ಓಮನ್‌ನಲ್ಲಿ ಭೀಕರ ಸರಣಿ ಅಪಘಾತ: ಕಾಪು ಯುವಕ ಸಹಿತ ಮೂವರು ಮೃತ್ಯು

ಉಡುಪಿ: ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಫೆ.8ರಂದು ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಉಡುಪಿ ಕಾಪು ಸಮೀಪದ ಉಚ್ಚಿಲ ಕಲತ್ತೂರು ನಿವಾಸಿ ಚೇತನ್ (26) ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ನಾಗರಿಕ ರಕ್ಷಣಾ ಮತ್ತು ಆಂಬ್ಯುಲೆನ್ಸ್ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಧೃಡಪಡಿಸಿದ್ದಾರೆ.
ಹೆಜಮಾಡಿ ಮಹಾಲಿಂಗೇಶ್ವರನಿಗೆ ಪುತ್ತಿಗೆ ಶ್ರೀಪಾದರಿಂದ ಸ್ವರ್ಣ ಅಟ್ಟೆ ಪ್ರಭಾವಳಿ ಅರ್ಪಣೆ

ಉಡುಪಿ: ಪಡುಬಿದ್ರಿ ಸಮೀಪದ ಹೆಜಮಾಡಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಮೂರ್ತಿಗೆ ಉಡುಪಿ ಶ್ರೀ ಕೃಷ್ಣ ಮಠದ ವಿಶ್ವಗೀತಾ ಪರ್ಯಾಯೋತ್ಸವದ ಸ್ಮರಣಾರ್ಥವಾಗಿ ಭಕ್ತಿಪೂರ್ವಕವಾಗಿ ಸ್ವರ್ಣ ಅಟ್ಟೆ ಹಾಗೂ ಪ್ರಭಾವಳಿಯನ್ನು ಸಮರ್ಪಿಸಲಾಯಿತು. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಭಗವದ್ಭಕ್ತರ ಸಹಕಾರದಿಂದ ಈ ಸ್ವರ್ಣಖಚಿತ ಅಟ್ಟೆ–ಪ್ರಭಾವಳಿಯನ್ನು ದೇಣಿಗೆಯಾಗಿ ನೀಡಲಾಗಿದ್ದು, ಈ ಸಂಬಂಧ ವಿಶೇಷ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಅಶ್ವತ್ಥ ಕಟ್ಟೆಯಿಂದ ಆರಂಭವಾದ ಭವ್ಯ ಮೆರವಣಿಗೆ ಗ್ರಾಮ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ದೇವಸ್ಥಾನಕ್ಕೆ […]
ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ

ಉಡುಪಿ: ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಹೇಳಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಸಾಸ್ತಾನ ಟೋಲ್ ಗೇಟ್ ನಲ್ಲಿ ಮಾಜಿ ಸೈನಿಕರೊಬ್ಬರನ್ನು ಅವಮಾನಿಸಲಾಯಿತು. ಅಲ್ಲದೇ ಕನ್ನಡಪರ ಸಂಘಟನೆ ವಾಹನವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಅವಮಾನಿಸಿದ್ದಾರೆ. ಹಿಂದಿ ಭಾಷಿಕರಿಂದ ಕನ್ನಡಿಗರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ. ಈ […]
ಕೋಟ: ಫಾರ್ಚೂನರ್ ಕಾರು ಪಲ್ಟಿ – ಚಾಲಕ ಸಹಿತ 6 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ–66ರ ಕುಂದಾಪುರ ತಾಲೂಕಿನ ಕನ್ನುಕೆರೆ, ನವಶಕ್ತಿ ಕಲ್ಯಾಣ ಮಂಟಪದ ಎದುರು ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರು ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಒಟ್ಟು 12 ಮಂದಿ ವಿದ್ಯಾರ್ಥಿಗಳು […]
ಉಡುಪಿ: ಶ್ರೀಮತಿ ಪುಷ್ಪ ಶೆಟ್ಟಿ ನಿಧನ

ಉಡುಪಿ: ಮೂಡನಿಡಂಬೂರು ದಿ.ವಿಠ್ಠಲ್ ಶೆಟ್ಟಿಯವರ ದರ್ಮಪತ್ನಿ ಕೆಮ್ತೂರು ಹೊಸಮನೆ ಕಿನ್ನಿಮೂಲ್ಕಿ ನಿವಾಸಿ ಪುಷ್ಪ ಶೆಟ್ಟಿ (86 ವರ್ಷ) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಮೂಲತಹ ಕೃಷಿಕರಾಗಿದ್ದು , ಹಲವು ವರ್ಷಗಳ ಕಾಲ ಸಾರಿಗೆ ಉದ್ಯಮದಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ. ಇಬ್ಬರು ಪುತ್ರರನ್ನು ಹಾಗೂ ಬಂಧು – ಮಿತ್ರರನ್ನು ಅಗಲಿದ್ದಾರೆ.