ಕಾರ್ಕಳ: ಯುವಕ ನಾಪತ್ತೆ

ಕಾರ್ಕಳ: ಪ್ಲಿಪ್‌ಕಾರ್ಟ್ ಕಂಪೆನಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದ ಮುಂಡ್ಕೂರು ಗ್ರಾಮದ ಯಜ್ಞೇಶ್ ಮಾಧವ ಆಚಾರ್ಯ (39) ಎಂಬವರು ಫೆ.1ರಂದು ಸಂಜೆ ವೇಳೆ ಸಾಲದ ಬಗ್ಗೆ ಪತ್ರ ಬರೆದಿಟ್ಟು ಮನೆಯಿಂದ ಹೋದವರು ಈವರೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ:ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಉಡುಪಿ: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024 (ಜನವರಿ 2024 ರಿಂದ ಡಿಸೆಂಬರ್ 2024) ಹಾಗೂ 2025 (ಜನವರಿ-2025 ರಿಂದ ಡಿಸೆಂಬರ್-2025) ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ”ಗಾಗಿ ಪುಸ್ತಕಗಳನ್ನು ಪ್ರದಾನ ಮಾಡಲು ಉದ್ದೇಶಿಸಲಾಗಿದ್ದು, 2024 ಹಾಗೂ 2025ನೇ ಸಾಲಿನ ಅವಧಿಯಲ್ಲಿ ಅಂದರೆ ಜನವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) […]