಭವಿಷ್ಯಕ್ಕೆ ಬಲ ನೀಡುವ ಬಜೆಟ್; ವಿಕಸಿತ ಭಾರತದ ಹೊಸ ಅಧ್ಯಾಯ- ಶ್ರೀನಿಧಿ ಹೆಗ್ಡೆ

ಉಡುಪಿ: ಭಾರತದ 2026ರ ಕೇಂದ್ರ ಬಜೆಟ್ ದೇಶದ ಸಮಗ್ರ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಸ್ಪಷ್ಟ ದಿಕ್ಕು ತೋರಿಸುವ ಭವಿಷ್ಯನಿರ್ಮಾಣದ ಬಜೆಟ್ ಆಗಿದೆ ಎಂದು ಜಿಲ್ಲಾ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ತವ್ಯ ಭವನದಲ್ಲಿ ಸಿದ್ಧಗೊಂಡ ಮೊದಲ ಬಜೆಟ್ ಇದಾಗಿದ್ದು, ಉತ್ಪಾದಕತೆ ವೃದ್ಧಿ, ಜನಪಾಲ್ಗೊಳ್ಳಿಕೆ ಹಾಗೂ “ಸಬ್ ಕಾ ಸಾಥ್–ಸಬ್ ಕಾ ವಿಕಾಸ್” ತತ್ವಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡಿರುವುದಕ್ಕಾಗಿ ಮಾನ್ಯ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಯುವಶಕ್ತಿ, […]

ಉಡುಪಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲವಾರು ದಾಳಿ

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಳಿಕ ಯುವಕನೊಬ್ಬನ ಮೇಲೆ ತಲವಾರು ಹಾಗೂ ಕಬ್ಬಿಣದ ಚಯರ್‌ನಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯಲ್ಲಿ ನಡೆದಿದೆ. ತೀವ್ರ ಹಲ್ಲೆಗೊಳಾಗದ ಯುವಕನನ್ನು ಉಡುಪಿ ಕಾಂಗ್ರೆಸ್ ನ NSUI ಉಪಾಧ್ಯಕ್ಷ ಚಿಟ್ಟಾಡಿ ಬೈಲೂರು ನಿವಾಸಿ ಶರತ್ ಕುಂದರ್ (25) ಎಂದು ತಿಳಿದುಬಂದಿದೆ. ಶರತ್ ಕುಂದರ್ ಜ.30 ರಂದು ಸಂಜೆ 9 ಗಂಟೆ ಸುಮಾರಿಗೆ ಸ್ನೇಹಿತನ ಗ್ರಾಂಡ್ ವಿಟಾರಾ ಕಾರಿನಲ್ಲಿ ಮಣಿಪಾಲದ ಹೋಟೆಲ್‌ಗೆ ಊಟಕ್ಕೆ ತೆರಳಿದ್ದರು. ಈ ವೇಳೆ ಹೋಟೆಲ್‌ನಲ್ಲಿ ಶರತ್ […]

ಯೂತ್ ಫ್ರೆಂಡ್ಸ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಪಿತ್ರೋಡಿ: “ಶ್ರೀರಾಮ್ ಟ್ರೋಫಿ- 2026” ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

ಉಡುಪಿ: ಯೂತ್ ಫ್ರೆಂಡ್ಸ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ (ರಿ.) ಪಿತ್ರೋಡಿ ಇವರ ಆಶ್ರಯದಲ್ಲಿ ಉದ್ಯಾವರದ ಬೋಳಾರಗುಡ್ಡೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶನಿವಾರ ಆಯೋಜಿಸಿದ “ಶ್ರೀರಾಮ್ ಟ್ರೋಫಿ- 2026” ಅಂತರ್ ರಾಜ್ಯಮಟ್ಟದ ಆಹ್ವಾನಿತ ಮಹಿಳಾ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀದುರ್ಗಾ ಫ್ರೆಂಡ್ಸ್ ಕಾರ್ಕಳ ತಂಡವು ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ನವ್ಯ ಸ್ಪೈಕರ್ಸ್ ತಂಡ ದ್ವಿತೀಯ, ಆದ್ಯಾ ಸ್ಪೈಕರ್ಸ್ ತಂಡ ತೃತೀಯ ಹಾಗೂ ಸಿದ್ದಿ ವಿನಾಯಕ ಫ್ರೆಂಡ್ಸ್ ಕಟ್ಟೆಗುಡ್ಡೆ ತಂಡವು ಚತುರ್ಥ ಪ್ರಶಸ್ತಿಯನ್ನು ಗೆದ್ದುಕೊಂಡಿತು. […]

ಕೇಂದ್ರ ಬಜೆಟ್ ನಲ್ಲಿ‌ ಕರಾವಳಿ ಜಿಲ್ಲೆಗಳಿಗೆ ಮತ್ತೊಮ್ಮೆ ಚೊಂಬು- ರಮೇಶ್ ಕಾಂಚನ್ ಟೀಕೆ

ಉಡುಪಿ: ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ಕರ್ನಾಟಕ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಪ್ರಕಟಿಸದೆ ಮತ್ತೊಮ್ಮೆ ಚೊಂಬು ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ. ಕರಾವಳಿಯ ಮೀನುಗಾರಿಕೆ, ಪ್ರವಾಸೋದ್ಯಮ ಅಭಿವೃದ್ದಿ, ಬಂದರುಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಭಾರೀ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿತ್ತು ಆದರೆ ಅಂತಹ ಯಾವುದೇ ರೀತಿಯ ನಿರ್ದಿಷ್ಟ ಯೋಜನೆಗಳನ್ನು ವಿತ್ತ ಸಚಿವರು ಕರಾವಳಿ ಜಿಲ್ಲೆಗಳಿಗೆ ನೀಡದೆ ಮತ್ತೊಮ್ಮೆ […]