ಕೊಲ್ಲೂರು: ಪೋಸ್ಟ್‌ಮೆನ್ ಆತ್ಮಹತ್ಯೆ

ಕೊಲ್ಲೂರು, ಫೆ.10: ಉತ್ತಮ ಕರ್ತವ್ಯ ನಿರ್ವಹಣೆಗೆ ಪ್ರಶಸ್ತಿ ಪಡೆದ ಪೋಸ್ಟ್‌ಮೆನೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.9ರಂದು ಬೆಳಗ್ಗೆ ಕೊಲ್ಲೂರಿನಲ್ಲಿ ನಡೆದಿದೆ.ಮೃತರನ್ನು ಕೊಲ್ಲೂರಿನ ರವೀಂದ್ರ ಎಂಬವರ ಮಗ ಮಂಜುನಾಥ ಕೆ. ಆರ್.(31) ಎಂದು ಗುರುತಿಸಲಾಗಿದೆ. ಕೊಲ್ಲೂರಿನಲ್ಲಿ ಪೋಸ್ಟ್‌ಮೆನ್ ಆಗಿ ಕೆಲಸ ಮಾಡಿಕೊಂಡಿದ್ದ ಇವರಿಗೆ ಸುಮಾರು 4 ತಿಂಗಳ ಹಿಂದೆ ಉತ್ತಮ ಅಂಚೆ ಕರ್ತವ್ಯ ಮಾಡಿದ ಕಾರಣಕ್ಕೆ ಪ್ರಶಸ್ತಿ ದೊರೆತಿತ್ತು. ಬಳಿಕ ಕೊಲ್ಲೂರಿ ನಲ್ಲಿಯೂ ಈ ಬಗ್ಗೆ ಸನ್ಮಾನ ಮಾಡಲಾಗಿತ್ತು.ಇವರು ಇದೇ ವಿಚಾರದಲ್ಲಿ ಮಾನಸಿಕ ಸಮಸ್ಯೆಗೆ ಒಳಗಾಗಿದ್ದ ಇವರು, ಜೀವನದಲ್ಲಿ […]
ಉಡುಪಿ: ಮಹಿಳೆ ನಾಪತ್ತೆ

ಉಡುಪಿ, ಫೆಬ್ರವರಿ 10: ಬೈಂದೂರು ತಾಲೂಕು ಕಿರಿಮಂಜೇಶ್ವರ ದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (31) ಎಂಬ ಮಹಿಳೆಯು ಫೆಬ್ರವರಿ 5 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರೆಗೂ ವಾಪಾಸು ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ. ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ […]
ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ಟ್ವಿಸ್ಟ್; ಮಂಗಳೂರಿನ ಕಾಲೇಜಿಗೆ ಸೇರಲು ಕಿಡ್ನಾಪ್ ಕಥೆ ಕಟ್ಟಿದ ವಿದ್ಯಾರ್ಥಿನಿ.!

ಮಂಗಳೂರು: ಮಂಗಳೂರಿನ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಉದ್ದೇಶದಿಂದ ವಿದ್ಯಾರ್ಥಿನಿಯೊಬ್ಬರು ಅಪಹರಣ ಕಥೆ ಕಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ನಡೆದಿದೆ. ಯುವತಿ ಬ್ಲೇಡ್‌ನಲ್ಲಿ ಸಣ್ಣದಾಗಿ ಕೈ ಕೊಯ್ದುಕೊಂಡು ಕಿಡ್ನ್ಯಾಪ್ ನಾಟಕವಾಡಿದ್ದಳು. ಕಿಡ್ನ್ಯಾಪ್ ಡ್ರಾಮಾ ಮಾಡಿದರೆ ಮನೆಯವರು ಮಂಗಳೂರಿನ ಪಿಯುಸಿ ಕಾಲೇಜಿಗೆ ಸೇರಿಸುತ್ತಾರೆ ಅನ್ನೋ ಪ್ಲ್ಯಾನ್ ಮಾಡಿದ್ದಳು. ನಿನ್ನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಯತ್ನ ಪ್ರಕರಣ ದಾಖಲಾಗಿತ್ತು. ಇಡೀ ದಿನ ಪೊಲೀಸರ ತಂಡದಿಂದ ಕಾರ್ಯಾಚರಣೆ ನಡೆಸಲಾಯಿತು. ಬ್ಯಾಗ್‌ನಲ್ಲಿರೋ ಪುಸ್ತಕಗಳನ್ನು ವಿದ್ಯಾರ್ಥಿನಿ ಮನೆಯಲ್ಲೇ ಸುಟ್ಟು ಹಾಕಿದ್ದಳು. ಬಳಿಕ […]
ಕೇರಳದ ಇನ್ಸ್ಟಾಗ್ರಾಮ್ ಪ್ರಭಾವಿ ‘ಚಿನ್ನು ಪಾಪು’ ನಿಗೂಢ ಸಾವು.!

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ಅಡೂರಿನ ಖ್ಯಾತ ಸಾಮಾಜಿಕ ಮಾಧ್ಯಮ ಪ್ರಭಾವಿ ಚಿನ್ನು ಪಪ್ಪು ಮೃತಪಟ್ಟಿರುವುದು ಪತ್ತೆಯಾಗಿದೆ. ಅವರ ಸಾವಿನ ಸುದ್ದಿ ಹರಡುತ್ತಿದ್ದಂತೆ ಅಭಿಮಾನಿಗಳು ಆಘಾತಗೊಂಡಿದ್ದು ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸುತ್ತಿದ್ದಾರೆ. ಚಿನ್ನು ಪಪ್ಪು ಅಲಿಯಾಸ್ ರೇಷ್ಮಾ(24) ಅವರ ಮೃತದೇಹ ಅವರ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಟುಂಬ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿದಾಗ ಘಟನೆಯ ಬಗ್ಗೆ ಬಹಿರಂಗಗೊಂಡಿದೆ. ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದಾಗ್ಯೂ, ಆಕೆಯನ್ನು ಪರೀಕ್ಷಿಸಿದ ವೈದ್ಯರು […]
ಉಡುಪಿಯಲ್ಲಿ ಆರೋಗ್ಯ ಹಕ್ಕಿನ ಜಾಥಾ- ಮಣಿಪಾಲದ ಟೈಗರ್ ಸರ್ಕಲ್‌ನಿಂದ ಡಿ.ಸಿ. ಕಚೇರಿಯವರೆಗೆ ಪಾದಯಾತ್ರೆ

ಉಡುಪಿ: ಉಡುಪಿಯ ಹಲವಾರು ಪ್ರಗತಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಆರೋಗ್ಯ ಹಕ್ಕಿನಜಾಥಾ ನಡೆಯಿತು. ಫೆಬ್ರವರಿ 2 ರಿಂದ 17 ರವರೆಗೆ ಕರ್ನಾಟಕದಾದ್ಯಂತ ಎಲ್ಲಾ 31 ಜಿಲ್ಲೆಗಳಲ್ಲಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ. ಮಣಿಪಾಲದ ಟೈಗರ್ ಸರ್ಕಲ್‌ನಿಂದ ಡಿ.ಸಿ. ಕಚೇರಿಯವರೆಗೆ ಪಾದಯಾತ್ರೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ನೀಡಲಾಯಿತು. ಎಡಿಸಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು.ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಗುಣಮಟ್ಟದ ಔಷಧಿಗಳು ಲಭ್ಯವಿರಬೇಕು ಎನ್ನುವುದು ಪ್ರಮುಖ ಬೇಡಿಕೆಯಾಗಿತ್ತು. ಉಳಿದಂತೆ ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯಿದೆಯನ್ನು ಜಾರಿಗೆ ತರಬೇಕು.ಕರ್ನಾಟಕದ […]