ಉಡುಪಿ: ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಗಳಿಗೆ 5 ವರ್ಷ ಶಿಕ್ಷೆ

ಕುಂದಾಪುರ: ತಾಲೂಕು ಅಮಾಸೆಬೈಲು ಶಾಲೆಗೆ ಹೋಗುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತೆ ಬಾಲಕಿಯನ್ನು ರಿಕ್ಷಾದಲ್ಲಿ ಯಾವಾಗಲು ಶಾಲೆಗೆ ಕರೆದುಕೊಂಡು ಹೋಗಿ ಕರೆದುಕೊಂಡು ಬರುತ್ತಿದ್ದ ರಿಕ್ಷಾ ಚಾಲಕ ಶರತ್ ಶೆಟ್ಟಿ ಮತ್ತು ಈತನ ಸ್ನೇಹಿತ ಪ್ರಶಾಂತ್ ನಾಯ್ಕ್ ಇವರು ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ನೊಂದ ಬಾಲಕಿ ಶಾಲೆಯ ಅಧ್ಯಾಪಕರಲ್ಲಿ ವಿಷಯವನ್ನು ತಿಳಿಸಿದಂತೆ ಶಾಲೆಯ ಅಧ್ಯಾಪಕರು ಈ ಬಗ್ಗೆ ದಿನಾಂಕ 15-07-2025 ರಂದು ಅಮಾಸೆಬೈಲ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಅಮಾಸೆಬೈಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಉಡುಪಿ:ಫೆ.8 ರಂದು ವಾಹನ ಬಹಿರಂಗ ಹರಾಜು

ಉಡುಪಿ:ಉಡುಪಿ ನಗರ ಠಾಣಾ ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾದ ಕೆ ಎ, 30 ಎಂ 0443 ಜೆನ್ ಕಾರನ್ನು ನ್ಯಾಯಾಲಯದ ಆದೇಶದಂತೆ ಫೆಬ್ರವರಿ 8 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ನಗರ ಠಾಣಾ ಆವರಣದಲ್ಲಿ ಹರಾಜು ಮಾಡಲಾಗುವುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಉಡುಪಿ:ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರುಗಳು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಮಕ್ಕಳ ರಕ್ಷಣೆಗೆ ಸಂಬಂದಿಸಿದ ಕಾಯಿದೆಗಳನ್ನು ಅನುಷ್ಠಾನ ಮಾಡಿ : ಮನು ಪಟೇಲ್

ಉಡುಪಿ:ಮಕ್ಕಳ ರಕ್ಷಣೆಗಾಗಿಯೇ ಅನುಷ್ಠಾನಗೊಳಿಸಲಾದ ಕಾಯಿದೆ ಹಾಗೂ ಕಾರ್ಯಕ್ರಮಗಳಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರುಗಳು ತಮಗಿರುವ ಸಾಮಾಜಿಕ ಹೊಣೆಗಾರಿಕೆಯನ್ನು ಮನಗಂಡು,ಅವುಗಳನ್ನು ತಳ ಹಂತದಿಂದಲೇ ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು […]

ಉಡುಪಿ:ವಸತಿ ಬಹುಮಹಡಿ ಸಮುಚ್ಚಾಲಯಗಳು ಕೊಳಚೆ ನೀರನ್ನು ಶುದ್ಧೀಕರಿಸದೆ ಜಲಮಾಲಿನ್ಯ ಉಂಟು ಮಾಡಿದರೆ ಕಾನೂನು ಕ್ರಮ – ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ:ಬಹುಮಹಡಿ ವಸತಿ ಸಮುಚ್ಚಾಲಯಗಳು ಕೊಳಚೆ ಹಾಗೂ ತ್ಯಾಜ್ಯದ ನೀರನ್ನು ಶುದ್ಧೀಕರಣದ ನಿರ್ವಹಣೆ ಮಾಡುವುದರೊಂದಿಗೆ ಮರು ಬಳಕೆ ಮಾಡಬೇಕು. ಒಂದೊಮ್ಮೆ ಕೊಳಚೆ ನೀರನ್ನು ಶುದ್ಧೀಕರಿಸದೆ ಎಲ್ಲಂದಲ್ಲಿ ನದಿ ತೋಡುಗಳಿಗೆ ಬಿಟ್ಟು ಜಲಮಾಲಿನ್ಯ ಉಂಟು ಮಾಡಿದರೆ ಅಂತವರ ಮೇಲೆ ಮುಂದಿನ ದಿನಗಳಲ್ಲಿ ನಿರ್ದಾಕ್ಷಣವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾ ದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್ ಸಭೆಯ ಅಧ್ಯಕ್ಷತೆ ವಹಿಸಿ […]

ಈ ಸಲವೂ ಕಪ್​ ನಮ್ದೆ; ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಮಣಿಸಿ ಎರಡನೇ ಬಾರಿಗೆ RCB ಚಾಂಪಿಯನ್.!

ಮಹಿಳಾ ಪ್ರೀಮಿಯರ್​ ಲೀಗ್​ 2026ರ ಫೈನಲ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಮಣಿಸುವ ಮೂಲಕ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಎರಡನೇ ಬಾರಿಗೆ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಫೈನಲ್​ ​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ನೀಡಿದ್ದ 204 ರನ್​ಗಳ ಬೃಹತ್​ ಗುರಿಯನ್ನು ಬೆನ್ನತ್ತಿದ್ದ ಆರ್​ಸಿಬಿ ಸ್ಮೃತಿ ಮಂಧಾನ ಮತ್ತು ಜಾರ್ಜಿಯಾ ವೋಲ್​ ಅವರ ಬ್ಯಾಟಿಂಗ್​ ಬಲದಿಂದ 19.4 ಓವರ್​​ಗಳಲ್ಲಿ 6 ವಿಕೆಟ್​ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದರೊಂದಿಗೆ ಎರಡನೇ ಬಾರಿಗೆ ಚಾಂಪಿಯನ್​ ಪಟ್ಟಕ್ಕೇರಿತು. ಈ ಹಿಂದೆ 2024ರಲ್ಲಿ ಇದೇ […]