ಕಾರ್ಕಳ: ಅಕ್ರಮ ಸ್ಪೋಟಕ ಬಳಸಿ ಕಲ್ಲುಬಂಡೆ ಸ್ಪೋಟ- ಇಬ್ಬರ ಬಂಧನ

ಉಡುಪಿ: ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಪೋಟಕಗಳನ್ನು ಬಳಸಿ ಕಲ್ಲುಬಂಡೆಗಳನ್ನು ಒಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕಾರ್ಕಳ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ನಿವಾಸಿ ಟಿ.ರವಿಚಂದ್ರ (55 ) ಹಾಗೂ ಆತನ ಮಗ ಪವನ್ ಕುಮಾರ್(31) ಬಂಧಿತ ಆರೋಪಿಗಳು. ಇವರು ಜ.21ರಂದು ಅಕ್ರಮವಾಗಿ ಸ್ಪೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಕುರಿತ ಮಾಹಿತಿಯಂತೆ ಕಾರ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಂತರ ಸೀನ್ ಆಫ್ ಕ್ರೈಮ್ […]
ಉಡುಪಿ: ಹಿಂದೂ ಮಹಿಳೆ- ಮುಸ್ಲಿಂ ಯುವಕನ ಕುರಿತು ಪೋಸ್ಟ್: ಇಬ್ಬರ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಿತೇಶ್ (20) ಮತ್ತು ಹಿತೇಶ್ (19) ಬಂಧಿತರು. ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ಮುಂದುವರೆದಿದೆ.
ಉಡುಪಿ: ಹಿಂದೂ ಮಹಿಳೆ- ಮುಸ್ಲಿಂ ಯುವಕನ ಕುರಿತು ಪೋಸ್ಟ್; ಇಬ್ಬರ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ನಿತೇಶ್ (20) ಮತ್ತು ಹಿತೇಶ್ (19) ಬಂಧಿತರು. ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ಮುಂದುವರೆದಿದೆ.
ಫೆ.7,8 ರಂದು ಮಲೇಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ

ನವದೆಹಲಿ: ವ್ಯಾಪಾರ, ಹೂಡಿಕೆ, ಇಂಧನ ಮತ್ತು ಕಡಲ ಭದ್ರತೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಮಲೇಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಮೋದಿ ಅವರು ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಭಾರತೀಯ ಸಮುದಾಯ, ಕೈಗಾರಿಕೆ ಮತ್ತು ವ್ಯಾಪಾರ ಪ್ರತಿನಿಧಿಗಳೊಂದಿಗೂ ಮೋದಿ ಸಂವಾದ ನಡೆಸಲಿದ್ದಾರೆ ಎಂದಿದೆ. ಭಾರತ–ಮಲೇಷ್ಯಾ ನಡುವಿನ ದ್ವಿಪಕ್ಷೀಯ ಬಾಂಧವ್ಯ 2024ರಲ್ಲಿ ಬಲವರ್ಧನೆಗೊಂಡ ಬಳಿಕ, ಪ್ರಧಾನಿ ಅವರು ಮಲೇಷ್ಯಾಕ್ಕೆ […]
ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ; ಸಹಸವಾರೆ ಸ್ಥಳದಲ್ಲಿ ಮೃತ್ಯು!

ಮಂಗಳೂರು: ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಬಸ್ ಸ್ಕೂಟರ್ ಸಹಸವಾರೆಯ ಮೇಲೆಯೇ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರು ವೃತ್ತದ ಬಳಿ ಬುಧವಾರ ರಾತ್ರಿ 7.45ರ ಸುಮಾರಿಗೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಎಂಬಾಕೆ ಮೃತಪಟ್ಟ ಯುವತಿ. ಈಕೆ ಕಿಶೋರ್(32) ಎಂಬವರೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ಇವರಿದ್ದ […]