ಉಡುಪಿ:ಅಂಗನವಾಡಿ ಹುದ್ದೆ ಆಯ್ಕೆ ಪ್ರಕ್ರಿಯೆ: ಆಕ್ಷೇಪಣೆ ಆಹ್ವಾನ

ಉಡುಪಿ: ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಶಿಶು ಅಭಿವೃದ್ದಿ ಯೋಜನಾಧಿಕಾರಿ ಹಾಗೂ ಉಪನಿರ್ದೇಶಕರ ಕಚೇರಿಗಳಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ 12 ರ ಒಳಗಾಗಿ ಆಯಾ ಶಿಶು ಅಭಿವೃದ್ದಿ ಯೋಜನಾಧಿಕಾರಿ ಅಥವಾ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ತಾತ್ಕಾಲಿಕ […]
ಉಡುಪಿ:ಪಂಚ ಗ್ಯಾರಂಟಿ ಅದಾಲತ್ ಹಾಗೂ ಸಮಾವೇಶಕ್ಕೆ ಅಗತ್ಯ ಸಹಕಾರ ನೀಡಿ : ರಮೇಶ್ ಕಾಂಚನ್

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಫೆಬ್ರವರಿ ಎರಡನೇ ವಾರದಲ್ಲಿ ಉಡುಪಿ ತಾಲೂಕು ವ್ಯಾಪ್ತಿಯ ಪಂಚಾಯತ್ ಹಾಗೂ ಉಡುಪಿ ನಗರಸಭೆಯ ವ್ಯಾಪ್ತಿಯ ವಾರ್ಡ್ ಮಟ್ಟದಲ್ಲಿ ಪಂಚ ಗ್ಯಾರಂಟಿ ಅದಾಲತ್ ಹಾಗೂ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು, ಗ್ಯಾರಂಟಿ ಯೋಜನೆಯ ಸದಸ್ಯರುಗಳು ಅಗತ್ಯ ಸಹಕಾರ ನೀಡುವಂತೆ ಉಡುಪಿ ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಅವರು ಶುಕ್ರವಾರ […]
ಉಡುಪಿ:ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ ಹಂತದಲ್ಲಿ ತಳಮಟ್ಟದ ಕಾರ್ಯಕರ್ತರು ಮಕ್ಕಳ ಜೊತೆ ವ್ಯವಹರಿಸಿದರೆ, ಎರಡನೇ ಹಂತದಲ್ಲಿ ಪೊಲೀಸರು ಮಕ್ಕಳ ಜೊತೆ ವ್ಯವಹರಿಸಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಪೊಲೀಸರಿಗೆ ಬಾಲ ನ್ಯಾಯ ಕಾಯ್ದೆಯ ಸ್ಪಷ್ಟ ಅರಿವು ಇರಬೇಕಾಗುತ್ತದೆ. ಮಕ್ಕಳ ಜೊತೆ ಸಂವೇದನೆಯಿಂದ ವ್ಯವಹರಿಸಬೇಕಾಗುವುದರಿಂದ ಇಂತಹ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಂಡು ಪೊಲೀಸರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಹೇಳಿದರು. ಜಿಲ್ಲಾಡಳಿತ, […]
ಉಡುಪಿ:ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಅವರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲ್ಪೆ ಬೀಚ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಕುರಿತು ನಿರ್ಮಿತಿ ಕೇಂದ್ರವು ಯೋಜನಾ ಕಾಮಗಾರಿಗಳ ನೀಲನಕ್ಷೆ ಹಾಗೂ ಅಂದಾಜು […]
ಬಸ್ರೂರು ಅಪ್ಪಣ್ಣ ಹೆಗ್ಡೆ ವಿಧಿವಶ

ಉಡುಪಿ: ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ ಅವರು 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. ಅಪ್ಪಣ್ಣ ಹೆಗ್ಡೆ 1983-85ರ ಅವಧಿಯಲ್ಲಿ ಬೈಂದೂರಿನಿಂದ ಜನತಾ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಆನಂತರ 1988-94ರ ಅವಧಿಗೆ ವಿಧಾನ ಪರಿಷತ್ ಗೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಅಪ್ಪಣ್ಣ ಹೆಗ್ಡೆ […]