ದಾವಣಗೆರೆ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಸನ್ಯಾಸತ್ವ ಸ್ವೀಕಾರ.!

ದಾವಣಗೆರೆ: ನಗರದ ಚೌಕಿಪೇಟೆಯ 26 ವರ್ಷದ ಯುವತಿಯೊಬ್ಬರು ಸಂಸಾರ ತೊರೆದು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಮುಖೇಶ್ ಕುಮಾರ್ ಹಾಗೂ ಸುನೀತಾ ಅವರ ಪುತ್ರಿ ಆಂಚಲ್ ಕುಮಾರಿ (26) ಜೈನ ಧೀಕ್ಷೆ ಪಡೆದಿದ್ದಾರೆ. ಅವರು ಖಾಸಗಿ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದರು. ಅಲ್ಲದೇ ಕಾಲೇಜಿನಲ್ಲಿ ಟಾಪರ್ ಆಗಿದ್ದರು. ಇಂದು (ಫೆ.6) ಸೂರತ್‌ನಲ್ಲಿ ಅವರು ಸನ್ಯಾಸ ಧೀಕ್ಷೆ ಪಡೆದಿದ್ದಾರೆ. ಯುವತಿಯ ಆಯ್ಕೆಯನ್ನು ಕುಟುಂಬಸ್ಥರು ಸಹ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಇತ್ತೀಚಿಗೆ ಆಂಚಲ್ ಕುಮಾರಿಯವರು ಆಧ್ಯಾತ್ಮದ ಕಡೆ ವಾಲಿದ್ದರು. ಸಂಸಾರ ಸುಖಃ ಜೀವನಕ್ಕಿಂತ ಸನ್ಯಾಸತ್ವದ […]
ಮಂಚಿಕೆರೆ ಶ್ರೀ ವಾಸುಕಿ ನಾಗಯಕ್ಷಿ ಸನ್ನಿಧಾನ: 21ನೇ ವರ್ಧಂತಿ ಮಹೋತ್ಸವ ಸಂಪನ್ನ

ಉಡುಪಿ: ಮಂಚಿಕೆರೆ ಶ್ರೀ ವಾಸುಕಿ ನಾಗಯಕ್ಷಿ ಸನ್ನಿಧಾನದ 21ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಶುಕ್ರವಾರ ಸಂಪನ್ನಗೊಂಡಿತು. ವೇದಮೂರ್ತಿ ಅಲೆವೂರು ಮೋಹನ ತಂತ್ರಿಗಳ ನೇತೃತ್ವದಲ್ಲಿ ಆಶ್ಲೇಷಬಲಿ, ನವಕ ಪ್ರದಾನ ಹೋಮ, ಕಳಶಾಭಿಷೇಕ ಪ್ರಸನ್ನ ಪೂಜೆ ನೆರವೇರಿತು. ಸಾವಿರಾರು ಮಂದಿ ಸನ್ನಿಧಾನಕ್ಕೆ ಆಗಮಿಸಿ ನಾಗದೇವರ ದರ್ಶನ ಪಡೆದರು. ಬಳಿಕ ಭೋಜನ ಪ್ರಸಾದ ಸ್ವೀಕರಿಸಿದರು.ಮೂರು ದಿನಗಳ ಕಾಲ ನಡೆದ ಮಹೋತ್ಸವದಲ್ಲಿ ಸ್ಥಳೀಯರು, ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕಾತಿಕ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮ, ಭಕ್ತಿ ಸಂಗೀತ ರಸಮಂಜರಿ, ಕುಣಿತ ಭಜನೆ ಹಾಗೂ […]
ಬೀದಿ ನಾಯಿ ಶೆಲ್ಟರ್ ನಿರ್ಮಾಣಕ್ಕೆ ವಿರೋಧ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಉಪ್ಪೂರು ಗ್ರಾಮಸ್ಥರ ಪ್ರತಿಭಟನೆ

ಉಡುಪಿ: ಬೀದಿ ನಾಯಿ ಶೆಲ್ಟರ್ ನಿರ್ಮಾಣಕ್ಕೆ ವಿರೋಧಿಸಿ ಉಪ್ಪೂರು ಗ್ರಾಮಸ್ಥರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾಡಳಿತವು ಉಪ್ಪೂರಿನಲ್ಲಿ 9 ಎಕರೆ ಪ್ರದೇಶದಲ್ಲಿ ಬೀದಿನಾಯಿಗಳ ಶೆಲ್ಟರ್ ನಿರ್ಮಾಣ ಮಾಡಲು ತಯಾರಿ ನಡೆಸಿದೆ. ಶೆಲ್ಟರ್ ನಿರ್ಮಾಣಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಬೀದಿ ಬಾಯಿಗಳ ಕಾಟದಿಂದ ರೋಸಿ ಹೋಗಿದ್ದ ಜನರಿಗೆ ನೆಮ್ಮದಿ ಕಲ್ಪಿಸುವ ನಿಟ್ಟಿನಲ್ಲಿ ಈ […]
ಉಡುಪಿ: ಬ್ಲ್ಯಾಕ್‌ಸ್ಪಾಟ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ; ಎಸ್ಪಿ ಹರಿರಾಮ್ ಶಂಕರ್

ಉಡುಪಿ: ಜಿಲ್ಲೆಯಲ್ಲಿ ಅತೀ ಹೆಚ್ಚು ಅಪಘಾತ ಸಂಭವಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬ್ಲ್ಯಾಕ್ ಸ್ಪಾಟ್‌ಗಳೆಂದು ಗುರುತಿಸಿರುವ 6 ಕಡೆಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ. ನಗರದ ಕಲ್ಸಂಕ ಮತ್ತು ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಲ್ಲಿ ಈಗಾಗಲೇ ಸಿಗ್ನಲ್‌ಗಳನ್ನು ಅಳವಡಿಸಲಾಗಿದ್ದು ಅವುಗಳು ಕಾರ್ಯನಿರ್ವಹಿಸುತ್ತಿವೆ. ಅಲ್ಲದೇ ದಕ್ಷಿಣ ಹಾಗೂ ಉತ್ತರ ದಿಕ್ಕಿನಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ನಗರ ಪ್ರವೇಶಿಸುವ ಅಂಬಾಗಿಲು ಹಾಗೂ ಬಲಾಯಿಪಾದೆಗಳಲ್ಲಿ ಸಿಗ್ನಲ್ ಅಳವಡಿಕೆ ಕಾರ್ಯಪ್ರಗತಿಯಲ್ಲಿದ್ದು, ಶೇ.60ರಷ್ಟು ಮುಗಿದಿದೆ. […]
ರೂಬಲ್ ಅವರಿಗೆ ಗ್ಲೋಬಲ್ ಟೀಚರ್ ಪ್ರಶಸ್ತಿ ಪ್ರದಾನ

ದುಬೈ: ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದವರಿಗೆ ನೀಡುವ ‘ಗ್ಲೋಬಲ್ ಟೀಚರ್’ ಪ್ರಶಸ್ತಿಯನ್ನು ಭಾರತದ ಶಿಕ್ಷಕಿ ರೂಬಲ್ ನಾಗಿ ಅವರಿಗೆ ಗುರುವಾರ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಒಂದು ಮಿಲಿಯನ್ ಡಾಲರ್ (ಅಂದಾಜು ₹9 ಕೋಟಿ) ನಗದು ಒಳಗೊಂಡಿದೆ. ರೂಬಲ್ ನಾಗಿ ಪ್ರತಿಷ್ಠಾನದಡಿ ಅವರು ಭಾರತದಾದ್ಯಂತ 800 ಕಲಿಕಾ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ. ಕೊಳೆಗೇರಿಗಳ ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ, ಅವುಗಳ ಮೂಲಕ ಸಾಹಿತ್ಯ, ವಿಜ್ಞಾನ, ಗಣಿತ ಹಾಗೂ ಇತಿಹಾಸದ ಪಾಠಗಳನ್ನು ಬೋಧಿಸುತ್ತಿದ್ದಾರೆ. ‘ಶಾಲೆಗೆ ಹೋಗದ ಮಕ್ಕಳಿಗೆ ರಚನಾತ್ಮಕ ಕಲಿಕೆ […]