ಪವಿತ್ರ ಎ.ವಿ ಅವರಿಗೆ ಪಿಎಚ್‌ಡಿ ಪ್ರಧಾನ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರ ಎ.ವಿ ಯವರಿಗೆ ದಾವಣಗೆರೆ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ. ಪವಿತ್ರ ಎ.ವಿ ಯವರು ‘ಸೈಕೋಸೋಷಿಯಲ್ ಡೈಮೆನ್ಶನ್ಸ್ ಆಫ್ ಸುಸೈಡಲ್ ಬಿಹೇವಿಯರ್ ಅಮಾಂಗ್ ರೂರಲ್ ಅಡೊಲೆಸೆಂಟ್ಸ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಗವರ್ನ್ಮೆಂಟ್ ಪ್ರಿಯುನಿವರ್ಸಿಟಿ ಕಾಲೇಜಸ್ ಇನ್ ಕರ್ನಾಟಕ’ ಎಂಬ ವಿಷಯದ ಕುರಿತು ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಲೋಕೇಶ್ ಎಂ. ಯು. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪಡೆದಿದ್ದಾರೆ. ಜ. 30ರಂದು […]

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಜಿತ್ ಆರಾಡಿ, ಉದಯ ಶಂಕರ್ ಆಯ್ಕೆ

ಉಡುಪಿ, ಫೆ. 3: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿಗೆ ಖಾಲಿ ಇದ್ದ ಎರಡು ಸಮಿತಿ ಸದಸ್ಯರ ಹುದ್ದೆಗಳನ್ನು ಫೆ. 3ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರುಗಳಾಗಿ ಉಡುಪಿಯ ಅಜಿತ್ ಆರಾಡಿ ಹಾಗೂ ಬೈಂದೂರಿನ ಉದಯ ಶಂಕರ್ ಪಡಿಯಾರ್ ಅವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, […]

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ

ಉಡುಪಿ, ಫೆ. 3: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025–28ನೇ ಸಾಲಿನ ನೂತನ ಸಮಿತಿಗೆ ಅಧಿಕಾರವನ್ನು ಹಸ್ತಾಂತರಿಸಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ನೂತನ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಸಂಘದ 2021–25ನೇ ಸಾಲಿನ ಲೆಕ್ಕಚಾರವನ್ನು ನಿಕಟಪೂರ್ವ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಸಭೆಗೆ ಮಂಡಿಸಿದರು. ಈ ಅವಧಿಯಲ್ಲಿ ಉಳಿಸಿದ 77,323 ರೂ. ನಗದು ಹಣವನ್ನು ನೂತನ ಕೋಶಾಧಿಕಾರಿ ಹರೀಶ್ […]

ಕೇಂದ್ರ ಬಜೆಟ್ 2047ರ ಮೋದಿ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಧೃಡ ಹೆಜ್ಜೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ರೂ.53.5 ಲಕ್ಷ ಕೋಟಿ ಗಾತ್ರದ 9ನೇ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆಯಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಕೇಂದ್ರ ಬಜೆಟ್ 2026ರ ಕುರಿತು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಜಗತ್ತು ಆರ್ಥಿಕ ಅನಿಶ್ಚಿತತೆಯ ತಲ್ಲಣಗಳಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ದೇಶದ ಜನತೆಯ ಮನಸ್ಸಿನಲ್ಲಿ […]

ನೂತನ ಕಾರ್ಮಿಕ ಸಂಹಿತೆಗೆ ವಿರೋಧ: ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕಾರ್ಮಿಕ ಸಂಘಟನೆ ಬಿಎಂಎಸ್‌ನ್ನು ಹೊರತು ಪಡಿಸಿ ದೇಶದ ಎಲ್ಲಾ 10 ಪ್ರಮುಖ […]