ಉಡುಪಿ:ಒಳ ಚರಂಡಿ ಕಾಮಗಾರಿ : ಬದಲಿ ವ್ಯವಸ್ಥೆ

ಉಡುಪಿ:ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ವಾರ್ಡಿನ ಶಾರದಾ ದೇವಸ್ಥಾನ ಮುಂಭಾಗದಿಂದ ಪಿ.ಪಿ.ಸಿ ಲೇನ್ ವರೆಗೆ ಒಳ ಚರಂಡಿ ಕಾಮಗಾರಿಯನ್ನು ಪ್ರಾರಂಭಿಸಿರುವುದರಿಂದ ಸದರಿ ರಸ್ತೆಯನ್ನು ಬಂದ್ ಮಾಡಿ ಬದಲಿ ವ್ಯವಸ್ಥೆ ಯನ್ನು ಕಲ್ಪಿಸಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ಅಂಗನವಾಡಿ ಹುದ್ದೆ ಆಯ್ಕೆ ಪ್ರಕ್ರಿಯೆ: ಆಕ್ಷೇಪಣೆ ಆಹ್ವಾನ

ಉಡುಪಿ: ಕುಂದಾಪುರ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಸಹಾಯಕಿಯರ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಮರ್ಪಕ ದಾಖಲೆಗಳೊಂದಿಗೆ ಫೆಬ್ರವರಿ 12 ಸಂಜೆ 5.30 ರ ಒಳಗಾಗಿ ಕಚೇರಿಗೆ ಸಲ್ಲಿಸಬಹುದು. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು https://udupi.nic.in ನಲ್ಲಿ ವೀಕ್ಷಿಸಬಹುದು ಎಂದು ಕುಂದಾಪುರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ಕೇಂದ್ರ ಪ್ರವಾಸೋದ್ಯಮ ಇಲಾಖೆಯಿಂದ ಜಾಗತಿಕ ಮಟ್ಟದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ದೇಶದಲ್ಲಿ ಸುಸ್ಥಿರ ಹಾಗೂ ಜವಾಬ್ದಾರಿಯುತ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಪ್ರವಾಸೋದ್ಯಮ ಇಲಾಖೆಯು ಜಾಗತಿಕ ಮಟ್ಟದಲ್ಲಿ 50 ಕ್ಕೂ ಹೆಚ್ಚು ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಜಾಗತಿಕ ಪ್ರವಾಸೋದ್ಯಮ ತಾಣ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುಸ್ಥಿರತೆಯನ್ನು ಮುನ್ನೆಲೆಗೆ ತರುವುದು ಮತ್ತು […]

ಉಡುಪಿ:ಪಿ.ಎಂ ಸೂರ್ಯ ಘರ್ ಯೋಜನೆ ಅಳವಡಿಕೆಯಿಂದ ಸೌರ ಶಕ್ತಿಯ ಹೊರತಾದ ಇತರೆ ವಿದ್ಯುತ್ ಶಕ್ತಿಯ ಹೊರೆ ಗಮನಾರ್ಹ ಇಳಿಕೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯು ಸಬ್ಸಿಡಿ ದರದಲ್ಲಿ ಮೇಲ್ಛಾವಣಿಗೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವುದರ ಜೊತೆಗೆ ವಿದ್ಯುತ್ ಶಕ್ತಿಯ ವೆಚ್ಚವನ್ನು ಗಮನಾರ್ಹವಾಗಿ ಕಡಿಮೆ ಮಾಡಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಈ ಯೋಜನೆಯಡಿ ಸೌರ ಶಕ್ತಿಗೆ ಪರಿವರ್ತನೆಯ ಇಂಧನ ಉಳಿಸುವಿಕೆಯನ್ನು ಕಡಿಮೆ […]

ಉಡುಪಿ:ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವುದು ಶಿಕ್ಷಕರ ಜವಾಬ್ದಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಬರುವಂತೆ ಮಾಡುವುದರೊಂದಿಗೆ ಅವರು ಗುಣಮಟ್ಟದ ಶಿಕ್ಷಣವನ್ನು ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಮಾಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ ಮತ್ತು ಮುಖ್ಯ ಶಿಕ್ಷಕರ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ವೃದ್ಧಿಗಾಗಿ ನಡೆದ […]